Viral Video: ನಕಲಿ ಕೋಕಾ ಕೋಲಾ ಡ್ರಿಂಕ್ಸ್ ಹೇಗೆ ತಯಾರಾಗುತ್ತೇ ನೋಡಿ; ವಿಡಿಯೋ ವೈರಲ್
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.
ವಿಶ್ವದ ಅತ್ಯಂತ ಜನಪ್ರಿಯ ತಂಪು ಪಾನೀಯಗಳಲ್ಲಿ ಒಂದಾದ ಕೋಕಾ- ಕೋಲಾ (Coca-Cola) ವನ್ನೇ ಹೋಲುವ ನಕಲಿ ಕೋಲಾದ ತಯಾರಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಅತ್ಯಂತ ಕೊಳಕು ಪ್ರದೇಶದಲ್ಲಿ ಕೋಕಾ- ಕೋಲಾ ರೀತಿಯ ಪಾನೀಯವನ್ನೇ ಕೋಕಾ- ಕೋಲಾದ ಲೇಬಲ್ ಇರುವ ಬಾಟಲಿಯೊಳಗೆ ತುಂಬಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಈ ವೀಡಿಯೋ ನೋಡಿದ ನೆಟ್ಟಿಗರು ಹತ್ತು ರೂಪಾಯಿ ಕಡಿಮೆಯಾದ್ದರಿಂದ ಸಣ್ಣ ವ್ಯಾಪಾರಿಗಳು ಇವರಿಂದ ಈ ನಕಲಿ ಡ್ರಿಂಕ್ಸ್ ಖರೀದಿಸುತ್ತಾರೆ. ಅಂಥವರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಪ್ರಸ್ತುತ ಬೇಸಿಗೆ ಕಾಲವಾದ್ದರಿಂದ ಈ ನಕಲಿ ತಂಪು ಪಾನೀಯಗಳ ಮಾರಾಟ ಜೋರಾಗಿ ನಡೆಯುತ್ತಿದೆ. ಸುಡು ಬಿಸಿಲಿನಲ್ಲಿ ಕೂಲ್ ಡ್ರಿಂಕ್ಸ್ ಕುಡಿಯುವ ಮುನ್ನ ಯೋಚಿಸಿ ಎಂದು ವಿಡಿಯೋದಲ್ಲಿ ಬರೆಯಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ನಕಲಿ ಕೋಕಾ- ಕೋಲಾದ ವಿಡಿಯೋ ಇಲ್ಲಿದೆ ನೋಡಿ:
Scaryyyy…
Everything in this world is fabricated or adulterated these days …
— Vineeth K (@DealsDhamaka) March 29, 2024
ಇದನ್ನೂ ಓದಿ: ಚಿಕಿತ್ಸೆಗೆಂದು ಬರುವ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯನ ಬಂಧನ
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:15 pm, Sat, 30 March 24