Viral Video: ಉದ್ಯೋಗಿಗಳಿಗೆ ಮಲಗಲು ವಿಶೇಷ ಕೊಠಡಿ,ಜೊತೆಗೆ ಹಲವು ಸೌಲಭ್ಯಗಳನ್ನು ನೀಡುತ್ತಿದೆ ಈ ಕಂಪೆನಿ

ಇತ್ತೀಚೆಗೆ ಮೈಕ್ರೋಸಾಫ್ಟ್ ಉದ್ಯೋಗಿಗಳ ಗುಂಪು ಹೈದರಾಬಾದ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಫುಡ್ ಕೋರ್ಟ್ನಿಂದ ಹಿಡಿದು ಉದ್ಯೋಗಿಗಳಿಗೆ ವಿಶ್ರಾಂತಿ ಪಡೆಯಲು ವಿಶೇಷ ಮಲಗುವ ಕೋಣೆಯ ವರೆಗೆ ಎಲ್ಲಾ ಸೌಲಭ್ಯಗಳಿವೆ

Viral Video: ಉದ್ಯೋಗಿಗಳಿಗೆ ಮಲಗಲು ವಿಶೇಷ ಕೊಠಡಿ,ಜೊತೆಗೆ ಹಲವು ಸೌಲಭ್ಯಗಳನ್ನು ನೀಡುತ್ತಿದೆ ಈ ಕಂಪೆನಿ
Viral VideoImage Credit source: instagram
Follow us
ಅಕ್ಷತಾ ವರ್ಕಾಡಿ
|

Updated on: Feb 17, 2024 | 1:04 PM

ರಜಾದಿನಗಳಲ್ಲಿಯೂ ಕೆಲಸ ಮಾಡಬೇಕು, ಕಡಿಮೆ ಸಂಬಳ. ಒಮ್ಮೆ ಈ ಕಂಪೆನಿ ಬಿಟ್ಟು ಎಲ್ಲಾದರೊಂದು ಒಳ್ಳೆಯ ಕಂಪೆನಿ ಸೇರಿ, ಹೆಚ್ಚು ಸಂಬಳ ಪಡೆಯಬೇಕು ಎಂಬುದು ಸಾಕಷ್ಟು ಜನರ ಕನಸು. ನಿಮ್ಮ ಕನಸ್ಸಿಗೆ ತಕ್ಕಂತೆ ಸಕಲ ಸೌಲಭ್ಯಗಳನ್ನು ಒದಗಿಸುವ ಕಂಪೆನಿಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ತಮ್ಮ ಕಚೇರಿಯಲ್ಲಿ ಯಾವ ರೀತಿಯ ಸೌಲಭ್ಯಗಳು ಇರುತ್ತವೆ ಎಂಬುದನ್ನು ವಿಡಿಯೋದ ಮೂಲಕ ಅಲ್ಲಿನ ಉದ್ಯೋಗಿಗಳು ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉದ್ಯೋಗಿಗಳಿಗೆ ಇಷ್ಟೆಲ್ಲಾ ಸೌಲಭ್ಯಗಳನ್ನು ನೀಡುತ್ತಿರುವ ಈ ಕಂಪೆನಿಯೇ ಮೈಕ್ರೋಸಾಫ್ಟ್. ಮೈಕ್ರೋಸಾಫ್ಟ್ ಪ್ರಪಂಚದಾದ್ಯಂತ ಅನೇಕ ಶಾಖೆಗಳನ್ನು ಹೊಂದಿದೆ. ಇದಲ್ಲದೇ ಭಾರತದಲ್ಲಿಯೂ ಹಲವಾರು ಕಂಪನಿಗಳನ್ನು ಹೊಂದಿದೆ. ಇತ್ತೀಚೆಗೆ ಮೈಕ್ರೋಸಾಫ್ಟ್ ಉದ್ಯೋಗಿಗಳ ಗುಂಪು ಹೈದರಾಬಾದ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಫುಡ್ ಕೋರ್ಟ್ನಿಂದ ಹಿಡಿದು ಉದ್ಯೋಗಿಗಳಿಗೆ ವಿಶ್ರಾಂತಿಯನ್ನು ಪಡೆಯಲು ವಿಶೇಷ ಮಲಗುವ ಕೋಣೆಯ ವರೆಗೆ ಎಷ್ಟೆಲ್ಲಾ ಸೌಲಭ್ಯಗಳಿವೆ ಎಂಬುದನ್ನು ವಿಡಿಯೋದಲ್ಲಿ ಚಿತ್ರೀಕರಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮದುವೆ; ದೃಷ್ಟಿಹೀನ ಕುಶಲಕರ್ಮಿಗಳಿಂದ ತಯಾರಾಗುತ್ತಿದೆ ವಿಶೇಷ ಉಡುಗೊರೆ

@twosisterslivingtheirlife ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಇಲ್ಲಿಯವರೆಗೆ 3.8 ಮಿಲಿಯನ್​​ ಅಂದರೆ 38 ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ. ಎರಡು ಲಕ್ಷಕ್ಕೂ ಹೆಚ್ಚು ಜನರು ವಿಡಿಯೋ ಲೈಕ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ