ಗುಜರಾತ್: ಖಾಸಗಿ ಶಾಲೆಯೊಂದರ ಗೋಡೆ ಕುಸಿದು ಬಿದ್ದಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಗೋಡೆ ಕುಸಿದ ಪರಿಣಾಮ ಓರ್ವ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಡೋದರದ ವಘೋಡಿಯಾ ರಸ್ತೆ ಸಮೀಪದ ಶ್ರೀ ನಾರಾಯಣ ಖಾಸಗಿ ಶಾಲೆಯ ಮೊದಲ ಮಹಡಿಯಲ್ಲಿದ್ದ ತರಗತಿಯ ಗೋಡೆ ಕುಸಿದಿದ್ದು, ಮಧ್ಯಾಹ್ನ 12:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
“ಮಧ್ಯಾಹ್ನ 12:30 ರ ಸುಮಾರಿಗೆ ಘಟನೆ ಸಂಭವಿಸಿದೆ. ದೊಡ್ಡ ಧ್ವನಿ ಬಂದಿತು, ನಂತರ ನಾವು ಸ್ಥಳಕ್ಕೆ ಧಾವಿಸಿದೆವು. ಒಬ್ಬ ವಿದ್ಯಾರ್ಥಿಗೆ ತಲೆಗೆ ಗಾಯವಾಯಿದೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ” ಎಂದು ಶಾಲಾ ಪ್ರಾಂಶುಪಾಲ ರೂಪಲ್ ಶಾ ಹೇಳಿದ್ದಾರೆ.
गुजरात के वडोदरा में पलक झपकते दीवार भरभरा कर गिर पड़ी. कई बच्चे गंभीर रूप से घायल हैं. pic.twitter.com/BSMBzPd27n
— Gagandeep Singh (@GagandeepNews) July 20, 2024
ಇದನ್ನೂ ಓದಿ: ಜಿಮ್ ಟ್ರೈನರ್ನಿಂದಲೇ ಯುವಕನ ಮೇಲೆ ಹಲ್ಲೆ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
ತರಗತಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ಸೆರೆಯಾಗಿದೆ. @GagandeepNews ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಶಾಲಾ ಆಡಳಿತ ಮಂಡಳಿಯ ಬೇಜಾವಬ್ದಾರಿಯ ಬಗ್ಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ