ಕರ್ನಾಟಕದಲ್ಲೇ ಕನ್ನಡವನ್ನು ಮರೆಯುತ್ತಿರುವ, ಕಡೆಗಣಿಸುತ್ತಿರುವ ಈ ಸಂದರ್ಭದಲ್ಲಿ ಹೊರ ದೇಶದಿಂದ ಬಂದ ಯುವತಿಯೊಬ್ಬಳು ಇದೀಗ ಎಲ್ಲರ ಮನ ಗೆದ್ದಿದ್ದಾಳೆ. ಮೂಲತಃ ಜರ್ಮನಿಯಲ್ಲಿ ಹುಟ್ಟಿದ ಬೆಳೆದ ಯುವತಿ ಜೆನಿಫರ್ ಇತ್ತೀಚಿನ ದಿನಗಳಲ್ಲಿ ಕನ್ನಡಿಗರ ಮನೆಮಾತಾಗುತ್ತಿದ್ದಾಳೆ. ಹೌದು ಜೆನಿಫರ್ ಬಾಯಲ್ಲಿ ಕನ್ನಡ ಕೇಳುವುದೇ ಒಂದು ಚಂದ ಎಂದು ಎನ್ನುತ್ತಿದ್ದಾರೆ ನೆಟ್ಟಿಗರು. ಸೋಶಿಯಲ್ ಮೀಡಿಯಾ ಮೂಲಕ ಕನ್ನಡಿಗರ ಹೃದಯ ಗೆದ್ದಿರುವ ಈಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ಆಕ್ಟೀವ್ ಆಗಿರುವ ಜೆನಿಫರ್ ಕರ್ನಾಟಕದಲ್ಲಿ ನೆಲೆಸಿದ್ದು, ಈಗ ಎಲ್ಲರೂ ಬೆರಗಾಗುವಂತೆ, ಇಷ್ಟಪಟ್ಟು ಕನ್ನಡ ಮಾತನಾಡುತ್ತಾರೆ. ಅವರ ಕನ್ನಡ ಕೇಳಿ ನೆಟ್ಟಿಗರು ಫಿದಾ ಆಗಿದ್ದಾರೆ. ಸದ್ಯ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗುತ್ತಿದೆ.
German Citizen Jenifer currently staying in Karnataka learns Kannada and tries to converse in Kannada with locals.
Look at the appreciation she gets for speaking in Kannada.
If Germans can why can’t Indians learn and speak Kannada with Kannadigas? #Bengaluru pic.twitter.com/SCziGxVwiX
— 👑Che_ಕೃಷ್ಣ🇮🇳💛❤️ (@ChekrishnaCk) September 9, 2024
ಇದನ್ನೂ ಓದಿ: ಅಬ್ಬಬ್ಬಾ ಎಂಥಾ ಫ್ರೆಂಡ್‌ಶಿಪ್ ನೋಡಿ, ಬೆಸ್ಟ್ ಫ್ರೆಂಡ್ ಕಚ್ಚಿದ ಗುರುತಿನ ಮೇಲೆ ಟ್ಯಾಟೂ ಹಾಕಿಸಿಕೊಂಡ ಯುವಕ
@ChekrishnaCk ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಸೆ.09ರಂದು ಹಂಚಿಕೊಂಡಿರುವ ವಿಡಿಯೋ ಕೇವಲ ಒಂದೇ ದಿನದಲ್ಲಿ 1.2 ಮಿಲಿಯನ್ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ