Viral Video: ಮದುವೆಯಲ್ಲಿ ಗೆಳೆಯನನ್ನೇ ಶೂಟ್ ಮಾಡಿದ ಮದುಮಗ; ಹಸೆಮಣೆ ಏರಬೇಕಾದ ವರ ಜೈಲು ಸೇರಿದ

ಮೃತ ವ್ಯಕ್ತಿಯ ಕುಟುಂಬದವರು ಎಫ್‌ಐಆರ್ ದಾಖಲಿಸಿದ್ದು, ಕೊಲೆ ಮಾಡಿದ ಆರೋಪದಲ್ಲಿ ವರನನ್ನು ಬಂಧಿಸಲಾಗಿದೆ. ಗುಂಡಿನ ದಾಳಿಗೆ ಬಳಸಿದ್ದ ಬಂದೂಕನ್ನೂ ವಶಪಡಿಸಿಕೊಳ್ಳಲಾಗಿದೆ.

Viral Video: ಮದುವೆಯಲ್ಲಿ ಗೆಳೆಯನನ್ನೇ ಶೂಟ್ ಮಾಡಿದ ಮದುಮಗ; ಹಸೆಮಣೆ ಏರಬೇಕಾದ ವರ ಜೈಲು ಸೇರಿದ
ಮದುವೆ ಮೆರವಣಿಗೆ ವೇಳೆ ಗೆಳೆಯನಿಗೆ ಗುಂಡು ಹಾರಿಸಿದ ಮದುಮಗ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 24, 2022 | 11:49 AM

ಮದುವೆಯೆಂದರೆ ಸಂಭ್ರಮ, ಖುಷಿ, ಸಡಗರ. ಆದರೆ, ಮದುವೆಯ ಸಂಭ್ರಮದಲ್ಲಿ ಕೆಲವೊಮ್ಮೆ ಅವಘಡಗಳು ಕೂಡ ನಡೆದುಬಿಡುತ್ತವೆ. ಉತ್ತರ ಪ್ರದೇಶದ (Uttar Pradesh) ಸೋನಭದ್ರ ಜಿಲ್ಲೆಯ ಬ್ರಹ್ಮನಗರದಲ್ಲಿ ತನ್ನ ಮದುವೆಯ ಸಂಭ್ರಮದಲ್ಲಿದ್ದ ವರ ಮದುವೆಯ ಮೆರವಣಿಗೆ ವೇಳೆ ಖುಷಿಗಾಗಿ ಗಾಳಿಯಲ್ಲಿ ಗುಂಡು (Firing) ಹಾರಿಸಿದ್ದಾನೆ. ಈ ಗುಂಡು ಆತನ ಗೆಳೆಯನಿಗೆ ತಾಗಿ ಆತ ಸಾವನ್ನಪ್ಪಿದ್ದಾನೆ. ಇದರಿಂದಾಗಿ ಸಂಭ್ರಮ ತುಂಬಿದ್ದ ಮದುವೆಮನೆಯಲ್ಲಿ (Wedding Celebration) ಸೂತಕಛಾಯೆ ಆವರಿಸಿದೆ. ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಡಬೇಕಾಗಿದ್ದ ವರ ಇದೀಗ ಕೊಲೆಯ ಆರೋಪದಲ್ಲಿ ಜೈಲು ಸೇರಿದ್ದಾನೆ!

ಈ ಆಘಾತಕಾರಿ ಘಟನೆಯ ವಿಡಿಯೋ ಭಾರೀ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವರ ಮನೀಶ್ ಮಧೇಶಿಯಾ ತನ್ನ ಮದುವೆಯ ಮೆರವಣಿಗೆಯ ವೇಳೆ ರಥದ ಮೇಲೆ ಬರುವಾಗ ಸಂಭ್ರಮಾಚರಣೆಯ ಅಂಗವಾಗಿ ಗುಂಡು ಹಾರಿಸಿದ್ದಾನೆ. ಈ ಸಂದರ್ಭದಲ್ಲಿ ಆತ ಹಾರಿಸಿದ ಗುಂಡು ಸೈನಿಕನಾಗಿದ್ದ ಆತನ ಸ್ನೇಹಿತ ಬಾಬು ಲಾಲ್ ಯಾದವ್ ಅವರಿಗೆ ತಗುಲಿದೆ. ವರ ಗಾಳಿಯಲ್ಲಿ ಗುಂಡು ಹಾರಿಸಲು ಬಳಸಿದ ಗನ್ ಕೂಡ ಬಾಬು ಲಾಲ್ ಯಾದವ್ ಅವರದ್ದು. ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಗುಂಡು ತಗುಲಿ ತೀವ್ರವಾಗಿ ಗಾಯಗೊಂಡಿದ್ದ ಬಾಬು ಲಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯ ಕುಟುಂಬದವರು ಎಫ್‌ಐಆರ್ ದಾಖಲಿಸಿದ್ದು, ಕೊಲೆ ಮಾಡಿದ ಆರೋಪದಲ್ಲಿ ವರನನ್ನು ಬಂಧಿಸಲಾಗಿದೆ. ಗುಂಡಿನ ದಾಳಿಗೆ ಬಳಸಿದ್ದ ಬಂದೂಕನ್ನೂ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Viral Video: ವೇಗವಾಗಿ ಬರುತ್ತಿದ್ದ ರೈಲಿನೆದುರು ಬಿದ್ದಿದ್ದ ವ್ಯಕ್ತಿಯ ಜೀವ ಉಳಿಸಿದ ರೈಲ್ವೆ ಸಿಬ್ಬಂದಿ; ಶಾಕಿಂಗ್ ವಿಡಿಯೋ ವೈರಲ್

ಮದುವೆ ಮತ್ತು ದೇಗುಲ ಸೇರಿದಂತೆ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಲೈಸನ್ಸ್ ಪಡೆದ ಬಂದೂಕುಗಳಿದ್ದರೂ ಸಹ ಸಂಭ್ರಮದಿಂದ ಗುಂಡು ಹಾರಿಸುವುದು ಭಾರತದಲ್ಲಿ ಕ್ರಿಮಿನಲ್ ಅಪರಾಧವಾಗಿದೆ.

Published On - 11:47 am, Fri, 24 June 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್