Viral Video: ಭಾರೀ ಮಳೆಗೆ ಮನೆಯ ಮೇಲ್ಛಾವಣಿಯ ಮೇಲೆ ಮೊಸಳೆ ಪತ್ತೆ; ವಿಡಿಯೋ ವೈರಲ್
ಭಾರೀ ಮಳೆಗೆ ಮನೆಯೊಂದರ ಮೇಲ್ಛಾವಣಿಯ ಮೇಲೆ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ. ವಿಡಿಯೋ ಇಲ್ಲಿದೆ ನೋಡಿ.
ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಗುಜರಾತ್ ಸಂಕಷ್ಟಕ್ಕೆ ಸಿಲುಕಿದೆ. ರಾಜ್ಯದ ಪ್ರಮುಖ ನದಿಗಳು ಮತ್ತು ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಅಪಾಯಕಾರಿ ಮಟ್ಟಕ್ಕೆ ಏರಿದೆ. ಈ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು, ರಸ್ತೆಗಳು ಮತ್ತು ರೈಲುಮಾರ್ಗಗಳ ಸಂಚಾರ ಅಸ್ತವ್ಯಸ್ತವಾಗಿದೆ. ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ರಾಜ್ಯಾದ್ಯಂತ 28 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 18,000 ಜನರನ್ನು ಅಧಿಕಾರಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ.
ಇದೀಗ ಭಾರೀ ಮಳೆಗೆ ಮನೆಯೊಂದರ ಮೇಲ್ಛಾವಣಿಯ ಮೇಲೆ ಮೊಸಳೆಯೊಂದು ಕಂಡುಬಂದಿದ್ದು, ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ. @PTI_News ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು,ಸದ್ಯ ಎಲ್ಲೆಡೆ ಹರಿದಾಡುತ್ತಿದೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
VIDEO | Gujarat Rains: Crocodile spotted at roof of a house as heavy rainfall inundate Akota Stadium area of Vadodara.
(Full video available on PTI Videos – https://t.co/n147TvqRQz)#GujaratRains #GujaratFlood pic.twitter.com/FYQitH7eBK
— Press Trust of India (@PTI_News) August 29, 2024
ಇದನ್ನೂ ಓದಿ: ಇದು ಹೊಸ ಶೆಡ್ ಟೀ ಸ್ಟಾಲ್, ಟ್ರೆಂಡ್ ಆಗುತ್ತಿದೆ ಬಾ ಗುರು ಶೆಡ್ ಟೀ ಕುಡಿ
ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ 11 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮತ್ತೊಂದೆಡೆ, ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕ್ರಮಗಳ ಕುರಿತು ಸಿಎಂ ಜೊತೆ ಮಾತಾಡಿ ಕೇಂದ್ರದಿಂದ ಎಲ್ಲ ರೀತಿಯ ಸಹಾಯ ಸಿಗಲಿದೆ ಎಂದು ಭರವಸೆ ನೀಡಿದ್ದಾರೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ