ರಜಾದಿನಗಳಲ್ಲಿಯೂ ಕೆಲಸ ಮಾಡಬೇಕು, ಕಡಿಮೆ ಸಂಬಳ. ಒಮ್ಮೆ ಈ ಕಂಪೆನಿ ಬಿಟ್ಟು ಎಲ್ಲಾದರೊಂದು ಒಳ್ಳೆಯ ಕಂಪೆನಿ ಸೇರಿ, ಹೆಚ್ಚು ಸಂಬಳ ಪಡೆಯಬೇಕು ಎಂಬುದು ಸಾಕಷ್ಟು ಜನರ ಕನಸು. ನಿಮ್ಮ ಕನಸ್ಸಿಗೆ ತಕ್ಕಂತೆ ಸಕಲ ಸೌಲಭ್ಯಗಳನ್ನು ಒದಗಿಸುವ ಕಂಪೆನಿಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮ್ಮ ಕಚೇರಿಯಲ್ಲಿ ಯಾವ ರೀತಿಯ ಸೌಲಭ್ಯಗಳು ಇರುತ್ತವೆ ಎಂಬುದನ್ನು ವಿಡಿಯೋದ ಮೂಲಕ ಅಲ್ಲಿನ ಉದ್ಯೋಗಿಗಳು ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಉದ್ಯೋಗಿಗಳಿಗೆ ಇಷ್ಟೆಲ್ಲಾ ಸೌಲಭ್ಯಗಳನ್ನು ನೀಡುತ್ತಿರುವ ಈ ಕಂಪೆನಿಯೇ ಮೈಕ್ರೋಸಾಫ್ಟ್. ಮೈಕ್ರೋಸಾಫ್ಟ್ ಪ್ರಪಂಚದಾದ್ಯಂತ ಅನೇಕ ಶಾಖೆಗಳನ್ನು ಹೊಂದಿದೆ. ಇದಲ್ಲದೇ ಭಾರತದಲ್ಲಿಯೂ ಹಲವಾರು ಕಂಪನಿಗಳನ್ನು ಹೊಂದಿದೆ. ಇತ್ತೀಚೆಗೆ ಮೈಕ್ರೋಸಾಫ್ಟ್ ಉದ್ಯೋಗಿಗಳ ಗುಂಪು ಹೈದರಾಬಾದ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಫುಡ್ ಕೋರ್ಟ್ನಿಂದ ಹಿಡಿದು ಉದ್ಯೋಗಿಗಳಿಗೆ ವಿಶ್ರಾಂತಿಯನ್ನು ಪಡೆಯಲು ವಿಶೇಷ ಮಲಗುವ ಕೋಣೆಯ ವರೆಗೆ ಎಷ್ಟೆಲ್ಲಾ ಸೌಲಭ್ಯಗಳಿವೆ ಎಂಬುದನ್ನು ವಿಡಿಯೋದಲ್ಲಿ ಚಿತ್ರೀಕರಿಸಿದ್ದಾರೆ.
ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮದುವೆ; ದೃಷ್ಟಿಹೀನ ಕುಶಲಕರ್ಮಿಗಳಿಂದ ತಯಾರಾಗುತ್ತಿದೆ ವಿಶೇಷ ಉಡುಗೊರೆ
@twosisterslivingtheirlife ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಇಲ್ಲಿಯವರೆಗೆ 3.8 ಮಿಲಿಯನ್ ಅಂದರೆ 38 ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ. ಎರಡು ಲಕ್ಷಕ್ಕೂ ಹೆಚ್ಚು ಜನರು ವಿಡಿಯೋ ಲೈಕ್ ಮಾಡಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ