AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸರ್ಕಾರಿ ಆಸ್ಪತ್ರೆಯೊಳಗೆ ವೈದ್ಯರು ಮತ್ತು ಸಿಬ್ಬಂದಿಗಳ ನೃತ್ಯ ಪ್ರದರ್ಶನ; ಕಂಗಲಾದ ರೋಗಿಗಳು

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಗರ್ ರಸ್ತೆಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ಈ ಘಟನೆ ನಡೆದಿದೆ. ಮಹಿಳಾ ಉದ್ಯೋಗಿಯೊಬ್ಬರು ನಿವೃತ್ತಿಯಾದ ಮೇಲೆ ಅವರಿಗೆ ಬೀಳ್ಕೊಡಲು ವೈದ್ಯರು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಗಳು ಈ ರೀತಿ ಆಚರಿಸಿದ್ದಾರೆ ಎಂಬ ವರದಿಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Apr 30, 2024 | 5:54 PM

Share

ಹಾಪುರ್: ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಯೊಳಗೆ ವೈದ್ಯರು ಮತ್ತು ಸಿಬ್ಬಂದಿಗಳು ನೃತ್ಯ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳನ್ನು ಗಮನಿಸದೆ ಒಳಗೆ ನೃತ್ಯ ಮಾಡುತ್ತಿರುವುದು ಸದ್ಯ ಸೋಶಿಯಲ್​ ಮೀಡಿಯಾಗಳಲ್ಲಿ ಟೀಕೆಗೆ ಕಾರಣವಾಗಿದೆ.

ಹಾಪುರ್ ಜಿಲ್ಲೆಯ ಗರ್ ರಸ್ತೆಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ಈ ಘಟನೆ ನಡೆದಿದೆ. ಮಹಿಳಾ ಉದ್ಯೋಗಿಯೊಬ್ಬರು ನಿವೃತ್ತಿಯಾದ ಮೇಲೆ ಅವರ ವಿದಾಯವನ್ನು ವೈದ್ಯರು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಗಳು ಈ ರೀತಿ ಆಚರಿಸಿದ್ದಾರೆ ಎಂಬ ವರದಿಯಾಗಿದೆ. ಉನ್ನತ ಅಧಿಕಾರಿಗಳ ಒಳಗೊಳ್ಳುವಿಕೆಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ಇದನ್ನೂ ಓದಿ: ಇನ್ಸ್ಟಾಗ್ರಾಮ್ ರೀಲ್ಸ್ ವಿಚಾರವಾಗಿ ನಡು ಬೀದಿಯಲ್ಲೇ ಹೆಣ್ಮಕ್ಕಳ ಬಿಗ್​​​ ಫೈಟ್​​; ವಿಡಿಯೋ ವೈರಲ್

ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರು ಆಸ್ಪತ್ರೆಯೊಳಗೆ ಅಬ್ಬರದನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದು ಸಿಬ್ಬಂದಿ ಮತ್ತು ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯಿಸುತ್ತಿದ್ದು,ಡ್ರಮ್‌ಗಳ ಜೋರಾದ ಶಬ್ದದ ಬಗ್ಗೆ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಂದ ದೂರುಗಳು ವರದಿಯಾಗಿವೆ. ಆದರೂ ಸಿಬ್ಬಂದಿ ಹಾಗೂ ವೈದ್ಯರು ಡ್ರಮ್ ಬಾರಿಸುತ್ತಾ ಕುಣಿದು ಕುಪ್ಪಳಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ