Viral Video: ಸುರಿದ ಧಾರಾಕಾರ ಮಳೆಗೆ ರಸ್ತೆಗೆ ಬಂದ ಮೀನುಗಳು! ಎಲ್ಲಿ ಇದು ಗೊತ್ತಾ?

ಅಸ್ಸಾಂನಲ್ಲಿ ಸುರಿದ ಭಾರಿ ಮಳೆಗೆ ಗುವಾಹಟಿಯ ರಸ್ತೆಯಲ್ಲಿ ತುಂಬಿದ ನೀರಿನಲ್ಲಿ ಮೀನುಗಳು ಈಜುತ್ತಿರುವುದು ಕಂಡುಬಂದಿದೆ ಎಂದು ಹೇಳಲಾಗುವ ವಿಡಿಯೋ ವೈರಲ್ ಆಗುತ್ತಿದೆ. ಅಷ್ಟಕ್ಕೂ ಈ ದೃಶ್ಯಾವಳಿ ಎಲ್ಲಿದ್ದು? ವಿಡಿಯೋದ ಅಸಲಿಯತ್ತೇನು ಎಂಬುದು ಈ ಸುದ್ದಿಯಲ್ಲಿದೆ ನೋಡಿ.

Viral Video: ಸುರಿದ ಧಾರಾಕಾರ ಮಳೆಗೆ ರಸ್ತೆಗೆ ಬಂದ ಮೀನುಗಳು! ಎಲ್ಲಿ ಇದು ಗೊತ್ತಾ?
ರಸ್ತೆಯಲ್ಲಿ ಈಜಾಡುತ್ತಿರುವ ಮೀನುಗಳು
Follow us
TV9 Web
| Updated By: Rakesh Nayak Manchi

Updated on: Jun 19, 2022 | 12:31 PM

ಗುವಾಹಟಿ: ಅಸ್ಸಾಂನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈ ನಡುವೆ ಗುವಾಹಟಿಯ ರಸ್ತೆಯಲ್ಲಿ ತುಂಬಿದ ಮಳೆ ನೀರಿನಲ್ಲಿ ಮೀನುಗಳು ಈಜುತ್ತಿರುವುದು ಕಂಡುಬಂದಿದೆ ಎಂದು ಹೇಳುವ ವಿಡಿಯೋ ವೈರಲ್ ಆಗುತ್ತಿದೆ. ಇತ್ತೀಚಿನ ಅಸ್ಸಾಂ ಪ್ರವಾಹದಲ್ಲಿ ‘ಗುವಾಹಟಿಯಲ್ಲಿ ಮೀನುಗಳು ರಸ್ತೆಯಲ್ಲಿ ಈಜುತ್ತಿವೆ’ ಎಂದು ಟ್ವಿಟರ್ ವಿಡಿಯೋದಲ್ಲಿ ಶೀರ್ಷಿಕೆ ನೀಡಲಾಗಿದೆ. ಅಷ್ಟಕ್ಕೂ ಅಸ್ಸಾಂನ ಗುವಾಹಟಿಯದ್ದು ಎನ್ನಲಾಗಿರುವ ಈ ವಿಡಿಯೋ ಸುಳ್ಳು. ಹಲವಾರು ಟ್ವಿಟ್ಟರ್ ಬಳಕೆದಾರರು ನಕಲಿ ವೀಡಿಯೊವನ್ನು ಗುವಾಹಟಿಯದ್ದಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral: ಸಾಕಿದ ನಾಯಿ ಕಳೆದುಕೊಂಡಾಕೆಯ ಸಂಕಟಕ್ಕೆ ಪೆಟ್ ಫುಡ್ ಕಂಪನಿಯ ಸ್ಪಂದನೆ; ಸಹೃದಯರ ಸಾಂತ್ವನ

ಅಸಲಿಗೆ ರಸ್ತೆಯಲ್ಲಿ ತುಂಬಿದ ನೀರಿನಲ್ಲಿ ಮೀನುಗಳು ಈಜಾಡುತ್ತಿರುವ ದೃಶ್ಯ ಚೀನಾದ್ದಾಗಿದೆ. ಈ ಹಿಂದೆ ಚೀನೀ ಟ್ವೀಟ್‌ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, “ಗುವಾಂಗ್‌ಡಾಂಗ್‌ನಲ್ಲಿ ನಿರಂತರ ಬಿರುಗಾಳಿ ಸಹಿತ ಮಳೆಯಿಂದಾಗಿ ಮೀನುಗಳು ರಸ್ತೆಗೆ ಬಂದಿವೆ” ಎಂದು ಶೀರ್ಷಿಕೆ ನೀಡಲಾಗಿದೆ.

ಇದನ್ನೂ ಓದಿ: Viral Video: ರಸ್ತೆಯಲ್ಲಿ ಓಡಾಡುತ್ತಿದ್ದ ಹುಲಿಯನ್ನು ಹಗ್ಗದಿಂದ ಕಟ್ಟಿ ಕರೆದುಕೊಂಡು ಹೋದ ಯುವಕ! ಮುಂದೆ ಆಗಿದ್ದೇ ಬೇರೆ

ಆದಾಗ್ಯೂ, ದೊಡ್ಡ ಗಾತ್ರದ ಮೀನುಗಳು ರಸ್ತೆಗಳಲ್ಲಿ ಈಜುತ್ತಿವೆ ಎಂಬ ಸುದ್ದಿ ಹರಡುತ್ತಿದ್ದಂತೆ ಅಸ್ಸಾಂನ ಬೀದಿಗಳಲ್ಲಿ ಜನರು ಮೀನು ಹಿಡಿಯಲು ಮುಂದಾಗಿದ್ದಾರೆ. ಕಾಮ್ರೂಪ್‌ನ ರಂಗಿಯಾದ ಮೊರಾಂಜನಾ ಪ್ರದೇಶದಲ್ಲಿ ನೀರಿನಿಂದ ಮುಳುಗಡೆಯಾದ ರಾಷ್ಟ್ರೀಯ ಹೆದ್ದಾರಿ 31 ರಲ್ಲಿ ಮೀನು ಹಿಡಿಯಲು ಸ್ಥಳೀಯರು ಬಲೆಗಳನ್ನು ಹಾಕುತ್ತಿರುವ ವೀಡಿಯೊವನ್ನು ಟೈಮ್ಸ್ ಆಫ್ ಇಂಡಿಯಾ ಟ್ವೀಟ್ ಮಾಡಿದೆ. ಆ ಪ್ರದೇಶದಲ್ಲಿಯೂ ರಸ್ತೆಯಲ್ಲಿ ಮೀನುಗಳು ಪತ್ತೆಯಾಗಿಲ್ಲ.

ನಿರಂತರ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಅಸ್ಸಾಂ ತತ್ತರಿಸಿ ಹೋಗಿದ್ದು, 32 ಜಿಲ್ಲೆಗಳಲ್ಲಿ ಸುಮಾರು 31 ಲಕ್ಷ ಜನರ ಮೇಲೆ ಪರಿಣಾಮ ಬೀರಿದೆ. ಅಧಿಕಾರಿಗಳ ಪ್ರಕಾರ, ಶನಿವಾರದಂದು ಇನ್ನೂ ಎಂಟು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಸಾವಿನ ಸಂಖ್ಯೆ 63ಕ್ಕೆ ತಲುಪಿದೆ. ಹಾನಿಗೊಳಗಾದ ಜಿಲ್ಲೆಗಳಲ್ಲಿ ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಇದುವರೆಗೆ 3000 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. 514 ಪರಿಹಾರ ಶಿಬಿರಗಳಲ್ಲಿ 1.56 ಲಕ್ಷಕ್ಕೂ ಹೆಚ್ಚು ಜನರು ಆಶ್ರಯ ಪಡೆದಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ