AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೊಂಟ ಮುಟ್ಟಿದ ಯುವಕ; ವೇದಿಕೆ ಮೇಲೆಯೇ ಕಪಾಳಮೋಕ್ಷ ಮಾಡಿದ ಡ್ಯಾನ್ಸರ್!

ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡುತ್ತಿದ್ದ ಕಲಾವಿದೆಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ವೈರಲ್ ಆಗಿದೆ. ಆಕ್ರೋಶಗೊಂಡ ಕಲಾವಿದೆ ವೇದಿಕೆಯಲ್ಲೇ ಯುವಕನಿಗೆ ಕಪಾಳಮೋಕ್ಷ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 'dimpal__choudhary_77' ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಒಂದೇ ದಿನದಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ.

Viral Video: ಸೊಂಟ ಮುಟ್ಟಿದ ಯುವಕ; ವೇದಿಕೆ ಮೇಲೆಯೇ ಕಪಾಳಮೋಕ್ಷ ಮಾಡಿದ ಡ್ಯಾನ್ಸರ್!
ಕಪಾಳಮೋಕ್ಷ ಮಾಡಿದ ಡ್ಯಾನ್ಸರ್Image Credit source: instagram
ಅಕ್ಷತಾ ವರ್ಕಾಡಿ
|

Updated on: Jun 07, 2026 | 4:10 PM

Share

ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡುತ್ತಿದ್ದ ಕಲಾವಿದೆಯೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಡ್ಯಾನ್ಸರ್, ಯುವಕನಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಿರುವ ದೃಶ್ಯ ಇದೀಗ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ವೇದಿಕೆಯ ಸಮೀಪದಲ್ಲಿದ್ದ ಯುವಕನೊಬ್ಬ ಡ್ಯಾನ್ಸರ್ ಜೊತೆ ಅಸಭ್ಯವಾಗಿ ವರ್ತಿಸಿ, ಆಕೆಯ ಸೊಂಟ ಮುಟ್ಟಿರುವುದು ಕಾಣಿಸುತ್ತದೆ. ಇದರಿಂದ ಆಕ್ರೋಶಗೊಂಡ ಕಲಾವಿದೆ ತಕ್ಷಣವೇ ಯುವಕನಿಗೆ ಕಪಾಳಕ್ಕೆ ಹೊಡೆದು ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಈ ವೇಳೆ ಅಲ್ಲಿದ್ದ ಕೆಲವರು ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾಗಿದ್ದು, ಘಟನೆಯ ಸಂಪೂರ್ಣ ದೃಶ್ಯವನ್ನು ಯಾರೋ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಬಳಿಕ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಇದನ್ನೂ ಓದಿ: ಆಟೋ ಬಾಡಿಗೆ 150ರೂ., ಖಾತೆಗೆ ಬಂದಿದ್ದು 15 ಸಾವಿರ; ಪ್ರಯಾಣಿಕನ ಹಣವನ್ನು ಮರಳಿಸಿ ಮಾದರಿಯಾದ ಚಾಲಕ

ಈ ವಿಡಿಯೋವನ್ನು ‘dimpal__choudhary_77‘ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಕೆಲವೇ ಸಮಯದಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಅನೇಕರು ಕಲಾವಿದೆಯ ಧೈರ್ಯವನ್ನು ಮೆಚ್ಚಿಕೊಂಡಿದ್ದು, ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ. ಆದರೆ, ಈ ಘಟನೆ ಎಲ್ಲಿ ನಡೆದಿದೆ ಹಾಗೂ ವಿಡಿಯೋದಲ್ಲಿರುವ ವ್ಯಕ್ತಿಗಳ ಕುರಿತು ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!