ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್​​ ಲೈಸೆನ್ಸ್​​​ ಪಡೆದ ಏಷ್ಯಾದ ಮೊದಲ ಮಹಿಳೆ!

|

Updated on: Apr 25, 2024 | 12:56 PM

ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸುವುದರ ಜೊತೆಗೆ ಚಿತ್ರಕಲೆಯಲ್ಲೂ ಸೈ ಎನಿಸಿಕೊಂಡಿರುವ ಈಕೆ ಸಾಕಷ್ಟು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ. ಇದೀಗ ದೇಶದಾದ್ಯಂತ ಖ್ಯಾತಿಯನ್ನು ಪಡೆದಿರುವ ಈಕೆಯನ್ನು ಅನೇಕ ಸೆಲೆಬ್ರಿಟಿಗಳು ಕೂಡ ಭೇಟಿಯಾಗುತ್ತಿದ್ದಾರೆ.

ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್​​ ಲೈಸೆನ್ಸ್​​​  ಪಡೆದ ಏಷ್ಯಾದ ಮೊದಲ ಮಹಿಳೆ!
Jilumol Mariet Thomas
Image Credit source: instagram
Follow us on

ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸಿ ಸರ್ಕಾರದಿಂದ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದಾಳೆ ಕೇರಳದ ಜಿಲುಮೋಲ್​​ ಮರಿಯೆಟ್ ಥಾಮಸ್. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿದ್ದ ಮರಿಯೆಟ್ ಥಾಮಸ್ ಚಿಕ್ಕ ವಯಸ್ಸಿನಲ್ಲೇ ಕಾಲಿನ ಮೂಲಕವೇ ದೈನಂದಿನ ಚಟುವಟಿಕೆಗಳನ್ನು ಅಭ್ಯಾಸ ಮಾಡಿಕೊಂಡಿದ್ದಳು. ಇದೀಗ ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ ದೇಶದ ಗಮನ ಸೆಳೆದಿದ್ದಾಳೆ. ಇದಲ್ಲದೇ ಎರಡು ಕೈಗಳಿಲ್ಲದೇ ಡ್ರೈವಿಂಗ್​​ ಲೈಸೆನ್ಸ್​​​ ಪಡೆದ ಏಷ್ಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ.

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿರುವ ಮರಿಯೆಟ್ ಥಾಮಸ್, ಇತ್ತೀಚೆಗಷ್ಟೇ ತಾನು ಕಾರು ಚಲಾಯಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದಾಳೆ. ಮಾರ್ಚ್​​ 28ರಂದು @jilumolmarietthomas ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡ ಈ ವಿಡಿಯೋ ಇದೀಗಾಗಲೇ 60ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೆ, 2.5 ಲಕ್ಷಕ್ಕೂ ಹೆಚ್ಚು ಜನರು ವೀಡಿಯೊವನ್ನು ಲೈಕ್ ಮಾಡಿದ್ದಾರೆ.

ಇದನ್ನೂ ಓದಿ: ಗೋಧಿ ಕಟಾವು ಮಷಿನ್‌ ಒಳಗೆ ಸಿಲುಕಿ 14ರ ಬಾಲಕ ಸಾವು; ಛಿದ್ರಗೊಂಡ ದೇಹ

ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸುವುದರ ಜೊತೆಗೆ ಚಿತ್ರಕಲೆಯಲ್ಲೂ ಸೈ ಎನಿಸಿಕೊಂಡಿರುವ ಈಕೆ ಸಾಕಷ್ಟು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ. ಇದೀಗ ದೇಶದಾದ್ಯಂತ ಖ್ಯಾತಿಯನ್ನು ಪಡೆದಿರುವ ಈಕೆಯನ್ನು ಅನೇಕ ಸೆಲೆಬ್ರಿಟಿಗಳು ಕೂಡ ಭೇಟಿಯಾಗುತ್ತಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:40 am, Thu, 25 April 24