AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೇಕರಿ ತಿಂಡಿ ಪ್ರಿಯರೇ ಎಚ್ಚರ; ಈ ಶಾಕಿಂಗ್ ವಿಡಿಯೋ ನೋಡಿದರೆ ರಸ್ಕ್ ಮುಟ್ಟೋಕೂ ಅಸಹ್ಯ ಪಡ್ತೀರ!

Shocking Video | ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಾಲಿನಿಂದ ರಸ್ಕ್ ಅನ್ನು ತುಳಿದು, ಕೆಲವರು ರಸ್ಕ್ ಅನ್ನು ನಾಲಿಗೆಯಿಂದ ನೆಕ್ಕಿ ಪ್ಯಾಕಿಂಗ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

Viral Video: ಬೇಕರಿ ತಿಂಡಿ ಪ್ರಿಯರೇ ಎಚ್ಚರ; ಈ ಶಾಕಿಂಗ್ ವಿಡಿಯೋ ನೋಡಿದರೆ ರಸ್ಕ್ ಮುಟ್ಟೋಕೂ ಅಸಹ್ಯ ಪಡ್ತೀರ!
ರಸ್ಕ್ ಪ್ಯಾಕ್ ಮಾಡುತ್ತಿರುವ ವಿಡಿಯೋ
TV9 Web
| Edited By: |

Updated on:Sep 21, 2021 | 8:54 PM

Share

ಕೆಲವರಿಗೆ ಪ್ರತಿ ದಿನ ಎದ್ದ ಕೂಡಲೆ ರಸ್ಕ್ ಅಥವಾ ಬ್ರೆಡ್ ತಿನ್ನುವ ಅಭ್ಯಾಸ ಇರುತ್ತದೆ. ಕಾಫಿಯೊಂದಿಗೆ ಬಿಸ್ಕತ್, ರಸ್ಕ್ ತಿನ್ನುವ ಅಭ್ಯಾಸ ನಿಮಗಿದೆಯಾ? ಬೇಕರಿಯಿಂದ ರಾಶಿ ರಾಶಿ ತಿಂಡಿಗಳನ್ನು ತಂದಿಟ್ಟುಕೊಂಡು ತಿನ್ನುತ್ತೀರಾ? ಮನೆತಿಂಡಿಗಿಂತ ಹೊರಗಿನ ತಿಂಡಿಗಳ ಬಗ್ಗೆ ನಿಮಗೆ ಕ್ರೇಜ್ ಜಾಸ್ತಿಯಾ? ಹಾಗಿದ್ದರೆ ನೀವು ಮಿಸ್ ಮಾಡದೆ ಈ ವಿಡಿಯೋವನ್ನು ನೋಡಲೇ ಬೇಕು. ನೀವೇನಾದರೂ ಈ ವಿಡಿಯೋ ನೋಡಿದರೆ ರಸ್ಕ್ ಮುಟ್ಟಲು ಕೂಡ ಅಸಹ್ಯ ಪಡೋದು ಗ್ಯಾರಂಟಿ!

ಸೋಷಿಯಲ್ ಮೀಡಿಯಾದಲ್ಲಿ ಶಾಕಿಂಗ್ ವಿಡಿಯೋವೊಂದು ಹರಿದಾಡುತ್ತಿದೆ. ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಾಲಿನಿಂದ ರಸ್ಕ್ ಅನ್ನು ತುಳಿದು, ಕೆಲವರು ರಸ್ಕ್ ಅನ್ನು ನಾಲಿಗೆಯಿಂದ ನೆಕ್ಕಿ ಪ್ಯಾಕಿಂಗ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದವರು ಅಸಹ್ಯ ಪಟ್ಟುಕೊಂಡು ಹಲವರು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ರೀತಿ ಅಸಭ್ಯ ವರ್ತನೆ ತೋರಿದ ಫ್ಯಾಕ್ಟರಿ ಸಿಬ್ಬಂದಿಯನ್ನು ಬಂಧಿಸಬೇಕೆಂದು ಕೂಡ ಹಲವರು ಒತ್ತಾಯಿಸಿದ್ದಾರೆ.

ರಸ್ಕ್ ಉತ್ಪಾದನಾ ಫ್ಯಾಕ್ಟರಿಯ ಸಿಬ್ಬಂದಿ ಒಟ್ಟಾಗಿ ಕುಳಿತು, ರಸ್ಕ್ ಅನ್ನು ಪ್ಯಾಕ್ ಮಾಡುತ್ತಿದ್ದರು. ಆ ವೇಳೆ ಅಲ್ಲಿದ್ದವನೊಬ್ಬ ಅದನ್ನು ನೆಕ್ಕಿ ಪ್ಯಾಕ್ ಮಾಡಿ ನಗತೊಡಗಿದ. ಅದಕ್ಕೆ ಪ್ರತಿಯಾಗಿ ಇನ್ನೊಬ್ಬ ಕಾಲಿನಲ್ಲಿ ರಸ್ಕ್ ಅನ್ನು ನೆಲದ ಮೇಲೆ ಹಾಕಿ ತುಳಿದು ಪ್ಯಾಕ್​ಗೆ ಹಾಕಿದ.

ಈ ವಿಡಿಯೋವನ್ನು ನಟಿ ರವೀನಾ ಟಂಡನ್ ಕೂಡ ಇನ್​ಸ್ಟಾಗ್ರಾಂನಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದು, ಈ ರೀತಿ ವರ್ತಿಸಿದ ಸಿಬ್ಬಂದಿಯನ್ನು ಅರೆಸ್ಟ್ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇನ್ನು ಕೆಲವರು, ಈ ರೀತಿ ಮಾಡುವುದರಿಂದ ಅವರು ಏನು ಸಾಧನೆ ಮಾಡಲು ಸಾಧ್ಯ? ಎಂಬುದು ನನಗೆ ಅರ್ಥವಾಗುತ್ತಿಲ್ಲ. ಮನುಷ್ಯರು ತಿನ್ನುವ ವಸ್ತುವನ್ನು ಈ ರೀತಿ ಕಾಲಿನಿಂದ ತುಳಿದು, ಎಂಜಲು ಮಾಡಿ ಕೊಟ್ಟರೆ ಅವರಿಗೆ ಏನು ಲಾಭ? ಇದನ್ನು ನೋಡಿದ ಮೇಲೆ ಬೇಕರಿ ತಿಂಡಿಗಳನ್ನು ಖರೀದಿಸಲು ಭಯವಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Shocking News: ಲೈಂಗಿಕ ಕ್ರಿಯೆ ವೇಳೆ ಕಾಂಡೋಮ್ ಬದಲು ಗುಪ್ತಾಂಗಕ್ಕೆ ಗಮ್ ಅಂಟಿಸಿಕೊಂಡ ಯುವಕ ಸಾವು!

Shocking Video: ಮೈಕೆಲ್ ಜಾಕ್ಸನ್ ದೆವ್ವವನ್ನೇ ಮದುವೆಯಾದ ಮಹಿಳೆ; ಥ್ರಿಲ್ಲಿಂಗ್ ಲವ್ ಸ್ಟೋರಿ ಇಲ್ಲಿದೆ

(Viral Video Factory Workers Lick Put Feet on Rusks Before Packing Watch Shocking Video Raveena Tandon Reacts)

Published On - 8:50 pm, Tue, 21 September 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ