AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿಮರಿಯನ್ನು ಕೊಂಡಾಟ ಮಾಡಿದ ಯುವತಿ; ಆರೋಗ್ಯಕರ ಸಂಭಾಷಣೆ ನೋಡಿ ಮನಸೋತ ನೆಟ್ಟಿಗರು

ಮುದ್ದಾದ ನಾಯಿಮರಿಯೊಂದಿಗೆ ಯುವತಿಯೊಬ್ಬಳು ನಡೆಸಿದ ಆರೋಗ್ಯಕರ ಸಂಭಾಷಣೆಯ ವಿಡಿಯೋ ನೆಟ್ಟಿಗರ ಮನಗೆದ್ದಿದ್ದು, 2 ಲಕ್ಷಕ್ಕೂ ಹೆಚ್ಚು ಲೈಕ್​ಗಳನ್ನು ಪಡೆದುಕೊಂಡಿದೆ.

Viral Video: ನಾಯಿಮರಿಯನ್ನು ಕೊಂಡಾಟ ಮಾಡಿದ ಯುವತಿ; ಆರೋಗ್ಯಕರ ಸಂಭಾಷಣೆ ನೋಡಿ ಮನಸೋತ ನೆಟ್ಟಿಗರು
ನಾಯಿ ಮರಿ ಮತ್ತು ಯುವತಿಯ ಮುದ್ದಾದ ಸಂಭಾಷಣೆ
TV9 Web
| Edited By: Rakesh Nayak Manchi|

Updated on:Oct 17, 2022 | 11:03 AM

Share

ಪುಟ್ಟ ಪ್ರಾಣಿಗಳು ಮತ್ತು ಮನುಷ್ಯರ ನಡುವಿನ ಸಂವಹನವು ಯಾವಾಗಲೂ ನೋಡಲು ಆರೋಗ್ಯಕರವಾಗಿರುತ್ತದೆ. ಒಂದೊಮ್ಮೆ ಪ್ರಾಣಿಗಳಿಗೆ ಪ್ರೀತಿ ನೀಡಿದರೆ ಅವುಗಳು ಮನುಷ್ಯರನ್ನು ತುಂಬಾ ಹಚ್ಚಿಕೊಂಡು ಬಿಡುತ್ತವೆ. ಇಂತಹ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರನ್ನು ಹೆಚ್ಚು ಆಕರ್ಷಿಸುತ್ತದೆ. ಇದೇ ಕಾರಣಕ್ಕೆ ಸಣ್ಣ ನಾಯಿಮರಿಯೊಂದು ಇಂಟರ್ನೆಟ್​ನಲ್ಲಿ ವೈರಲ್ ಆಗುತ್ತಿದೆ. ಮುದ್ದಾದ ನಾಯಿಮರಿ ಜೊತೆ ಯುವತಿಯೊಬ್ಬಳು ಆರೋಗ್ಯಯುತವಾದ ಸಂಭಾಷಣೆ ನಡೆಸುವುದನ್ನು ತೋರಿಸುವ ವಿಡಿಯೋ ಇದಾಗಿದೆ.

ಸಾಮಾನ್ಯವಾಗಿ ಹೆಚ್ಚಿನ ಯುವತಿಯರಿಗೆ ನಾಯಿಗಳೆಂದರೆ ಇಷ್ಟ. ಈ ಸಮೂಹಕ್ಕೆ ಸೇರಿದವರು ನಾಯಿಮರಿ ಎಲ್ಲಿ ಕಂಡರೂ ಮುದ್ದಾಡುತ್ತಾರೆ. ವಿಡಿಯೋದಲ್ಲಿ ಕಾಣುವಂತೆ, ಸ್ಥಳೀಯ ಉಪಾಹಾರ ಗೃಹದ ಹೊರಗೆ ಯುವತಿ ಕುಳಿತಿದ್ದಾಗ ನಾಯಿಮರಿ ಆಕೆಯ ಬಳಿ ಬರುತ್ತದೆ. ಈ ವೇಳೆ ಯುವತಿ ನಾಯಿಮರಿಯೊಂದಿಗೆ ಮಾತನಾಡಲು ಆರಂಭಿಸುತ್ತಾಳೆ. ಸ್ವಲ್ಪದರಲ್ಲೇ ನಾಯಿಮರಿಯು ಆಕೆಗೆ ಶೇಕ್ ಹ್ಯಾಂಡ್ ಮಾಡಲು ಮುಂದಾಗುತ್ತದೆ. ಈ ವೇಳೆ ಯುವತಿಯೂ ಆ ಮರಿಯ ಕೈಯನ್ನು ಹಿಡಿಯುತ್ತಾಳೆ. ನಂತರ ಮರಿಯ ತಲೆ ಸವರುತ್ತಾಳೆ.

ಅನುರಾಗ್ ಪಾಟೀಲ್ ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, “ಈ ರೀತಿಯ ಸಂಭಾಷಣೆಗಳು ತುಂಬಾ ಆರೋಗ್ಯಕರವಾಗಿವೆ” ಎಂದು ಶೀರ್ಷಿಕೆ ಬರೆದಿದ್ದಾರೆ. ಸೆಪ್ಟೆಂಬರ್ 28 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಈಗಾಗಲೇ 2.7 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದುಕೊಂಡಿದೆ. ಮರಿ ಮತ್ತು ಯುವತಿಯ ನಡುವಿನ ಸಂಭಾಷಣೆ ನೋಡಿದ ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿ ಅದನ್ನು ಮನೆಗೆ ಕೊಂಡೊಯ್ಯುವಂತೆ ಹೇಳಿದ್ದಾರೆ.

View this post on Instagram

A post shared by Anurag (@anurag_patil27)

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Mon, 17 October 22

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್