Viral Video: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವು

ಬೀಳ್ಕೊಡುಗೆ ಸಮಾರಂಭದಲ್ಲಿ ಹೆಡ್‌ಕಾನ್ಸ್‌ಟೇಬಲ್‌ ರವಿಕುಮಾರ್‌ ಎಲ್ಲರೊಂದಿಗೆ ಸಂತೋಷದಿಂದ ಡ್ಯಾನ್ಸ್ ಮಾಡುತ್ತಿದ್ದಾಗಲೇ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸಹ ಸಿಬ್ಬಂದಿಗಳು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

Viral Video: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವು
Follow us
|

Updated on: Aug 30, 2024 | 3:10 PM

ದೆಹಲಿ: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವನ್ನಪ್ಪಿರುವ ಘಟನೆ ಉತ್ತರ ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸಾವಿಗೂ ಕೆಲ ನಿಮಿಷಗಳ ಮುನ್ನ ಎಲ್ಲರೊಂದಿಗೆ ಕಾನ್‌ಸ್ಟೆಬಲ್ ಡ್ಯಾನ್ಸ್ ಮಾಡಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ದೆಹಲಿಯ ರೂಪನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡುತ್ತಿರುವ ರವಿಕುಮಾರ್ ಅವರು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ವರ್ಗಾವಣೆಯಾಗುತ್ತಿದ್ದಂತೆ ಬೀಳ್ಕೊಡುಗೆ ಪಾರ್ಟಿ ಆಯೋಜಿಸಿದ್ದರು. ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಹೆಡ್‌ಕಾನ್ಸ್‌ಟೇಬಲ್‌ ರವಿಕುಮಾರ್‌ ಎಲ್ಲರೊಂದಿಗೆ ಕುಣಿದು ಕುಪ್ಪಳಿಸಿದ್ದರು. ಆದರೆ ಡ್ಯಾನ್ಸ್ ಮಾಡುತ್ತಿದ್ದಾಗಲೇ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸಹ ಸಿಬ್ಬಂದಿಗಳು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ತಪಾಸಣೆ ನಡೆಸಿದ ವೈದ್ಯರು ರವಿಕುಮಾರ್ ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ರೈಲು ಬರುವ ವೇಳೆ ಹಳಿ ದಾಟಿದ ಮಹಿಳೆ; ಪ್ರಾಣ ಪಣಕಿಟ್ಟು ಕಾಪಾಡಿದ ಆರ್‌ಪಿಎಫ್ ಸಿಬ್ಬಂದಿ

ಉತ್ತರ ಪ್ರದೇಶದ ಬಾಗ್‌ಪತ್‌ ಮೂಲದ ರವಿಕುಮಾರ್‌ 2010ರಲ್ಲಿ ಪೊಲೀಸ್​ ಆಗಿ ನೇಮಕಗೊಂಡಿದ್ದರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಹೆಡ್ ಕಾನ್‌ಸ್ಟೆಬಲ್ ರವಿಕುಮಾರ್ ಈಗಾಗಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು 45 ದಿನಗಳ ಹಿಂದೆ ಆಂಜಿಯೋಗ್ರಫಿಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರ ಕಿತ್ತಾಕೋಕೆ ಏನು ಕಡ್ಲೆಕಾಯಿ ಗಿಡನಾ? ಡಿಕೆ ಶಿವಕುಮಾರ್‌
ಸರ್ಕಾರ ಕಿತ್ತಾಕೋಕೆ ಏನು ಕಡ್ಲೆಕಾಯಿ ಗಿಡನಾ? ಡಿಕೆ ಶಿವಕುಮಾರ್‌
‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ
ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ
ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ