Viral Video: ಬೋರ್​ವೆಲ್​ಗೆ ಬಿದ್ದ 18 ತಿಂಗಳ ಮಗುವನ್ನು ಕಾಪಾಡಿದ ಸೈನಿಕರು; ವಿಡಿಯೋ ವೈರಲ್

ಭಾರತೀಯ ಸೇನೆಯ ಸಿಬ್ಬಂದಿ ಸುರೇಂದ್ರನಗರದ ಧ್ರಂಗಾಧ್ರ ತಾಲೂಕಿನ ದುದಾಪುರ ಗ್ರಾಮದಲ್ಲಿ ಬೋರ್‌ವೆಲ್‌ನಿಂದ 18 ತಿಂಗಳ ಮಗುವನ್ನು ರಕ್ಷಿಸಿದ್ದಾರೆ.

Viral Video: ಬೋರ್​ವೆಲ್​ಗೆ ಬಿದ್ದ 18 ತಿಂಗಳ ಮಗುವನ್ನು ಕಾಪಾಡಿದ ಸೈನಿಕರು; ವಿಡಿಯೋ ವೈರಲ್
ಗುಜರಾತ್​ನಲ್ಲಿ ಬೋರ್​ವೆಲ್​ಗೆ ಬಿದ್ದಿದ್ದ ಮಗುವನ್ನು ರಕ್ಷಿಸಿದ ಸೇನಾ ಸಿಬ್ಬಂದಿImage Credit source: Republic World
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 09, 2022 | 2:10 PM

ನವದೆಹಲಿ: ಭಾರತೀಯ ಸೇನಾ (Indian Army) ಸಿಬ್ಬಂದಿ ಗಡಿ ಕಾಯುವುದು ಮಾತ್ರವಲ್ಲದೆ ಕಷ್ಟದ ಸಮಯ ಬಂದಾಗ ಜನರಿಗೆ ನೆರವಾದ ಅನೇಕ ಘಟನೆಗಳು ಆಗಾಗ ನಡೆಯುತ್ತಿರುತ್ತವೆ. ಜನರ ಸುರಕ್ಷತೆ ಮತ್ತು ಭದ್ರತೆಗೆ ಸದಾ ಆದ್ಯತೆ ನೀಡುವ ಭಾರತೀಯ ಸೇನೆಯ ಸಿಬ್ಬಂದಿ ಸುರೇಂದ್ರನಗರದ ಧ್ರಂಗಾಧ್ರ ತಾಲೂಕಿನ ದುದಾಪುರ ಗ್ರಾಮದಲ್ಲಿ ಬೋರ್‌ವೆಲ್‌ನಿಂದ 18 ತಿಂಗಳ ಮಗುವನ್ನು ರಕ್ಷಿಸಿದ್ದಾರೆ. ಮಂಗಳವಾರ ತಡರಾತ್ರಿ ಮಗು ಬೋರ್‌ವೆಲ್‌ಗೆ ಬಿದ್ದಿತ್ತು.

ಇದಾದ ನಂತರ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಧ್ರಂಗಧ್ರ ಶಿವಂ ವರ್ಮಾ ಅವರು ಪ್ರದೇಶದ ಮಿಲಿಟರಿ ಠಾಣೆಗೆ ಕರೆ ಮಾಡಿ, ಶಿವಂ ಎಂಬ ಮಗುವನ್ನು ರಕ್ಷಿಸುವಂತೆ ಮನವಿ ಮಾಡಿದರು. ಬೋರ್‌ವೆಲ್‌ನಿಂದ 18 ತಿಂಗಳ ಮಗುವನ್ನು ರಕ್ಷಿಸಿದ ಸೇನೆಯ ಕ್ಯಾಪ್ಟನ್ ಸೌರವ್ ನೇತೃತ್ವದ ಗೋಲ್ಡನ್ ಕಟಾರ್ ಗನ್ನರ್ಸ್, 10 ನಿಮಿಷಗಳಲ್ಲಿ ಮನಿಲಾ ರೋಪ್, ಸರ್ಚ್​ಲೈಟ್​ಗಳು, ಸುರಕ್ಷತಾ ಸರಂಜಾಮು ಮತ್ತು ಕ್ಯಾರಬೈನರ್​​ನಂತಹ ಅಗತ್ಯ ಉಪಕರಣಗಳೊಂದಿಗೆ ಲಘು ವಾಹನದಲ್ಲಿ ಸ್ಥಳಕ್ಕೆ ಧಾವಿಸಿದರು.

ಇದನ್ನೂ ಓದಿ
Image
Mount Everest : ಮೌಂಟ್ ಎವರೆಸ್ಟ್ ಮೇಲೆ ಉಕ್ರೇನಿಯನ್ ಧ್ವಜ ಹಾರಿಸಿದ ರಷ್ಯಾದ ಮಹಿಳೆ
Image
Shocking News: ಆಸ್ಪತ್ರೆಯಿಂದ ಮಗನ ಶವ ಪಡೆಯಲು ಭಿಕ್ಷೆ ಬೇಡುತ್ತಿರುವ ಅಪ್ಪ-ಅಮ್ಮ!
Image
Inspirational Story: 73ರ ಇಳಿ ವಯಸ್ಸಿನಲ್ಲೂ ಸೈಕಲ್​ನಲ್ಲೇ 2,500 ಕಿ.ಮೀ. ಪ್ರಯಾಣಿಸಿದ ವೃದ್ಧ
Image
Viral Video: ಅಬ್ಬಬ್ಬಾ ಎಂಥಾ ಬಿಸಿಲು!; ಸ್ಕೂಟಿ ಸೀಟ್ ಮೇಲೆ ಬಿಸಿ ಬಿಸಿ ದೋಸೆ ಬೇಯಿಸಿದ ಯುವಕ

ನೆಲಮಟ್ಟದಿಂದ ಸುಮಾರು 20ರಿಂದ 25 ಅಡಿಗಳಷ್ಟು ಕೆಳಗೆ ಸಿಲುಕಿಕೊಂಡಿದ್ದ ಶಿವಂ ಎಂಬ ಮಗುವನ್ನು ತಂಡವು ನಿಧಾನವಾಗಿ ಮೇಲಕ್ಕೆ ಎಳೆದಿದೆ. ಮಗುವನ್ನು ನಿಧಾನವಾಗಿ ಬೋರ್‌ವೆಲ್‌ನಿಂದ ರಕ್ಷಿಸಲಾಯಿತು ಎಂದು ರಕ್ಷಣಾ ಸಚಿವಾಲಯ ಟ್ವಿಟರ್‌ನಲ್ಲಿ ಮಾಹಿತಿ ನೀಡಿದೆ. ರಕ್ಷಣಾ ಕಾರ್ಯಾಚರಣೆಯ ವಿಡಿಯೋವನ್ನೂ ಕೂಡ ಸಚಿವಾಲಯ ಹಂಚಿಕೊಂಡಿದೆ.

ಇದನ್ನೂ ಓದಿ: Viral Video: ಕ್ಲಾಸ್​ರೂಂನಲ್ಲೇ ಮಲಗಿ ಗೊರಕೆ ಹೊಡೆಯುತ್ತಿದ್ದ ಟೀಚರ್​​ಗೆ ಗಾಳಿ ಬೀಸಿದ ವಿದ್ಯಾರ್ಥಿ; ವಿಡಿಯೋ ವೈರಲ್

ಪ್ರಥಮ ಚಿಕಿತ್ಸೆಗಾಗಿ ಧ್ರಂಗಾಧ್ರದ ಹತ್ತಿರದ ಆಸ್ಪತ್ರೆಗೆ ಮಗುವನ್ನು ಧಾವಿಸಲಾಗಿದ್ದು, ಮಗು ಪ್ರಾಣಾಪಾಯದಿಂದ ಪಾರಾಗಿದೆ. 15 ದಿನಗಳ ಹಿಂದೆ ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ವರದಿಯಾಗಿದ್ದು, 6 ವರ್ಷದ ಹೃತಿಕ್ ರೋಷನ್ 300 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ. 8 ಗಂಟೆಗಳ ಹೋರಾಟದ ನಂತರ ಅವನನ್ನು ರಕ್ಷಿಸಲಾಗಿದ್ದು, ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:05 pm, Thu, 9 June 22

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು