Viral Video: ಉತ್ತರಾಖಂಡದಲ್ಲಿ ಪ್ರವಾಹದ ಮಧ್ಯೆ ಸಿಲುಕಿ ಪರದಾಡುತ್ತಿದ್ದ ಆನೆ; ರಕ್ಷಿಸಿದ ಅರಣ್ಯ ಅಧಿಕಾರಿಗಳು

ಉಕ್ಕಿ ಹರಿಯುತ್ತಿರುವ ಗೌಲಾ ನದಿಯ ನಡುವೆ ಆನೆಯೊಂದು ಸಿಲುಕಿಕೊಂಡು ದಿಕ್ಕು ತೋಚದೇ ಪರದಾಡುತ್ತಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಅರಣ್ಯ ಅಧಿಕಾರಿಗಳು ಆನೆಯನ್ನು ರಕ್ಷಿಸಿದ್ದಾರೆ.

Viral Video: ಉತ್ತರಾಖಂಡದಲ್ಲಿ ಪ್ರವಾಹದ ಮಧ್ಯೆ ಸಿಲುಕಿ ಪರದಾಡುತ್ತಿದ್ದ ಆನೆ; ರಕ್ಷಿಸಿದ ಅರಣ್ಯ ಅಧಿಕಾರಿಗಳು
ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಆನೆ ಸಿಲುಕಿಕೊಂಡಿರುವ ದೃಶ್ಯ
Follow us
TV9 Web
| Updated By: shruti hegde

Updated on:Oct 20, 2021 | 8:20 AM

ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯು ರಾಜ್ಯಾದ್ಯಂತ ಅಸ್ಥವ್ಯಸ್ಥ ಉಂಟು ಮಾಡಿದೆ. ಅದೆಷ್ಟೋ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಭಾರೀ ಮಳೆಯ ನಡುವೆ ಗೌಲಾ ನದಿಯಲ್ಲಿ ಆನೆಯೊಂದು ಸಿಲುಕಿಕೊಂಡಿತ್ತು. ಪ್ರವಾಹದ ಮಧ್ಯೆ ದಾರಿ ತೋಚದೇ ಪರದಾಡುತ್ತಿತ್ತು. ಉಕ್ಕಿ ಹರಿಯುತ್ತಿರುವ ಗೌಲಾ ನದಿಯಲ್ಲಿ ಆನೆ ಸಿಲುಕಿಕೊಂಡಿರುವ ದೃಶ್ಯವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ.

ತಡ ಮಾಡದೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಆನೆಯನ್ನು ರಕ್ಷಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿಡಿಯೋವನ್ನು ಹರಿಬಿಟ್ಟ ಟ್ವಿಟರ್ ಬಳಕೆದಾರ ಅಭಿಷೇಕ್ ಪಾಂಡೆ ಹೀಗೆ ಬರೆದಿದ್ದಾರೆ. ಉಕ್ಕುತ್ತಿರುವ ಗೌಲಾ ನದಿಯಲ್ಲಿ ಆನೆಯೊಂದು ಸಿಲುಕಿಕೊಂಡಿದೆ. ಅರಣ್ಯ ಇಲಾಖೆಯ ತಂಡ ಆನೆಯನ್ನು ರಕ್ಷಿಸಿದ್ದಾರೆ. ಕಾಡಿಗೆ ಮರಳಿ ಸೇರುವಂತೆ ದಾರಿ ತೋರಿಸಿದ್ದಾರೆ ಎಂದು ಬರೆದಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಆನೆಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಕ್ಕಾಗಿ ಅರಣ್ಯ ಇಲಾಖೆಗೆ ನೆಟ್ಟಿಗರು ಧನ್ಯವಾದ ತಿಳಿಸಿದ್ದಾರೆ, ಆನೆ ರಕ್ಷಿಸಲು ಮುಂದಾದ ಸಿಬ್ಬಂದಿ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಭಾಗೀಯ ಅರಣ್ಯ ಅಧಿಕಾರಿ ಸಂದೀಪ್ ಕುಮಾರ್ ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ನದಿಯ ಮಧ್ಯೆ ಆನೆ ಸಿಲುಕಿಕೊಂಡಿರುವಂತೆ ಮಾಹಿತಿ ಸಿಕ್ಕಿತು. ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಳುಹಿಸಿ ಆನೆಯನ್ನು ರಕ್ಷಣೆ ಮಾಡಲಾಗಿದೆ. ಆನೆಯ ಚಲನವಲನದ ಬಗ್ಗೆ ನಿಗಾ ಇಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿನ ಪ್ರವಾಹದ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಭಾರತ ಹವಾಮಾನ ಇಲಾಖೆ ಉತ್ತರಾಖಂಡಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹೇಳಿದೆ.

ಇದನ್ನೂ ಓದಿ:

Viral Video: ಮರಿ ಆನೆಯನ್ನು ರಕ್ಷಿಸಿ ತಾಯಿಯ ಬಳಿ ಸೇರಿಸಿದ ತಮಿಳುನಾಡು ರಕ್ಷಣಾ ಸಿಬ್ಬಂದಿ; ಹೃದಯಸ್ಪರ್ಶಿ ವಿಡಿಯೋವಿದು

Viral Video: ಆನೆಗಳೊಂದಿಗೆ ಹುಡುಗಿಯ ಸಕತ್ ಡಾನ್ಸ್; ವೈರಲ್​ ಆಯ್ತು ವಿಡಿಯೊ

Published On - 8:18 am, Wed, 20 October 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್