ಹೈದರಾಬಾದ್: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಚಿಕನ್ ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ

|

Updated on: Dec 04, 2023 | 2:05 PM

ಹೈದರಾಬಾದ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರು ಆನ್​ಲೈನ್​ನಲ್ಲಿ ಆರ್ಡರ್ ಮಾಡಿದ್ದ  ಚಿಕನ್ ಬಿರಿಯಾನಿಯಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಅಂಬರ್‌ಪೇಟೆಯ ಡಿಡಿ ಕಾಲೋನಿಯ ವಿಶ್ವ ಆದಿತ್ಯ ಎಂಬವರು ಫುಡ್ ಡೆಲಿವರಿ ಆಪ್ ಝೊಮಾಟೊದಲ್ಲಿ ಬಿರಿಯಾನಿ ಆರ್ಡರ್ ಮಾಡಿದ್ದರು.

ಹೈದರಾಬಾದ್: ಆನ್​ಲೈನ್​ ಮೂಲಕ ಆರ್ಡರ್ ಮಾಡಿದ್ದ ಚಿಕನ್ ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ
ಬಿರಿಯಾನಿ
Follow us on

ಹೈದರಾಬಾದ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರು ಆನ್​ಲೈನ್​ನಲ್ಲಿ ಆರ್ಡರ್ ಮಾಡಿದ್ದ  ಚಿಕನ್ ಬಿರಿಯಾನಿಯಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಅಂಬರ್‌ಪೇಟೆಯ ಡಿಡಿ ಕಾಲೋನಿಯ ವಿಶ್ವ ಆದಿತ್ಯ ಎಂಬವರು ಫುಡ್ ಡೆಲಿವರಿ ಆಪ್ ಝೊಮಾಟೊದಲ್ಲಿ ಬಿರಿಯಾನಿ ಆರ್ಡರ್ ಮಾಡಿದ್ದರು.

ಆರ್‌ಟಿಸಿ ಕ್ರಾಸ್‌ ರಸ್ತೆಯಲ್ಲಿರುವ ಬಾವರ್ಚಿ ಹೋಟೆಲ್‌ನಿಂದ ವ್ಯಕ್ತಿ ಆಹಾರ ಆರ್ಡರ್ ಮಾಡಿದ್ದರು. ಝೊಮಾಟೊ ವಿತರಿಸಿದ ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಅಡುಗೆಯವರ ನಿಷ್ಕಾಳಜಿಯೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಬಿರಿಯಾನಿಯಲ್ಲಿ ಸಿಕ್ಕ ಈ ಹಲ್ಲಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ (ಹಿಂದೆ ಟ್ವಿಟರ್) ತೆಲುಗು ಸ್ಕ್ರೈಬ್ ಹೆಸರಿನ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

‘ಬಾವರ್ಚಿ’ಯ ಪ್ಯಾಕೇಜಿಂಗ್ ಅನ್ನು ಸಹ ತೋರಿಸಲಾಯಿತು. ಪ್ಲೇಟ್​ನಲ್ಲಿ ಬಿರಿಯಾನಿ ನಡುವೆ ಹಲ್ಲಿ ಇರುವುದು ಕೂಡ ಕಾಣುತ್ತದೆ.ಹೈದರಾಬಾದಿ ಬಿರಿಯಾನಿ ತಿನ್ನುವ ಆಸೆಯನ್ನು ಬಿಟ್ಟುಬಿಟ್ಟೆ ಎಂದು ಅವರು ಬರೆದುಕೊಂಡಿದ್ದಾರೆ.

ಈ ಪೋಸ್ಟ್​​ನ್ನು ರೀಟ್ವೀಟ್​ ಮಾಡಿದವರೊಬ್ಬರು ಹೈದರಾಬಾದ್​ ಬಿರಿಯಾನಿಯಲ್ಲಿ ಹಲ್ಲಿಗಳು, ಜಿರಳೆಗಳು, ಇಲಿಗಳು ಸಿಗುವುದು ಸಹಜವಾಗಿ ಬಿಟ್ಟಿದೆ ಪ್ರತಿಕ್ರಿಯಿಸಿದ್ದಾರೆ.

ರೆಸ್ಟೋರೆಂಟ್ ಇಂತಹ ಆರೋಪವನ್ನು ಎದುರಿಸುತ್ತಿರುವುದು ಇದೇ ಮೊದಲಲ್ಲ. ಮೇ 2022 ರಲ್ಲಿ, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC) ಅಧಿಕಾರಿಗಳು ಬಿರಿಯಾನಿಯಲ್ಲಿ ಹಲ್ಲಿಗಳು ಕಂಡುಬಂದಿವೆ ಎಂದು ಆರೋಪಿಸಿ ಬಿಜೆಪಿ ಕೌನ್ಸಿಲರ್ ದೂರಿನ ಮೇರೆಗೆ ಅದೇ ಬವರ್ಚಿ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿದ್ದರು.

ಮತ್ತಷ್ಟು ಓದಿ: Viral Video: ಸ್ಮೈಲ್ ಪ್ಲೀಸ್, ಒನ್ ಸೆಲ್ಫಿ : ಸೆಲ್ಫಿಗೆ ಸಖತ್​​​ ಪೋಸ್ ಕೊಟ್ಟ ಶ್ವಾನ

ಕೆಲವು ಬಳಕೆದಾರರು ಸುದ್ದಿಯಲ್ಲಿ ಆಘಾತವನ್ನು ವ್ಯಕ್ತಪಡಿಸುವ GIF ಗಳು ಮತ್ತು ಮೀಮ್‌ಗಳನ್ನು ಪೋಸ್ಟ್ ಮಾಡಿದ್ದಾರೆ. ರೆಸ್ಟೋರೆಂಟ್ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಜೊಮ್ಯಾಟೊ ಸಮಸ್ಯೆಯನ್ನು ಗುರುತಿಸಿದ್ದೇವೆ ಮತ್ತು ಗ್ರಾಹಕರೊಂದಿಗೆ ಮಾತನಾಡಿದ್ದೇವೆ. ನಾವು ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಮತ್ತು ಸೂಕ್ತ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದೆ.

 

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ