AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಪುಟ್ಟ ಸಹಾಯದ ಮೂಲಕ ಟ್ರಾಫಿಕ್ ಪೊಲೀಸರ ಮುಖದಲ್ಲಿ ನಗು ಮೂಡಿಸಿದ ವ್ಯಕ್ತಿ

ಟ್ರಾಫಿಕ್ ಪೊಲೀಸರಿಗೆ ಬೈಕ್​​ ಸವಾರನೊಬ್ಬ ನೀರು ನೀಡಿ ತನ್ನಿಂದಾದ ಪುಟ್ಟ ಸಹಾಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Video Viral: ಪುಟ್ಟ ಸಹಾಯದ ಮೂಲಕ ಟ್ರಾಫಿಕ್ ಪೊಲೀಸರ ಮುಖದಲ್ಲಿ ನಗು ಮೂಡಿಸಿದ ವ್ಯಕ್ತಿ
ವೈರಲ್​​ ವಿಡಿಯೋImage Credit source: Instagram
ಅಕ್ಷತಾ ವರ್ಕಾಡಿ
|

Updated on:Apr 05, 2023 | 11:31 AM

Share

ಬೇಸಿಗೆ ಪ್ರಾರಂಭವಾಯಿತೆಂದರೆ ಸಾಕು, ಮನೆಯಿಂದ ಹೊರಗಡೆ ಕಾಲಿಡಲು ಹಿಂದೇಟು ಹಾಕುವವರೇ ಹೆಚ್ಚು. ಆದರೆ ಬಿಸಿಲಿನ ಬೇಗೆಯಲ್ಲಿಯೂ ತಮ್ಮ ಕೆಲಸವನ್ನು ನಿರ್ವಹಿಸುವವರು ಎಷ್ಟೋ ಜನ ಇದ್ದಾರೆ. ಉದಾಹರಣೆಗೆ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಈ ಸುಡು ಬಿಸಿಲಿನಲ್ಲಿಯೂ ಕೆಲಸ ಮಾಡುವ ಟ್ರಾಫಿಕ್ ಪೊಲೀಸರು. ಇತ್ತೀಚೆಗಷ್ಟೇ ಟ್ರಾಫಿಕ್ ಪೊಲೀಸರಿಗೆ ಬೈಕ್​​ ಸವಾರನೊಬ್ಬ ನೀರು ನೀಡಿ ತನ್ನಿಂದಾದ ಪುಟ್ಟ ಸಹಾಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಸುಡು ಬಿಸಿಲಿನಲ್ಲಿ ನಿಂತು ತಮ್ಮ ಕೆಲಸ ಮಾಡುತ್ತಿರುವ ಟ್ರಾಫಿಕ್ ಪೊಲೀಸರಿಗೆ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ನೀರಿನ ಬಾಟಲಿಗಳನ್ನು ನೀಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಬೈಕ್​​ ಸವಾರ ನೀರಿನ ಬಾಟಲಿ ತಂದು ಕೊಟ್ಟಾಗ ಅವರ ಮುಖದಲ್ಲಿ ಮೂಡಿದ ಪುಟ್ಟ ನಗು ಕಾಣಬಹುದು. ನಿಖಿಲ್ ನಾಯಕ್ ಎಂಬ ಬಳಕೆದಾರರು ಈ ವೀಡಿಯೊವನ್ನು ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ ಮತ್ತು ಇದು ಇಲ್ಲಿಯವರೆಗೆ 537,000 ಲೈಕ್‌ಗಳನ್ನು ಸಂಗ್ರಹಿಸಿದೆ.

ಇದನ್ನೂ ಓದಿ: ಕೇವಲ 49 ರೂ. ಹೂಡಿಕೆ ಮಾಡಿ ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ವ್ಯಕ್ತಿ

ನಾಯಕ್ ಬೈಕ್ ಓಡಿಸುತ್ತಿರುವುದನ್ನು ವಿಡಿಯೋದಲ್ಲಿ ಚಿತ್ರಿಸಲಾಗಿದೆ. ಚಲಿಸುವಾಗ ಬಿಸಿಲಿನಲ್ಲಿ ನಿಂತಿರುವ ಟ್ರಾಫಿಕ್ ಪೊಲೀಸರ ಬಂದು ತನ್ನ ಬ್ಯಾಗ್​​​ನಿಂದ ನೀರಿನ ಬಾಟಲಿಗಳನ್ನು ತೆಗೆದು ಕೊಡುತ್ತಾರೆ. ಇದೀಗಾ ಈ ವಿಡಿಯೋಗೆ ಅನೇಕ ಬಳಕೆದಾರರು ಕಾಮೆಂಟ್​​ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:30 am, Wed, 5 April 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ