AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮ್ಯಾನ್​ಹೋಲ್​ಗೆ ಬಿದ್ದ ದಂಪತಿ, ಇದು ‘ಪ್ರಧಾನ ಮಂತ್ರಿ ಈಜುಕೊಳ ಯೋಜನೆ’ ಎಂದ ನೆಟ್ಟಿಗರು!

ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿಕೊಂಡಿತ್ತು. ಈ ನಡುವೆ ವೈದ್ಯರನ್ನು ಭೇಟಿಯಾಗಲು ಹೊರಟ್ಟಿದ್ದ ದಂಪತಿ ಬೈಕ್ ಸಹಿತ ಸುಮಾರು ಐದಾರಡಿ ಆಳದ ಮ್ಯಾನ್​ಹೋಲ್​ಗೆ ಬಿದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಇಲ್ಲಿದೆ ನೋಡಿ.

Viral Video: ಮ್ಯಾನ್​ಹೋಲ್​ಗೆ ಬಿದ್ದ ದಂಪತಿ, ಇದು 'ಪ್ರಧಾನ ಮಂತ್ರಿ ಈಜುಕೊಳ ಯೋಜನೆ' ಎಂದ ನೆಟ್ಟಿಗರು!
ಮ್ಯಾನ್​ಹೋಲ್​ಗೆ ಬಿದ್ದ ದಂಪತಿ
TV9 Web
| Updated By: Rakesh Nayak Manchi|

Updated on: Jun 20, 2022 | 9:53 AM

Share

ಮೊದಲೇ ರಸ್ತೆಗಳಲ್ಲಿ ಹೊಂಡಾ ಗುಂಡಿಗಳು, ಈ ನಡುವೆ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಯಲ್ಲಿ ತುಂಬಿದ ನೀರು, ಸಂಚಾರ ನಡೆಸಲು ವಾಹನ ಸವಾರರ ಪರದಾಟ, ವೈದ್ಯರನ್ನು ಭೇಟಿಯಾಗುವ ವೇಳೆ ಬೈಕ್ ಸಹಿತ ಐದಾರಡಿ ಆಳದ ಮ್ಯಾನ್​ಹೋಲ್​ಗೆ ಬಿದ್ದ ದಂಪತಿ, ಇದರ ವಿಡಿಯೋ ಸಾಮಾಜಿಕ ಜಲತಾಣದಲ್ಲಿ ಭಾರಿ ವೈರಲ್, ಇದನ್ನು ”ಪ್ರಧಾನ ಮಂತ್ರಿ ಈಜುಕೊಳ ಯೋಜನೆ” ಎಂದ ನೆಟ್ಟಿಗರು.

ಇದನ್ನೂ ಓದಿ: Viral Video: ದಾಖಲೆಯ ಮಳೆಯ ನಂತರ ಬೆಚ್ಚಿಬೀಳಿಸುವಂತೆ ಗರ್ಜಿಸಿದ ಜಲಪಾತ, ಸೇತುವೆ ಮೇಲಿಂದ ಚಿಮ್ಮಿದ ನೀರು!

ಸುರಿದ ಧಾರಾಕಾರ ಮಳೆಯಿಂದಾಗಿ ಉತ್ತರಪ್ರದೇಶದ ಅಲಿಗಢದ ರಸ್ತೆಯೊಂದರಲ್ಲಿ ನೀರು ತುಂಬಿಕೊಂಡಿತ್ತು. ಅಲ್ಲದೆ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಈ ನಡುವೆ ವೈದ್ಯರನ್ನು ನೋಡಲು ಬಂದ ದಂಪತಿ ದ್ವಿಚಕ್ರ ವಾಹನ ಸಹಿತ ನೀರು ತುಂಬಿದ ಐದಾರಡಿ ಆಳದ ಮ್ಯಾನ್​ಹೋಲ್​ಗೆ ಬಿದ್ದಿದ್ದಾರೆ. ಕೂಡಲೇ ಪಕ್ಕದಲ್ಲಿದ್ದ ವಾಹನ ಸವಾರರು ಮತ್ತು ಸ್ಥಳೀಯರು ಅವರ ನೆರವಿಗೆ ದಾವಿಸಿ ಮ್ಯಾನ್​ಹೋಲ್​ನಿಂದ ದಂಪತಿಯನ್ನು ಮೇಲೆತ್ತಿದ್ದಾರೆ.

ಇದನ್ನೂ ಓದಿ: Viral Video: ಬಾವಿಗೆ ಬಿದ್ದ ಚಿರತೆ, ಅರಣ್ಯಾಧಿಕಾರಿಗಳ ರಕ್ಷಣಾ ಕಾರ್ಯಕ್ಕೆ ನೆಟ್ಟಿಗರ ಶ್ಲಾಘನೆ

ದಂಪತಿ ಮ್ಯಾನ್​ಹೋಲ್​ಗೆ ಬೀಳುವ ಹಾಗೂ ಅವರನ್ನು ರಕ್ಷಣೆ ಮಾಡುವ ವಿಡಿಯೋ ಕ್ಲಿಪ್ ಅನ್ನು Aavish Zaidi ಎಂಬವರು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದು, ಉತ್ತರ ಪ್ರದೇಶದ ಅಲಿಗಢದಲ್ಲಿ ಚಿತ್ರೀಕರಿಸಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರೊಬ್ಬರು “ಪ್ರಧಾನ ಮಂತ್ರಿ ಈಜುಕೊಳ ಯೋಜನೆ” ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ ಮ್ಯಾನ್​ಹೋಲ್​ ಅನ್ನು “ಭೂಗತ ಪಾರ್ಕಿಂಗ್ ಸೌಲಭ್ಯ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ದ್ವಿಚಕ್ರ ವಾಹನದಲ್ಲಿದ್ದವರು ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿ ಮತ್ತು ಅವರ ಪತ್ನಿಯಾಗಿದ್ದು, ಅವರು ವೈದ್ಯರನ್ನು ಭೇಟಿ ಮಾಡಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಕಾಣುವಂತೆ ತಮ್ಮ ದ್ವಿಚಕ್ರ ವಾಹನವನ್ನು ಪಾರ್ಕಿಂಗ್ ಮಾಡಲು ಮುಂದಾಗಿರುವಂತೆ ಕಾಣುತ್ತದೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ