AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಲಗಿದ್ದ ಮಹಿಳೆ ಮೇಲೆ ಹೆಡೆಬಿಚ್ಚಿ ನಿಂತ ನಾಗರಹಾವು, ಕಾಪಾಡು ಶ್ರೀಶೈಲ ಮಲ್ಲಯ್ಯ ಅಂತಾ ಪ್ರಾರ್ಥಿಸಿದ ಮಹಿಳೆ

ಜಮೀನಿನಲ್ಲಿ ವಿಶ್ರಾಂತಿ ತೆಗೆದುಕೊಳ್ಳಲೆಂದು ಮಲಗಿದ್ದ ಮಹಿಳೆಯ ಮೇಲೆ ನಾಗರಹಾವೊಂದು ಹೆಡೆಬಿಚ್ಚಿ ನಿಂತಿಕೊಂಡಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಮಲಗಿದ್ದ ಮಹಿಳೆ ಮೇಲೆ ಹೆಡೆಬಿಚ್ಚಿ ನಿಂತ ನಾಗರಹಾವು, ಕಾಪಾಡು ಶ್ರೀಶೈಲ ಮಲ್ಲಯ್ಯ ಅಂತಾ ಪ್ರಾರ್ಥಿಸಿದ ಮಹಿಳೆ
ಮಲಗಿದ್ದ ಮಹಿಳೆ ಮೇಲೆ ಹೆಡೆ ಬಿಚ್ಚಿ ನಿಂತ ನಾಗರಹಾವು
TV9 Web
| Edited By: |

Updated on:Aug 27, 2022 | 12:13 PM

Share

ಕಲಬುರಗಿ: ವಿಶ್ರಾಂತಿ ಪಡೆಯಲೆಂದು ಜಮೀನಿನಲ್ಲಿ ಮಲಗಿದ್ದ ಮಹಿಳೆ ಮೇಲೆ ನಾಗರಹಾವೊಂದು ಹೆಡೆಬಿಚ್ಚಿ ನಿಂತ ಘಟನೆಯೊಂದು ಜಿಲ್ಲೆಯ ಅಫಜಲಪುರ ತಾಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ ನಡೆದಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಭಯಬೀತಿಗೊಂಡಿದ್ದಾರೆ. ಗ್ರಾಮದ ಭಾಗಮ್ಮ ಬಡದಾಳ್ ಎಂಬುವರು ತಮ್ಮ ಜಮೀನಿನಲ್ಲಿ ಮಲಗಿದ್ದಾಗ ಮೈಮೇಲೆ ಬಂದ ನಾಗರಹಾವು ಹೆಡೆಎತ್ತಿ ನಿಂತುಕೊಂಡಿದೆ. ಈ ವೇಳೆ ಪ್ರಾಣ ಭೀತಿ ಅನುಭವಿಸಿದ ಮಹಿಳೆ ಕೈ ಮುಗಿದು ದೇವರಲ್ಲಿ ಬೇಡಿಕೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಇರುವಂತೆ, ಭಾಗಮ್ಮ ಅವರ ಜಮೀನಿನಲ್ಲಿ ವಿಶ್ರಾಂತಿ ಪಡೆಯಲೆಂದೇ ಒಂದು ಮಲಗುವ ಮಂಚ ಇದೆ. ಇದರಲ್ಲಿ ಮಲಗಿಕೊಂಡಿದ್ದ ಭಾಗಮನ್ನ ಮೇಲೆ ನಾಗರಹಾವೊಂದು ಹತ್ತಿ ಹೆಡೆಬಿಚ್ಚಿ ನಿಂತುಕೊಂಡಿದೆ. ಇದನ್ನು ತಿಳಿದ ಭಾಗಮ್ಮ ಯಾವುದೇ ಆತುರದ ನಿರ್ಧಾರಗಳನ್ನು ಕೈಗೊಳ್ಳದೆ ಪ್ರಾಭ ಭಯದಿಂದಲೇ “ಕಾಪಾಡು ಶ್ರೀಶೈಲ ಮಲ್ಲಯ್ಯ” ಎಂದು ಕೈಗಳನ್ನು ಮುಗಿದು ಪ್ರಾರ್ಥಿಸಿದ್ದಾರೆ. ಇದಾಗಿ ಕೆಲಹೊತ್ತಿನ ನಂತರ ಮಹಿಳೆಗೆ ಯಾವುದೇ ತೊಂದರೆಯನ್ನು ನೀಡದೆ ನಾಗರಹಾವು ಇಳಿದು ಹೋಗಿದೆ. ನಿನ್ನೆ ಮಧ್ಯಾಹ್ನ ನಡೆದಿರೋ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Sat, 27 August 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ