Viral Video: ವರನ ಹಾರದಿಂದ ಹಣ ಕದ್ದ ಸ್ನೇಹಿತ; ಇಂಡಿಯನ್ ಮನಿ ಹೀಸ್ಟ್ ಎಂದ ನೆಟ್ಟಿಗರು

ವರನ ಪಕ್ಕದಲ್ಲಿ ಕುಳಿತಿದ್ದ ಗೆಳೆಯನೊಬ್ಬ ವರನ ಮಾಲೆಯಲ್ಲಿದ್ದ ಹಣವನ್ನು ಯಾರಿಗೂ ಗೊತ್ತಾಗದ ಹಾಗೆ ಕದಿಯಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಲ್ಲಿಯವರೆಗೆ, ಮದುವೆಯ ಸ್ಥಳ ಮತ್ತು ವರನ ಬಗ್ಗೆ ಯಾವುದೇ ಮಾಹಿತಿ ಇಲ್ಲ.

Viral Video: ವರನ ಹಾರದಿಂದ ಹಣ ಕದ್ದ ಸ್ನೇಹಿತ; ಇಂಡಿಯನ್ ಮನಿ ಹೀಸ್ಟ್ ಎಂದ ನೆಟ್ಟಿಗರು
ಹಣ ಕದಿಯುತ್ತಿರುವ ಸ್ನೇಹಿತ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 08, 2022 | 3:31 PM

ನವದೆಹಲಿ: ಭಾರತದಲ್ಲಿ ಸದ್ಯ ಮದುವೆ (Marriage) ಸಮಾರಂಭಗಳು ಜೋರಾಗಿ ನಡೆಯುತ್ತಿವೆ. ಮದುವೆ ಕಾರ್ಯಕ್ರಮವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಮದುವೆ ಮನೆಯಲ್ಲಿ ಸಂಬಂಧಿಕರು, ಸ್ನೇಹಿತರು, ತರ್ಲೆ, ತಮಾಷೆ ಎಲ್ಲವೂ ನಡೆಯುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ನಮಗೆ ಮದುವೆ ವೈರಲ್ ವಿಡಿಯೋಗಳು ನೋಡಲು ಸಿಗುತ್ತವೆ. ಜೊತೆಗೆ ಮದುವೆ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸುವಂತಹ ವಿಡಿಯೋಗಳು ಕೂಡ ವೈರಲ್ ಆಗುತ್ತಿರುತ್ತೇವೆ. ಈಗ ಅಂತಹದ್ದೇ ಒಂದು ಮದುವೆಯ ವಿಡಿಯೋ ವೈರಲ್ ಆಗಿದ್ದು, ವರ ಸ್ನೇಹಿತನೇ ಮದುವೆ ಮನೆಯಲ್ಲಿ ಕಳ್ಳನಾಗಿದ್ದಾನೆ. ವರ, ವಧು ಮತ್ತು ಅವರ ಕುಟುಂಬದ ಸದಸ್ಯರಿಗೆ ಮದುವೆಯ ದಿನವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಈ ವಿಡಿಯೋದಲ್ಲಿ ವರನು ಅನೇಕ ಸ್ನೇಹಿತರ ಮಧ್ಯೆ ಕುಳಿತುಕೊಂಡಿದ್ದಾನೆ. ಭಾರತೀಯ ವಿವಾಹಗಳಲ್ಲಿ ವರನು ಮಾಲೆಯನ್ನು ಧರಿಸುವುದು ಸಾಮಾನ್ಯ ಸಂಪ್ರದಾಯವಾಗಿದೆ. ಜೊತೆಗ ಆತನ ಕೊರಳಿನಲ್ಲಿ ಹಣದ ಹಾರ ಕೂಡ ಹಾಕಲಾಗಿದೆ. ಈ ರೀತಿ ಹಣದ ಹಾರ ಹಾಕುವುದು ಕೆಲವು ಕಡೆ ಸಂಪ್ರದಾಯವೆಂದು ಹೇಳಲಾಗುತ್ತದೆ.

View this post on Instagram

A post shared by Meemlogy (@meemlogy)

ವರನ ಪಕ್ಕದಲ್ಲಿ ಕುಳಿತಿದ್ದ ಗೆಳೆಯನೊಬ್ಬ ವರನ ಮಾಲೆಯಲ್ಲಿದ್ದ ಹಣವನ್ನು ಯಾರಿಗೂ ಗೊತ್ತಾಗದ ಹಾಗೆ ಕದಿಯಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಲ್ಲಿಯವರೆಗೆ, ಮದುವೆಯ ಸ್ಥಳ ಮತ್ತು ವರನ ಬಗ್ಗೆ ಯಾವುದೇ ಮಾಹಿತಿ ಇಲ್ಲ. ವಿಡಿಯೋದ ಆರಂಭದಲ್ಲಿ, ವರನು ತನ್ನ ಸಂಬಂಧಿಕರು ಹೇಳುವುದನ್ನು ಕೇಳಲು ಪ್ರಯತ್ನಿಸುತ್ತಿರುವಾಗ ಸ್ನೇಹಿತ ಹಾರದಿಂದ ಹಣವನ್ನು ಕದಿಯಲು ಪ್ರಯತ್ನಿಸುತ್ತಿರುವುದನ್ನು ನೋಡಬಹುದು. ವರನು ಮತ್ತೆ ತನ್ನ ಸಂಬಂಧಿಕರ ಮಾತುಗಳನ್ನು ಕೇಳಲು ಪ್ರಾರಂಭಿಸಿದ ತಕ್ಷಣ, ಸ್ನೇಹಿತನು ತನ್ನ ಜೇಬಿನಲ್ಲಿ ಹಣವನ್ನು ಇಟ್ಟುಕೊಳ್ಳುತ್ತಾನೆ. ಈ ವೈರಲ್ ವಿಡಿಯೋವನ್ನು ಎರಡು ದಿನಗಳ ಹಿಂದೆ ಇನ್‌ಸ್ಟಾಗ್ರಾಮ್‌ನಲ್ಲಿ ಮೀಮ್ಲೋಜಿ ಎಂಬ ಖಾತೆಯಿಂದ ಅಪ್‌ಲೋಡ್ ಮಾಡಲಾಗಿದ್ದು, ಇದುವರೆಗೆ 97,298 ಲೈಕ್‌ಗಳು ಬಂದಿವೆ. ಕದ್ದ ಹಣ್ಣದಿಂದಲೇ ಉಡುಗರೆ ಕೊಡುತ್ತೇನೆ ಎಂದು ವಿಡಿಯೋಗೆ ಶೀರ್ಷಿಕೆ ನೀಡಲಾಗಿದೆ.  ನೆಟ್ಟಿಗರು ಇದನ್ನು ತಮಾಷೆಯಾಗಿ ಇಂಡಿಯನ್ ಮನಿ ಹೀಸ್ಟ್ ಎಂದು ಕರೆದಿದ್ದಾರೆ.

ಇದನ್ನೂ ಓದಿ:

ತಮಿಳುನಾಡು ನವದಂಪತಿಗೆ ವಿವಾಹ ಮಂಟಪದಲ್ಲಿ ಪೆಟ್ರೋಲ್ ಡೀಸೆಲ್ ಕೊಡುಗೆ

Viral Video: ಸೂಟ್ ಧರಿಸಿ ಚಾಟ್ ಮತ್ತು ಗೋಲ್ಗಪ್ಪ ಮಾರಾಟ ಮಾಡೋದನ್ನ ಎಲ್ಲಾದರೂ ನೋಡಿದ್ದೀರಾ..!

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್