Viral Video: ಲೋಕದ ಚಿಂತೆ ನನಗ್ಯಾಕೆ!; ಬಸ್​ ಸ್ಟಾಪ್​ನಲ್ಲೇ ನಿಂತು ಡ್ಯಾನ್ಸ್​ ಮಾಡಿದ ವ್ಯಕ್ತಿಯ ವಿಡಿಯೋ ವೈರಲ್

ತನ್ನ ಸುತ್ತಮುತ್ತ ನಿಂತಿರುವವರನ್ನು ಲೆಕ್ಕಿಸದೆ ಬಸ್​ ಸ್ಟಾಪ್​ನಲ್ಲಿ ಡ್ಯಾನ್ಸ್​ ಮಾಡುತ್ತಿರುವ ವ್ಯಕ್ತಿಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.

Viral Video: ಲೋಕದ ಚಿಂತೆ ನನಗ್ಯಾಕೆ!; ಬಸ್​ ಸ್ಟಾಪ್​ನಲ್ಲೇ ನಿಂತು ಡ್ಯಾನ್ಸ್​ ಮಾಡಿದ ವ್ಯಕ್ತಿಯ ವಿಡಿಯೋ ವೈರಲ್
ಬಸ್​ ಸ್ಟಾಪ್​ನಲ್ಲಿ ಡ್ಯಾನ್ಸ್​ ಮಾಡಿದ ವ್ಯಕ್ತಿಯ ವಿಡಿಯೋ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 18, 2022 | 5:00 PM

ನಮ್ಮನ್ನು ನಾವು ಚೆನ್ನಾಗಿ ನೋಡಿಕೊಂಡರೆ, ನಾವು ಖುಷಿಯಾಗಿದ್ದರೆ ಜಗತ್ತೆಲ್ಲ ಖುಷಿಯಾಗಿ ಕಾಣುತ್ತದೆ ಎಂಬ ಮಾತಿದೆ. ಯಾರು ಏನಂದುಕೊಳ್ಳುತ್ತಾರೋ ಎಂಬ ಯೋಚನೆಯಿಲ್ಲದೆ ತಮಗೇನು ಇಷ್ಟವೋ ಅದನ್ನು ಮಾಡುವವರು ಬೇರೆಯವರ ಕಣ್ಣಿಗೆ ವಿಚಿತ್ರವಾಗಿ ಕಂಡರೂ ಅವರು ಮಾತ್ರ ತಮ್ಮ ಆ ಕ್ಷಣವನ್ನು ಭಾರೀ ಎಂಜಾಯ್ ಮಾಡುತ್ತಿರುತ್ತಾರೆ. ನಾವು ನಮಗಾಗಿ ಬದುಕಬೇಕು ಎಂಬುದನ್ನು ತೋರಿಸಿಕೊಡುವ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿದೆ. ಇಂಗ್ಲೆಂಡ್​ನ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದಲ್ಲಿ ತನಗನಿಸಿದ ಹಾಗೆ ಹಾಯಾಗಿ ಡ್ಯಾನ್ಸ್​ ಮಾಡುತ್ತಿರುವ ವಿಡಿಯೋ ವೈರಲ್ (Video Viral) ಆಗಿದೆ.

ತನ್ನ ಸುತ್ತಮುತ್ತ ನಿಂತಿರುವವರನ್ನು ಲೆಕ್ಕಿಸದೆ ಬಸ್​ ಸ್ಟಾಪ್​ನಲ್ಲಿ ಡ್ಯಾನ್ಸ್​ ಮಾಡುತ್ತಿರುವ ವ್ಯಕ್ತಿಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಆ ದಾರಿಯಲ್ಲಿ ಹೋಗುತ್ತಿರುವವರೆಲ್ಲ ಆ ವ್ಯಕ್ತಿಯನ್ನೇ ನೋಡುತ್ತಿದ್ದರೂ ಅದಕ್ಕೆ ಕೇರ್ ಮಾಡದ ಆ ವ್ಯಕ್ತಿ ತನ್ನ ಪಾಡಿಗೆ ಡ್ಯಾನ್ಸ್​ ಮಾಡುತ್ತಾ ಎಂಜಾಯ್ ಮಾಡುತ್ತಿದ್ದಾರೆ.

ಇಂಗ್ಲೆಂಡ್‌ನ ಲಿವರ್‌ಪೂಲ್‌ನ ಗ್ರೇಟ್ ಹೋಮರ್ ಸ್ಟ್ರೀಟ್‌ನಲ್ಲಿ ಬಸ್ ನಿಲ್ದಾಣದ ಎದುರು ಕಾಯುತ್ತಿದ್ದ ಹೇಲಿ ಲೂಯಿಸ್ ಎಂಬ ವ್ಯಕ್ತಿ ಮನಸೋಇಚ್ಛೆ ಬಸ್​ ಸ್ಟಾಪ್​ನಲ್ಲೇ ಡ್ಯಾನ್ಸ್​ ಮಾಡುತ್ತಿದ್ದ ವ್ಯಕ್ತಿಯೊಬ್ಬರ ವಿಡಿಯೋವನ್ನು ರೆಕಾರ್ಡ್​ ಮಾಡಿದ್ದಾರೆ. ಈ ವಿಡಿಯೋಗೆ ಟ್ವಿಟ್ಟರ್​ನಲ್ಲಿ ಇಲ್ಲಿಯವರೆಗೆ ಸುಮಾರು 3 ಲಕ್ಷ ವೀಕ್ಷಣೆಗಳು ಮತ್ತು 5,600 ಲೈಕ್ಸ್​ ಬಂದಿವೆ.

ಇದನ್ನೂ ಓದಿ: Viral Video: ಸತ್ತ ಗೆಳೆಯನನ್ನು ಹೂಳಲು ತಾವೇ ಬಾಯಿಯಿಂದ ಮಣ್ಣು ತೋಡಿದ ನಾಯಿಗಳು; ಕಣ್ತುಂಬುವ ವಿಡಿಯೋ ಇಲ್ಲಿದೆ

Viral News: ಶಾಪಿಂಗ್ ಮಾಡುವಾಗ ಗಂಡ ಕಿರಿಕಿರಿ ಮಾಡ್ತಾನಾ?; ಈ ಮಾಲ್​ನಲ್ಲಿದೆ ಹಸ್ಬೆಂಡ್ ಸ್ಟೋರೇಜ್ ಪಾಡ್ಸ್

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ