Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಮೇಕೆಗೂ ಟಿಕೆಟ್ ಖರೀದಿಸಿದ್ದೇನೆ’; ನಮ್ಮ ದೇಶಕ್ಕೆ ಇಂಥ ಪ್ರಾಮಾಣಿಕ ನಾಯಕಿ ಬೇಕು ಎನ್ನುತ್ತಿರುವ ನೆಟ್ಟಿಗರು

Woman: ಇವಳೇ ನಮ್ಮ ನಿಜವಾದ ನಾಯಕಿ ಮತ್ತು ಮಹಿಳಾವಾದಿ. ಈಕೆ ಹೇಗಿದ್ದರೂ ಏನು ಕೆಲಸ ಮಾಡಿಕೊಂಡಿದ್ದರೂ ಸರಿ. ಈಕೆಯೇ ನಮ್ಮ ನಾಯಕಿಯಾಗಬೇಕು.ಇಂಥ ಪ್ರಾಮಾಣಿಕ ಜನರು ನಮ್ಮ ದೇಶಕ್ಕೆ ಬೇಕು ಎಂದು ನೆಟ್ಟಿಗರು ಸಂಭ್ರಮಿಸುತ್ತಿದ್ದಾರೆ. ಆತ್ಮವಿಶ್ವಾಸದಿಂದ ಅರಳಿರುವ ಆಕೆಯ ಮುಖವನ್ನು ನೋಡಿ ಚೈತನ್ಯ ತಂದುಕೊಳ್ಳುತ್ತಿದ್ದಾರೆ.

Viral Video: 'ಮೇಕೆಗೂ ಟಿಕೆಟ್ ಖರೀದಿಸಿದ್ದೇನೆ'; ನಮ್ಮ ದೇಶಕ್ಕೆ ಇಂಥ ಪ್ರಾಮಾಣಿಕ ನಾಯಕಿ ಬೇಕು ಎನ್ನುತ್ತಿರುವ ನೆಟ್ಟಿಗರು
'ನನ್ನ ಮೇಕೆಗೂ ನಾನು ಟೆಕೆಟ್ ಖರೀದಿಸಿದ್ದೇನೆ'
Follow us
ಶ್ರೀದೇವಿ ಕಳಸದ
|

Updated on: Sep 06, 2023 | 4:23 PM

Honesty : ಮಹಿಳೆಯೊಬ್ಬಳು ತನ್ನ ಮೇಕೆಯೊಂದಿಗೆ (Goat) ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಳೆ. ಅಲ್ಲಿಗೆ ಬಂದ ಟಿಕೆಟ್​ ಪರಿವೀಕ್ಷಕರು ​ಮೇಕೆಗೂ ಟಿಕೆಟ್​ ಖರೀದಿಸಿದ್ದೀರಾ? ಎಂದು ಕೇಳುತ್ತಾರೆ. ಆಕೆ ನಗುತ್ತ, ಆತ್ಮವಿಶ್ವಾಸದಿಂದ ಮತ್ತು ಹೆಮ್ಮೆಯಿಂದ ಹೌದು, ಮೇಕೆಗೂ ಟಿಕೆಟ್​​ ಖರೀದಿಸಿದ್ದೇನೆ ಎಂದು ಹೇಳುತ್ತಾಳೆ. ಬೆಂಗಾಲಿಯಲ್ಲಿ ನಡೆದ ಈ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ನೆಟ್ಟಿಗರ ಮನಸ್ಸನ್ನು ಗೆಲ್ಲುತ್ತಿದೆ. ಪಶ್ಚಿಮ ಬಂಗಾಳದ (West Bengal) ರೈಲಿನಲ್ಲಿ ಈ ವಿಡಿಯೋ ಸೆರೆಹಿಡಿಯಲಾಗಿದೆ. ನೆಟ್ಟಿಗರು ಹೃದಯಸ್ಪರ್ಶಿಯಾದ ವಿಡಿಯೋಗೆ ಪ್ರತಿಕ್ರಿಯಿಸಿ ತಮ್ಮ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ :Viral Video: 23 ಶಸ್ತ್ರಚಿಕಿತ್ಸೆಗಳ ನಂತರ ನನ್ನನ್ನು ನಾನೇ ಅಪ್ಪಿಕೊಂಡೆ, ಒಪ್ಪಿಕೊಂಡೆ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

‘ಈಕೆ ತನ್ನ ಮೇಕೆಗೂ ರೈಲು ಟಿಕೆಟ್​ ಖರೀದಿಸಿದ್ದಾಳೆ, ಈ ವಿಷಯವನ್ನು ಟಿಕೆಟ್​ ಪರಿವೀಕ್ಷಕರಿಗೆ ಹೆಮ್ಮೆಯಿಂದ  ಹೇಳುವಾಗ ಆಕೆಯ ಮುಖದಲ್ಲಿ ಅರಳಿದ ನಗುವನ್ನು ನೋಡಿ, ಅದ್ಭುತವಾಗಿದೆಯಲ್ಲ’ ಎಂದು X ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ ಐಎಎಸ್ ಅಧಿಕಾರಿ ಅವನೀಶ್ ಶರಣ.

ಮೇಕೆಗೂ ಟಿಕೆಟ್ ಖರೀದಿಸಿದ್ದೇನೆ!

ಸೆ. 6ರಂದು ಹಂಚಿಕೊಂಡ ಈ ವಿಡಿಯೋ ಅನ್ನು ಈತನಕ 80,000 ಕ್ಕಿಂತಲೂ ಹೆಚ್ಚು ಜನರು ನೋಡಿದ್ದಾರೆ. 2,900 ಜನರು ಲೈಕ್ ಮಾಡಿದ್ದಾರೆ. ಸುಮಾರು 400 ಜನರು ರೀಪೋಸ್ಟ್ ಮಾಡಿದ್ದಾರೆ. ಅವಳ ನಗುವೇ ಅವಳ ಮನಸ್ಸನ್ನು ಹೇಳುತ್ತಿದೆ ಎಂದಿದ್ದಾರೆ ಒಬ್ಬರು. ನಿಜಕ್ಕೂ ನಮ್ಮ ದೇಶಕ್ಕೆ ಇಂಥ ಪ್ರಾಮಾಣಿಕ ಜನರು ಬೇಕು ಎಂದಿದ್ದಾರೆ ಇನ್ನೊಬ್ಬರು.

ಇದನ್ನೂ ಓದಿ : Viral Video: ಕಾಡಿನ ರಾಜ ಕಾರುಗಳ ಮಧ್ಯೆ ಕಾರುಬಾರು ಮಾಡದೇ ಹೋದ ವಿಡಿಯೋ ವೈರಲ್

ಈ ನಗುವಿನ ಕಿರಣಗಳು ಕತ್ತಲೆಯಾದ ಮೂಲೆಗಳನ್ನು ಬೆಳಗುತ್ತಿದೆ, ಇವಳ ಸರಳತನ ಹೃದಯವನ್ನು ಸ್ಪರ್ಷಿಸುತ್ತಿದೆ ಎಂದಿದ್ದಾರೆ ಇನ್ನೊಬ್ಬರು. ಇವಳೇ ನಾಯಕಿ! ಇಂಥ ಸ್ತ್ರೀವಾದಿ ನಮಗೆ ಬೇಕು, ಆಕೆ ಹೇಗಿದ್ದರೂ ಏನು ಕೆಲಸ ಮಾಡಿಕೊಂಡಿದ್ದರೂ ಸರಿ ಎಂದಿದ್ದಾರೆ ಇನ್ನೊಬ್ಬರು. ಟಿಕೆಟ್​ ಇಲ್ಲದೆಯೇ ಮುಂಬೈ ಸೇರಿದ ಅನೇಕ ಹೆಣ್ಣುಮಕ್ಕಳು ಇಂದು ಕೋಟ್ಯಾಧಿಪತಿಗಳಾಗಿದ್ದಾರೆ ಎಂದಿದ್ದಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್