Viral Video: ಸಿಗರೇಟ್ ಆಯ್ತು, ರಸ್ತೆಯಲ್ಲಿ ಮದ್ಯ ಸೇವನೆ ಮಾಡಿ ಮತ್ತೊಂದು ಪ್ರಕರಣದಲ್ಲಿ ತಗಲಾಕೊಂಡ ಇನ್ಸ್ಟಾಗ್ರಾಮ್ ಸೆಲೆಬ್ರಿಟಿ

ವಿಮಾನದೊಳಗೆ ಸಿಗರೇಟ್ ಸೇದಿ ಈಗಾಗಲೇ ಒಂದು ಪ್ರಕರಣವನ್ನು ಮೈಮೇಲೆ ಎಳೆದುಕೊಂಡ ಇನ್‌ಸ್ಟಾಗ್ರಾಮ್ ಸೆಲೆಬ್ರಿಟಿ ಬಾಬಿ ಕಟಾರಿಯಾ ಇದೀಗ ಮತ್ತೊಂದು ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ರಸ್ತೆ ಮಧ್ಯೆ ಮದ್ಯ ಸೇವನೆ ಮಾಡಿದ್ದಕ್ಕೆ ಉತ್ತರಾಖಂಡ ಪೊಲೀಸರು ಕಟಾರಿಯಾ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Viral Video: ಸಿಗರೇಟ್ ಆಯ್ತು, ರಸ್ತೆಯಲ್ಲಿ ಮದ್ಯ ಸೇವನೆ ಮಾಡಿ ಮತ್ತೊಂದು ಪ್ರಕರಣದಲ್ಲಿ ತಗಲಾಕೊಂಡ ಇನ್ಸ್ಟಾಗ್ರಾಮ್ ಸೆಲೆಬ್ರಿಟಿ
ಇನ್ಸ್ಟಾಗ್ರಾಮ್ ಸೆಲೆಬ್ರಿಟಿ ಬಾಬಿ ಕಟಾರಿಯಾ
Follow us
TV9 Web
| Updated By: Rakesh Nayak Manchi

Updated on:Aug 11, 2022 | 7:22 PM

ಡೆಹ್ರಾಡೂನ್​ನ ಜನನಿಬಿಡ ರಸ್ತೆಯಲ್ಲಿ ಮದ್ಯ ಸೇವಿಸುತ್ತಿರುವ ವಿಡಿಯೋವೊಂದು ವೈರಲ್ ಆದ ನಂತರ ಉತ್ತರಾಖಂಡ್ ಪೊಲೀಸರು ಇನ್‌ಸ್ಟಾಗ್ರಾಮ್ ಸೆಲೆಬ್ರಿಟಿ ಬಾಬಿ ಕಟಾರಿಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಮಾನದೊಳಗೆ ಸಿಗರೇಟ್ ಸೇದಿ ಈಗಾಗಲೇ ಪ್ರಕರಣವನ್ನು ಮೈಮೇಲೆ ಎಳೆದುಕೊಂಡ ಬೆನ್ನಲ್ಲೆ ಮತ್ತೊಂದು ಪ್ರಕರಣದಲ್ಲಿ ಸಿಲುಕಿದ್ದಾರೆ. ಜುಲೈ 28 ರಂದು ಕಟಾರಿಯಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ “ರಸ್ತೆಗಳಲ್ಲಿ ಆನಂದಿಸಲು ಇದು ಸಮಯ” ಎಂಬ ಶೀರ್ಷಿಕೆಯನ್ನು ನೀಡಿ ರಸ್ತೆಯಲ್ಲಿ ಮದ್ಯ ಸೇವನೆ ಮಾಡುವ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ಈ ವಿಡಿಯೋ ನೆಟ್ಟಿಗರ ಕೆಂಗಣ್ಣಿಗೆ ಗುರಿಮಾಡಿದ್ದಲ್ಲದೆ ಭಾರೀ ಟೀಕೆಗೆ ಗುರಿಯಾಗಿತ್ತು.

ಡೆಹ್ರಾಡೂನ್‌ನ ವೀಡಿಯೊದಲ್ಲಿ, ಇನ್‌ಸ್ಟಾಗ್ರಾಮ್‌ನಲ್ಲಿ 6.3 ಲಕ್ಷ ಅನುಯಾಯಿಗಳನ್ನು ಹೊಂದಿರುವ ಕಟಾರಿಯಾ ರಸ್ತೆಯ ಮಧ್ಯೆ ಕುರ್ಚಿ, ಟೇಬಲ್ ಹಾಕಿ ಮದ್ಯ ಸೇವಿಸುತ್ತಿರುವುದನ್ನು ಕಾಣಬಹುದು. ಇದನ್ನು ಕಟಾರಿಯಾ ಅವರ ಸಹಾಯಕರು ಚಿತ್ರೀಕರಿಸಿದ್ದಾರೆ.  ನಂತರ ಈ ವೀಡಿಯೊವನ್ನು “ರೋಡ್ ಅಪ್ನೆ ಬಾಪ್ ಕಿ” (ರಸ್ತೆ ನನ್ನ ತಂದೆಗೆ ಸೇರಿದೆ) ಎಂಬ ಹಾಡಿನೊಂದಿಗೆ ಅಪ್‌ಲೋಡ್ ಮಾಡಲಾಗಿದೆ.

ಈ ವಿಡಿಯೋ ವೈರಲ್ ಪಡೆಯುತ್ತಿದ್ದಂತೆ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಶೋಕ್ ಕುಮಾರ್ ಅವರು ಕಟಾರಿಯಾ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಬಗ್ಗೆ ಉತ್ತರಾಖಂಡ್ ಪೊಲೀಸ್ ತನ್ನ ಅಧಿಕೃತ ಟ್ವಿಟರ್​ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿದೆ.

ಪೊಲೀಸರ ಟ್ವೀಟ್‌ಗೆ ಪ್ರತ್ಯುತ್ತರ ನೀಡುತ್ತಾ ಅನೇಕ ಬಳಕೆದಾರರು ಗೌರವ್ ಖಂಡೇಲ್ವಾಲ್ ಎಂದು ಗುರುತಿಸಿದ ವ್ಯಕ್ತಿಯೊಂದಿಗೆ ಕಟಾರಿಯಾ ಅವರ ಅನೇಕ ಇತರ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಖಂಡೇಲ್ವಾಲ್ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಹೆಚ್ಚಿನ ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Thu, 11 August 22

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ