AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೋಗಿ ಆತ್ಮದ ಜೊತೆಗೆ ಮಾತನಾಡಿದ ಆಸ್ಪತ್ರೆ ಸಿಬ್ಬಂದಿ

ಇದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ ಜೊತೆಗೆ ಚರ್ಚೆಗೂ ಗ್ರಾಸವಾಗಿದೆ. ವಿಡಿಯೋದಲ್ಲಿ ಆಸ್ಪತ್ರೆ ತನ್ನಷ್ಟಕ್ಕೆ ಮುಖ್ಯ ದ್ವಾರ ಓಪನ್ ಆಗುತ್ತದೆ. ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿ ಅದೃಶ್ಯ ವ್ಯಕ್ತಿಯೊಂದಿಗೆ ಮಾತನಾಡುವುದನ್ನು ಈ ಕಾಣಬಹುದು.

Viral Video: ರೋಗಿ ಆತ್ಮದ ಜೊತೆಗೆ ಮಾತನಾಡಿದ ಆಸ್ಪತ್ರೆ ಸಿಬ್ಬಂದಿ
Viral Video Hospital staff who spoke with ghost patient
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Nov 22, 2022 | 12:39 PM

Share

ಇದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ ಜೊತೆಗೆ ಚರ್ಚೆಗೂ ಗ್ರಾಸವಾಗಿದೆ. ವಿಡಿಯೋದಲ್ಲಿ ಆಸ್ಪತ್ರೆ ತನ್ನಷ್ಟಕ್ಕೆ ಮುಖ್ಯ ದ್ವಾರ ಓಪನ್ ಆಗುತ್ತದೆ. ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿ ಅದೃಶ್ಯ ವ್ಯಕ್ತಿಯೊಂದಿಗೆ ಮಾತನಾಡುವುದನ್ನು ಈ ಕಾಣಬಹುದು. ಅರ್ಜೆಂಟೀನಾದ ಆಸ್ಪತ್ರೆಯೊಂದರಲ್ಲಿ ಪ್ರೇತ ರೋಗಿಯ ಜೊತೆಗೆ ಈ ಸಿಬ್ಬಂದಿ ಮಾತನಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಸಿಸಿಟಿವಿಯ ತುಣುಕನಲ್ಲಿ ವಿಲಕ್ಷಣ ದೃಶ್ಯವನ್ನು ನೀವು ಕಾಣುಬಹದು, ಯಾವುದೇ ರೋಗಿಯು ಕಾಣುವುದಿಲ್ಲ, ಆದರೆ ಸಿಬ್ಬಂದಿಗೆ ಮಾತ್ರ ಕಾಣುತ್ತಾರೆ. ಇದೀಗ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಹೆಚ್ಚು ಶೇರ್ ಮಾಡಲಾಗಿದೆ ಮತ್ತು ಲಕ್ಷಾಂತರ ವೀಕ್ಷಣೆ ಮಾಡಿದ್ದಾರೆ.

ಈ ತುಣುಕನ್ನು ಬೆಳಿಗ್ಗೆ 3 ಗಂಟೆಗೆ ಬ್ಯೂನಸ್ ಐರಿಸ್‌ನಲ್ಲಿರುವ ಖಾಸಗಿ ಯೋಗಕ್ಷೇಮ ಕೇಂದ್ರವಾದ ಫಿನೊಚಿಯೆಟೊ ಸ್ಯಾನಟೋರಿಯಂನಲ್ಲಿ ಸೆರೆಹಿಡಿಯಲಾಗಿದೆ ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಸ್ವಯಂಚಾಲಿತ ಪ್ರವೇಶ ಬಾಗಿಲು ತೆರೆದಾಗ ಒಬ್ಬ ಸಿಬ್ಬಂದಿ ಕುಳಿತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಆದರೆ ದೃಶ್ಯಗಳಲ್ಲಿ ಸ್ಪಷ್ಟವಾಗಿ ಯಾರು ಪ್ರವೇಶ ಮಾಡಿದ್ದರೆ ಎಂದು ತೋರಿಸುವುದಿಲ್ಲ. ಭದ್ರತಾ ಸಿಬ್ಬಂದಿ ಯಾರೋ ಪ್ರವೇಶಿಸುವುದನ್ನು ನೋಡಿದ್ದಾನೆ ನಂತರ ಕ್ಲಿಪ್‌ಬೋರ್ಡ್‌ ತೆಗೆಯುತ್ತಾನೆ, ಅದೃಶ್ಯ ರೋಗಿಯ ಬಳಿಗೆ ಹೋಗಿ ಅವನೊಂದಿಗೆ ಮಾತನಾಡಲು ಮತ್ತು ವಿವರಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದನು. ಒಂದು ಬಾರಿ ಈ ವಿಡಿಯೋ ನೋಡಿದರೆ ಭಯ ಉಂಟು ಮಾಡುವುದು ಖಂಡಿತ.

ಇದನ್ನು ಓದಿ: ವ್ಯಕ್ತಿಯೋರ್ವನಿಗೆ ಕಾಡುತ್ತಿರುವ ದೇವರಿಗೆ ಬಿಟ್ಟ ಕೋಣ! ಕೊಪ್ಪಳದಲ್ಲೊಂದು ವಿಚಿತ್ರ ಘಟನೆ

ಇಂಡಿಯಾ ಟುಡೇ ಈ ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿಕೊಂಡಿದೆ. ಡೈಲಿ ಸ್ಟಾರ್ ವರದಿಯ ಪ್ರಕಾರ, ದೃಶ್ಯಗಳನ್ನು ಹಿಂತಿರುಗಿ ನೋಡಿದರೆ, ರೋಗಿಯು ಹಿಂದಿನ ದಿನ ಈ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವ್ಯಕ್ತಿ ಎಂದು ಹೇಳಿದೆ. ಈ ವೀಡಿಯೊವನ್ನು ನೋಡಿದ ನಂತರ ಕೆಲವು ಬಳಕೆದಾರರು ಭಯಭೀತರಾಗಿ ಕಮೆಂಟ್ ಮಾಡಿದ್ದಾರೆ, ಇನ್ನೂ ಕೆಲವರು ಈ ವಿಡಿಯೋವನ್ನು ನೋಡಿ ತಮಾಷೆಯಾಗಿರಬಹುದು ಎಂದು ಹೇಳಿದ್ದಾರೆ. ಇದು ಬಹಳ ವಿಚಿತ್ರವಾಗಿದೆ. ಒಂದೋ ಸಿಬ್ಬಂದಿ ಕ್ಯಾಮೆರಾದ ಮುಂದೆ ಜೋಕ್ ಆಡುತ್ತಿದ್ದಾರೆ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ