Viral Video: ಮಕ್ಕಳಿಗೆ ಬಿಸ್ಕತ್ತು ಕೊಡುವ ಮುನ್ನ ಎಚ್ಚರ, ಬೌರ್ಬನ್ ಬಿಸ್ಕತ್ತಿನಲ್ಲಿ ಕಬ್ಬಿಣದ ತಂತಿ ಪತ್ತೆ

ಮಕ್ಕಳು ಇಷ್ಟ ಪಟ್ಟು ತಿನ್ನುವ ಬಿಸ್ಕತ್ತುನಲ್ಲಿ ಕಬ್ಬಿಣದ ತಂತಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ "ಬಿಸ್ಕತ್ತುಗಳು ಮತ್ತು ಚಾಕೊಲೇಟ್‌ಗಳಂತಹ ಉತ್ಪನ್ನಗಳನ್ನು ಮಕ್ಕಳು ಇಷ್ಟಪಟ್ಟು ಸೇವಿಸುತ್ತಾರೆ ಮತ್ತು ಈ ಉತ್ಪನ್ನಗಳಲ್ಲಿ ಆಹಾರ ಸುರಕ್ಷತೆಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು" ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

Follow us
ಅಕ್ಷತಾ ವರ್ಕಾಡಿ
|

Updated on:Oct 11, 2024 | 1:17 PM

ತೆಲಂಗಾಣ: ಬ್ರಿಟಾನಿಯಾ ಬೌರ್ಬನ್ ಬಿಸ್ಕತ್‌ನೊಳಗೆ ತೆಳುವಾದ ಕಬ್ಬಿಣದ ತಂತಿಯೊಂದು ಕಂಡು ಬಂದಿರುವ ಆಘಾತಕಾರಿ ಘಟನೆ ತೆಲಂಗಾಣದ ಕಾಮರೆಡ್ಡಿಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆಯನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಿಸ್ಕೆಟ್‌ನಲ್ಲಿ ತೆಳುವಾದ ತಂತಿಯೊಂದಿರುವುದು ವಿಡಿಯೋದಲ್ಲಿ ಕಾಣಬಹುದು.

ಕಾಮರೆಡ್ಡಿ ಜಿಲ್ಲೆಯ ದೇವುನಿಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೈರಲ್ ಆಗಿರುವ ವಿಡಿಯೋದಲ್ಲಿರುವ ವ್ಯಕ್ತಿಯನ್ನು ಹನುಮಾನ್ ರೆಡ್ಡಿ ಎಂದು ಗುರುತಿಸಲಾಗಿದೆ. ತಾನು ಸ್ಥಳೀಯ ಅಂಗಡಿಯೊಂದರಿಂದ ಮಕ್ಕಳಿಗಾಗಿ ಬೌರ್ಬನ್ ಬಿಸ್ಕತ್ತು ಖರೀದಿಸಿ ತಂದಿದೆ. ಆದರೆ ಮಕ್ಕಳು ತಿನ್ನುವಾಗ ಬಿಸ್ಕತ್ತಿನಲ್ಲಿ ತೆಳುವಾದ ಕಬ್ಬಿಣದ ತಂತಿಯೊಂದು ಇರುವುದು ಕಂಡುಬಂದಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮನೆಕೆಲಸದವರಿಗೆ ದುಬಾರಿ ಬೆಲೆಯ ಐಫೋನ್‌ ಗಿಫ್ಟ್‌ ಕೊಟ್ಟ ದಂಪತಿ; ವಿಡಿಯೋ ವೈರಲ್‌

ಆಘಾತಕ್ಕೊಳಗಾದ ವ್ಯಕ್ತಿ, ತಕ್ಷಣವೇ ಅದನ್ನು ವೀಡಿಯೊ ತೆಗೆದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಶೇರ್ ಆಗುತ್ತಿದೆ. ಬಿಸ್ಕತ್ತುಗಳು ಮತ್ತು ಚಾಕೊಲೇಟ್‌ಗಳಂತಹ ಉತ್ಪನ್ನಗಳನ್ನು ಮಕ್ಕಳು ದೊಡ್ಡ ಪ್ರಮಾಣದಲ್ಲಿ ಸೇವಿಸುತ್ತಾರೆ ಮತ್ತು ಈ ಉತ್ಪನ್ನಗಳಲ್ಲಿ ಆಹಾರ ಸುರಕ್ಷತೆಯನ್ನು ಕಾಳಜಿ ವಹಿಸಬೇಕು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:16 pm, Fri, 11 October 24

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ