Viral Video: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಡಾನ್ಸ್ ಮಾಡಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಾನಪದಾ ನೃತ್ಯಗಾರ್ತಿಯರೊಂದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಜ್ಜೆ ಹಾಕಿದ್ದಾರೆ. ಇದರ ವಿಡಿಯೋ ಇಲ್ಲಿದೆ ನೋಡಿ.

Viral Video: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಡಾನ್ಸ್ ಮಾಡಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
ಜಾನಪದ ನೃತ್ಯಗಾರ್ತಿಯರೊಂದಿಗೆ ಹೆಜ್ಜೆ ಹಾಕಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
Follow us
TV9 Web
| Updated By: Rakesh Nayak Manchi

Updated on:Aug 15, 2022 | 1:29 PM

ಇಡೀ ದೇಶವೇ ಇಂದು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳುತ್ತಿದೆ. ಅದರಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅಲ್ಲದೆ ಅವರು ವೈರಲ್ ಕೂಡ ಆಗುತ್ತಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜನಪದ ಕಲಾವಿದರು ಪ್ರದರ್ಶನ ನೀಡುತ್ತಿದ್ದಾಗ ಮಮತಾ ಬ್ಯಾನರ್ಜಿ ಅವರು ಕೂಡ ಸೇರಿಕೊಂಡು ಹೆಜ್ಜೆ ಹಾಕಿ ವಿಶೇಷವಾಗಿ ಗಮನ ಸೆಳೆದರು.

ನ್ಯೂಸ್ ಏಜೆನ್ಸಿ ANI ಈ ವೀಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದೆ. ವಿಡಿಯೋದಲ್ಲಿ ಕಾಣುವಂತೆ, ಜಾನಪದ ನೃತ್ಯಗಾರ್ತಿಯರು ಹೆಜ್ಜೆ ಹಾಕುತ್ತಿರುತ್ತಾರೆ. ಈ ವೇಳೆ ಇವರೊಂದಿಗೆ ಸೇರಿಕೊಂಡ ಮಮತಾ ಬ್ಯಾನರ್ಜಿ, ನೃತ್ಯಗಾರ್ತಿಯರು ಹೆಜ್ಜೆ ಹಾಕಿದಂತೆ ಇವರು ಕೂಡ ಹೆಜ್ಜೆ ಹಾಕಿದರು. ಈ ನಡುವೆ ಬಿಳಿ ಬಣ್ಣದ ಸೀರೆ ಧರಿಸಿದ ಮತ್ತೊಮ್ಮ ಮಹಿಳೆ ಮಮತಾ ಬ್ಯಾನರ್ಜಿ ಇರುವ ಸ್ಥಳಕ್ಕೆ ಬಂದ ಅವರ ಕೈ ಹಿಡಿದು ನೃತ್ಯ ಮಾಡಲು ಮುಂದಾಗಿದ್ದಾರೆ. ಆದರೆ ತಮ್ಮ ಹತ್ತಿರ ನಿಲ್ಲಲು ಬಿಡದೆ ಆಕಡೆ ಹೋಗುವಂತೆ ಸೂಚಿಸಿದಂತೆ ಕಾಣುತ್ತದೆ. ಅದರಂತೆ ಆ ಮಹಿಳೆ ಅದೇ ಸಾಲಿನಲ್ಲಿ ಬೇರೆ ಕಲಾವಿದರ ಮಧ್ಯೆ ಸೇರಿಕೊಂಡು ಕೈ ಹಿಡಿದು ನೃತ್ಯ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದು. ಕೊನೆಯಲ್ಲಿ ಹಾಡಿಗೆ ಅರ್ಧಕ್ಕೆ ಹೆಜ್ಜೆ ಹಾಕುವುನ್ನು ನಿಲ್ಲಿಸಿ ಮಮತಾ ಬ್ಯಾನರ್ಜಿ ಅವರು ವೇದಿಕೆ ಮೇಲೆ ಹೋಗುತ್ತಾರೆ.

ಇದಕ್ಕೂ ಮೊದಲು, ಮಮತಾ ಬ್ಯಾನರ್ಜಿ ಕೋಲ್ಕತ್ತಾದಲ್ಲಿ ನಡೆದ ಅದೇ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು. ನಂತರ ಟ್ವೀಟ್ ಮಾಡಿದ ಅವರು, “ಸ್ವಾತಂತ್ರ್ಯದ 75 ವರ್ಷಗಳು ಪೂರ್ಣಗೊಂಡ ನಂತರ, ಭಾರತವು ಸ್ವಾತಂತ್ರ್ಯದ ನಿಜವಾದ ಸಾರವನ್ನು ಜಾಗೃತಗೊಳಿಸಬೇಕು. ನಾವು ನಮ್ಮ ಪೂರ್ವಜರ ದೃಷ್ಟಿಕೋನಕ್ಕೆ ನಿಷ್ಠರಾಗಿರಬೇಕು ಮತ್ತು ನಮ್ಮ ಮುಂದಿನ ಪೀಳಿಗೆಯ ಆಕಾಂಕ್ಷೆಗಳನ್ನು ಹೃದಯದಲ್ಲಿಟ್ಟುಕೊಳ್ಳಬೇಕು. ನನ್ನ ಎಲ್ಲಾ ಸಹ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಜೈ ಹಿಂದ್!” ಎಂದು ಬರೆದುಕೊಂಡಿದ್ದಾರೆ.

ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸುತ್ತಾ ಮತ್ತೊಂದು ಟ್ವೀಟ್ ಮಾಡಿದ ಅವರು, “ಸ್ವಾತಂತ್ರ್ಯಕ್ಕೆ 75 ವರ್ಷಗಳು! ಇಂದು ನಾವು ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಕಾರಣರಾದ ನಮ್ಮ ಪೂರ್ವಜರ ಅತ್ಯುನ್ನತ ತ್ಯಾಗಕ್ಕೆ ಗೌರವ ಸಲ್ಲಿಸುತ್ತೇವೆ. ಭಾರತದ ಜನರು, ಅವರ ಪವಿತ್ರ ಪರಂಪರೆಯನ್ನು ಸಂರಕ್ಷಿಸಬೇಕು ಮತ್ತು ನಮ್ಮ ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಜನರ ಹಕ್ಕುಗಳ ಘನತೆಯನ್ನು ಎತ್ತಿಹಿಡಿಯಬೇಕು” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:29 pm, Mon, 15 August 22

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ