Viral Video: ನಡುರಸ್ತೆಯಲ್ಲಿ ವಿಕಲಚೇತನನನ್ನು ಥಳಿಸಿ, ಸ್ಕೂಟಿ ಮುರಿದು ಹಾಕಿದ ದಂಪತಿ; ಶಾಕಿಂಗ್ ವಿಡಿಯೋ ವೈರಲ್

Shocking Video: ಮಾರ್ಚ್ 27ರಂದು ಈ ಘಟನೆ ನಡೆದಿದ್ದು, ದುಷ್ಕರ್ಮಿಗಳಾದ ಜುಗೇಂದ್ರ ಮತ್ತು ಅವರ ಹೆಂಡತಿ ತಮ್ಮ ಸಂಬಂಧಿಯಾಗಿರುವ ವಿಕಲಚೇತನ ವ್ಯಕ್ತಿ ಗಜೇಂದ್ರನ ಮೇಲೆ ಹಲ್ಲೆ ನಡೆಸಿದ್ದಾರೆ.

Viral Video: ನಡುರಸ್ತೆಯಲ್ಲಿ ವಿಕಲಚೇತನನನ್ನು ಥಳಿಸಿ, ಸ್ಕೂಟಿ ಮುರಿದು ಹಾಕಿದ ದಂಪತಿ; ಶಾಕಿಂಗ್ ವಿಡಿಯೋ ವೈರಲ್
ವಿಕಲಚೇತನನಿಗೆ ಥಳಿಸಿದ ದಂಪತಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Mar 29, 2022 | 8:12 PM

ನವದೆಹಲಿ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಝೆವಾರ್ ಪ್ರದೇಶದಲ್ಲಿ ವಿಕಲಚೇತನ ವ್ಯಕ್ತಿಯನ್ನು ಗಂಡ-ಹೆಂಡತಿ ಅಮಾನುಷವಾಗಿ ಥಳಿಸಿದ ಘಟನೆಯ ವಿಡಿಯೋ (Viral Video) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ವ್ಯಕ್ತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಾರ್ಚ್ 27ರಂದು ಈ ಘಟನೆ ನಡೆದಿದ್ದು, ದುಷ್ಕರ್ಮಿಗಳಾದ ಜುಗೇಂದ್ರ ಮತ್ತು ಅವರ ಹೆಂಡತಿ ತಮ್ಮ ಸಂಬಂಧಿಯಾಗಿರುವ ವಿಕಲಚೇತನ ವ್ಯಕ್ತಿ ಗಜೇಂದ್ರನ ಮೇಲೆ ಹಲ್ಲೆ ನಡೆಸಿದ್ದಾರೆ.

ಆರೋಪಿ ಜುಗೇಂದ್ರ ತನ್ನ ಶಾಲೆಯನ್ನು ವಿಕಲಚೇತನನಾದ ಗಜೇಂದ್ರನಿಗೆ ನಡೆಸಲು ನೀಡಿದ್ದನೆಂದು ತಿಳಿದುಬಂದಿದೆ. ಆದರೆ, ಭಾರತವನ್ನು ಕೊರೊನಾ ಸಾಂಕ್ರಾಮಿಕ ರೋಗವು ಆವರಿಸಿದ್ದರಿಂದ ಆತನಿಗೆ ಶಾಲೆಯನ್ನು ಸರಿಯಾಗಿ ನಡೆಸಲು ಸಾಧ್ಯವಾಗಿರಲಿಲ್ಲ. ಆತನ ಶಾಲೆಗೆ ವಿದ್ಯಾರ್ಥಿಗಳು ಬರುತ್ತಿರಲಿಲ್ಲ. ಶಾಲೆ ಸರಿಯಾಗಿ ನಡೆಯುತ್ತಿರಲಿಲ್ಲವಾದ್ದರಿಂದ ಅವರಿಬ್ಬರ ನಡುವೆ ವಾಗ್ವಾದ ನಡೆದು ಈ ಘಟನೆ ನಡೆದಿದೆ. ಜುಗೇಂದ್ರ ಕೂಡ ಗಜೇಂದ್ರನಿಗೆ ಮನಬಂದಂತೆ ಥಳಿಸಿ, ರಸ್ತೆಯಲ್ಲೇ ಆತನ ಸ್ಕೂಟರ್ ಮುರಿದು ಹಾಕಿದ್ದಾನೆ.

ಈ ವಿಡಿಯೋವನ್ನು ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಬಿವಿ ಅವರು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ಪೊಲೀಸರಿಗೆ ವಿಕಲಚೇತನ ದೂರು ನೀಡಿದ್ದಾರೆ ಎಂದು ಹೆಚ್ಚುವರಿ ಡಿಸಿಪಿ ವಿಶಾಲ್ ಪಾಂಡೆ ತಿಳಿಸಿದ್ದಾರೆ. ಆರೋಪಿ ಪತಿ-ಪತ್ನಿ ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: Viral Video: ಮೂರು ಚಿರತೆಗಳನ್ನು ತಬ್ಬಿ ಮಲಗಿದ ವ್ಯಕ್ತಿಯ ವಿಡಿಯೋ ವೈರಲ್; ತಬ್ಬಿಬ್ಬಾದ ನೆಟ್ಟಿಗರು

Shocking Video: ಬೆಂಜ್ ಕಾರ್ಖಾನೆಗೆ ಚಿರತೆ ಮರಿಯ ಸರ್​ಪ್ರೈಸ್​ ವಿಸಿಟ್!; 6 ಗಂಟೆ ಸತಾಯಿಸಿದ ಚಿರತೆಯ ವಿಡಿಯೋ ವೈರಲ್

Published On - 8:11 pm, Tue, 29 March 22

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ