ಗುವಾಹಟಿ: ಅಸ್ಸಾಂನಲ್ಲಿ ಭೀಕರ ಪ್ರವಾಹ (Assam Floods) ಉಂಟಾಗಿದ್ದು, ಅಲ್ಲಿನ ಜನರು ಮಳೆಯ ಆರ್ಭಟಕ್ಕೆ ತತ್ತರಿಸಿಹೋಗಿದ್ದಾರೆ. ಈಗಾಗಲೇ ಅಸ್ಸಾಂನಲ್ಲಿ (Assam Rains) ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಇದರ ನಡುವೆ ಪ್ರವಾಹ ಪೀಡಿತ ಅಸ್ಸಾಂನ ಜನರ ನೋವನ್ನು ಸೆರೆಹಿಡಿಯುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದೀಗ ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ತಂದೆಯೊಬ್ಬರು ತನ್ನ ನವಜಾತ ಶಿಶುವನ್ನು ಬುಟ್ಟಿಯಲ್ಲಿಟ್ಟುಕೊಂಡು, ಆ ಬುಟ್ಟಿಯನ್ನು ಹೊತ್ತುಕೊಂಡು ಪ್ರವಾಹದ ನೀರಿನಿಂದ ಆವೃತವಾದ ರಸ್ತೆಯನ್ನು ದಾಟುತ್ತಿರುವುದನ್ನು ನೋಡಬಹುದು.
ಬಟ್ಟೆ ಸುತ್ತಿಟ್ಟಿದ್ದ ಹಸುಗೂಸನ್ನು ಪ್ಲಾಸ್ಟಿಕ್ ಬುಟ್ಟಿಯಲ್ಲಿ ಇಟ್ಟುಕೊಂಡು ಆ ಮಗುವಿನ ಅಪ್ಪ ತನ್ನ ಎದೆಯ ಮಟ್ಟಕ್ಕೆ ನಿಂತಿದ್ದ ಮಳೆ ನೀರಿನಲ್ಲಿಯೇ ನಡೆದು, ಮಗುವನ್ನು ಎತ್ತರದ ಸ್ಥಳಕ್ಕೆ ಕೊಂಡೊಯ್ಯುವ ವಿಡಿಯೋ ವೈರಲ್ ಆಗಿದೆ. ಆ ಮಗುವಿನ ಜೊತೆ ಬರುತ್ತಿದ್ದವರು ಆ ಮಗುವನ್ನು ನಗಿಸುತ್ತಾ, ಮಳೆನೀರಿನಿಂದ ತುಂಬಿದ್ದ ಮನೆಯಿಂದ ಎತ್ತರದ ಸ್ಥಳಕ್ಕೆ ಮಗುವನ್ನು ತೆಗೆದುಕೊಂಡು ಹೋಗಿದ್ದಾರೆ.
Heartwarming picture from Silchar Floods!
This video of a father crossing the waters with his newborn baby in Silchar reminds of Vasudeva crossing river Yamuna taking newborn Bhagwan Krishna over his head!
Everyday is Father’s Day!@narendramodi @himantabiswa @drrajdeeproy pic.twitter.com/1PEfaiCxA5— Sashanka Chakraborty ?? (@SashankGuw) June 21, 2022
ಈ ವೀಡಿಯೋವನ್ನು ಶೇರ್ ಮಾಡಿದ ನೆಟ್ಟಿಗರು ಶ್ರೀಕೃಷ್ಣನನ್ನು ಹೊತ್ತುಕೊಂಡು ಯಮುನೆಯನ್ನು ದಾಟಿದ ವಾಸುದೇವನಿಗೆ ಈ ಅಪ್ಪ-ಮಗುವಿನ ವಿಡಿಯೋವನ್ನು ಹೋಲಿಸಿದ್ದಾರೆ.
ಇದನ್ನೂ ಓದಿ: Assam Flood: ಭೀಕರ ಪ್ರವಾಹದಿಂದ ದ್ವೀಪವಾಗಿದೆ ಅಸ್ಸಾಂ; ಮಳೆಯ ಹೊಡೆತಕ್ಕೆ 81 ಜನ ಸಾವು
ಅಸ್ಸಾಂ ರಾಜ್ಯದ ಎಲ್ಲಾ 34 ಜಿಲ್ಲೆಗಳು ಪ್ರವಾಹದ ಬಿಕ್ಕಟ್ಟಿಗೆ ಸಿಲುಕಿವೆ. ಅಸ್ಸಾಂನಲ್ಲಿ ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಪ್ರವಾಹ ಪೀಡಿತ ಅಸ್ಸಾಂನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇದುವರೆಗೆ 47 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಸೋಮವಾರ ಏಳು ಮಂದಿ ನಾಪತ್ತೆಯಾಗಿದ್ದು, 2.3 ಲಕ್ಷ ಮಂದಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಒಟ್ಟಾರೆಯಾಗಿ, ಎಲ್ಲಾ ಪೀಡಿತ ಪ್ರದೇಶಗಳಲ್ಲಿ 810 ಪರಿಹಾರ ಶಿಬಿರಗಳು ಮತ್ತು 615 ಪರಿಹಾರ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ.
Atleast 20 people dead and over 1 million people displaced due to massive floods & landslides in Assam. I’m very sad to see children are losing their parents and homes. My thoughts and prayers with them! ?#AssamFloods pic.twitter.com/qmpBvgody4
— Licypriya Kangujam (@LicypriyaK) June 18, 2022
ಒಟ್ಟು 1,13,485.37 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, 5,000ಕ್ಕೂ ಹೆಚ್ಚು ಹೆಕ್ಟೇರ್ ಜಮೀನು ಕೊಚ್ಚಿಹೋಗಿದೆ. ಅಸ್ಸಾಂ ರಾಜ್ಯದಲ್ಲಿನ ಕಠೋರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮ ಅವರಿಗೆ ಫೋನ್ ಮಾಡಿ ಪ್ರವಾಹದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:17 pm, Tue, 21 June 22