ಹಾಪುರ್: ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಯೊಳಗೆ ವೈದ್ಯರು ಮತ್ತು ಸಿಬ್ಬಂದಿಗಳು ನೃತ್ಯ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳನ್ನು ಗಮನಿಸದೆ ಒಳಗೆ ನೃತ್ಯ ಮಾಡುತ್ತಿರುವುದು ಸದ್ಯ ಸೋಶಿಯಲ್ ಮೀಡಿಯಾಗಳಲ್ಲಿ ಟೀಕೆಗೆ ಕಾರಣವಾಗಿದೆ.
ಹಾಪುರ್ ಜಿಲ್ಲೆಯ ಗರ್ ರಸ್ತೆಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ಈ ಘಟನೆ ನಡೆದಿದೆ. ಮಹಿಳಾ ಉದ್ಯೋಗಿಯೊಬ್ಬರು ನಿವೃತ್ತಿಯಾದ ಮೇಲೆ ಅವರ ವಿದಾಯವನ್ನು ವೈದ್ಯರು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಗಳು ಈ ರೀತಿ ಆಚರಿಸಿದ್ದಾರೆ ಎಂಬ ವರದಿಯಾಗಿದೆ. ಉನ್ನತ ಅಧಿಕಾರಿಗಳ ಒಳಗೊಳ್ಳುವಿಕೆಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.
ಇದನ್ನೂ ಓದಿ: ಇನ್ಸ್ಟಾಗ್ರಾಮ್ ರೀಲ್ಸ್ ವಿಚಾರವಾಗಿ ನಡು ಬೀದಿಯಲ್ಲೇ ಹೆಣ್ಮಕ್ಕಳ ಬಿಗ್ ಫೈಟ್; ವಿಡಿಯೋ ವೈರಲ್
ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರು ಆಸ್ಪತ್ರೆಯೊಳಗೆ ಅಬ್ಬರದನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದು ಸಿಬ್ಬಂದಿ ಮತ್ತು ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯಿಸುತ್ತಿದ್ದು,ಡ್ರಮ್‌ಗಳ ಜೋರಾದ ಶಬ್ದದ ಬಗ್ಗೆ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಂದ ದೂರುಗಳು ವರದಿಯಾಗಿವೆ. ಆದರೂ ಸಿಬ್ಬಂದಿ ಹಾಗೂ ವೈದ್ಯರು ಡ್ರಮ್ ಬಾರಿಸುತ್ತಾ ಕುಣಿದು ಕುಪ್ಪಳಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.
ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ