AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ರೀಲ್​ ಮಾಡಿದ ಯುವತಿಗೆ ರೂ. 17,000 ದಂಡ

Social Media Influencer : ಸೋಶಿಯಲ್​ ಮೀಡಿಯಾ ಇನ್​ಫ್ಲ್ಯೂಯೆನ್ಸರ್ ವೈಶಾಲಿ ಚೌಧರಿಯ ಫಾಲೋವರ್​ಗಳಲ್ಲಿ ಈ ಪ್ರಕರಣದ ಕುರಿತು ಕುತೂಹಲ ಹೆಚ್ಚಿದೆ. ಇಂದು ಸಂಜೆ ಲೈವ್​ನಲ್ಲಿ ಪೂರ್ತಿ ವಿಷಯ ತಿಳಿಸುತ್ತೇನೆ ಎಂದಿದ್ದಾಳೆ.

ಹೆದ್ದಾರಿಯಲ್ಲಿ ಕಾರು ನಿಲ್ಲಿಸಿ ರೀಲ್​ ಮಾಡಿದ ಯುವತಿಗೆ ರೂ. 17,000 ದಂಡ
ಹೆದ್ದಾರಿಯ ಮಧ್ಯೆ ಕಾರ್ ಇಲ್ಲಿಸಿ ರೀಲ್​ಗಾಗಿ ವಿಡಿಯೋ ಮಾಡುತ್ತಿದ್ದ ವೈಶಾಲಿ ಚೌಧರಿ
TV9 Web
| Edited By: |

Updated on:Jan 23, 2023 | 8:32 PM

Share

Viral News : ರೀಲ್​ಗಾಗಿ ಕಂಟೆಂಟ್​ ಹುಡುಕಾಟದೊಂದಿಗೆ ಅದಕ್ಕೆ ಪೂರಕವಾದ ಜಾಗಗಳ ಹುಡುಕಾಟದಲ್ಲಿಯೂ ಸಾಮಾಜಿಕ ಜಾಲತಾಣಗಳ ಪ್ರಭಾವಿಗಳು ಸದಾ ತೊಡಗಿಕೊಂಡಿರುತ್ತಾರೆ. ಇಂಥ ಹುಡುಕಾಟದ ಮಧ್ಯೆಯೇ ಏನಾದರೂ ಒಂದು ಯಡವಟ್ಟುಗಳು ಸಂಭವಿಸುವುದುಂಟು. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ. ಈಕೆ ವೈಶಾಲಿ ಚೌಧರಿ ಎಂಬ ಸೋಶಿಯಲ್ ಮೀಡಿಯಾ ಇನ್​ಫ್ಲ್ಯೂಯೆನ್ಸರ್​. ತನ್ನ ಕಾರನ್ನು ಹೆದ್ದಾರಿಯ ಮಧ್ಯದಲ್ಲಿ ನಿಲ್ಲಿಸಿ ವಿಡಿಯೋ ಚಿತ್ರೀಕರಿದ್ದಾಳೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.  ಪರಿಣಾಮವಾಗಿ ರೂ. 17,000 ದಂಡವನ್ನೂ ಆಕೆ ತೆರಬೇಕಾಗಿ ಬಂದಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Vish ♥️ (@vaishali_chaudhary_khutail)

ಲಕ್ಷಾಂತರ ಜನರು ಇಂದು ರೀಲ್ಸ್​ಗಳ ಲೋಕದಲ್ಲಿ ಕಳೆದು ಹೋಗುತ್ತಿದ್ದಾರೆ. ಆದರೆ ಎಲ್ಲ ಸಂದರ್ಭದಲ್ಲಿಯೂ ಬರೀ ಲೈಕ್ಸ್​, ಶೇರ್​ಗಳಷ್ಟೇ ಸಿಗದೆ ನಿಯಮ ಮುರಿದಲ್ಲಿ ಕೆಲವೊಮ್ಮೆ ದಂಡವೂ ಸಿಗುತ್ತದೆ ಎನ್ನುವುದನ್ನು ಮಾತ್ರ ಮರೆಯಬಾರದು. ಇತ್ತೀಚೆಗೆ ಉತ್ತರ ಪ್ರದೇಶದ ಗಾಝಿಯಾಬಾದ್​ನ ಇನ್​ಸ್ಟಾಗ್ರಾಂನ ಪ್ರಭಾವಿ ವೈಶಾಲಿ ಚೌಧರಿ ರೀಲು ಮಾಡಿ ದಂಡ ತೆರಬೇಕಾದ ಅವಸ್ಥೆಗೆ ಸಿಲುಕಿಕೊಂಡಿದ್ದಾಳೆ. ರಸ್ತೆ ಸುರಕ್ಷತೆ ನಿಯಮಗಳ ಉಲ್ಲಂಘನೆಗಾಗಿ ಈಕೆಗೆ ಗಾಝಿಯಾಬಾದ್​ ಪೊಲೀಸರು ದಂಡ ವಿಧಿಸಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ 6.5 ಲಕ್ಷಕ್ಕಿಂತಲೂ ಹೆಚ್ಚು ಫಾಲೋವರ್ಸ್​ ಹೊಂದಿದ ವೈಶಾಲಿ ಚೌಧರಿ ಹೆದ್ದಾರಿಯ ಮಧ್ಯೆ ಕಾರು ನಿಲ್ಲಿಸಿಕೊಂಡು ವಿವಿಧ ಭಂಗಿಗಳಲ್ಲಿ ವಿಡಿಯೋ ಶೂಟ್ ಮಾಡಿ ಇನ್​ಸ್ಟಾಗ್ರಾಂಗೆ ಅಪ್​ಲೋಡ್ ಮಾಡಿದ್ದಾಳೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಂಡಿದ್ಧಾರೆ. ಈ ಘಟನೆ ಸಾಹಿಬಾಬಾದ್​ನಲ್ಲಿ ನಡೆದಿದೆ.

ಒಳ್ಳೆಯದು ಮಾಡಿದರೂ ಇಡೀ ಜಗತ್ತಿಗೆ ಗೊತ್ತಾಗುತ್ತದೆ. ಎಡವಟ್ಟು ಮಾಡಿದರೂ ಇಡೀ ಜಗತ್ತಿಗೆ ಗೊತ್ತಾಗುತ್ತದೆ. ಏಕೆಂದರೆ ಸಾಮಾಜಿಕ ಜಾಲತಾಣಕ್ಕೆ ಇರುವುದು ಒಂದೇ ಬಾಗಿಲು!

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:22 pm, Mon, 23 January 23

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?