ಗುಜರಾತ್‌ನ ವಡೋದರಾದಲ್ಲಿ ಕಳೆದೊಂದು ವಾರದಿಂದ ಎಡೆಬಿಡದೆ ಮಳೆಯಾಗುತ್ತಿದೆ. ಭಾರೀ ಮಳೆಯಿಂದ ಹಲವು ರಸ್ತೆಗಳು ಜಲಾವೃತವಾಗಿ, ಪ್ರವಾಹ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯನ್ನು ರಕ್ಷಣಾ ಪಡೆಯ ಸಿಬ್ಬಂದಿ ಸುರಕ್ಷಿತವಾಗಿ ದಡಕ್ಕೆ ತಲುಪಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಮಂಚದ ಮೇಲೆ ನಾಯಿಯನ್ನು ಕೂರಿಸಿ ನಂತರ ಅದನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಿರುವುದು ವಿಡಿಯೋ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಇದನ್ನೂ ಓದಿ: ಬ್ಯಾಂಕ್‌ನಿಂದ ಬಿಡಿಸಿ ತಂದ ಚಿನ್ನ, ನಡುರಸ್ತೆಯಲ್ಲೇ ಕಳ್ಳತನ ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
weareyuvaa ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ