AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ.

Viral Video: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಣ್ಣವ್ರ ಹಾಡು ಹಾಡಿದ ಕಂಡಕ್ಟರ್; ಗಾಯನಕ್ಕೆ ಮನಸೋತ ಪ್ರಯಾಣಿಕರು
ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕನ ಗಾಯನಕ್ಕೆ ಮನಸೋತ ಪ್ರಯಾಣಿಕರು
TV9 Web
| Edited By: Rakesh Nayak Manchi|

Updated on:Sep 20, 2022 | 7:37 PM

Share

ಪ್ರತಿಭೆ ಅನಾವರಣಕ್ಕೆ ಅಲಂಕರಿಸಿದ ವೇದಿಕೆಯೇ ಆಗಬೇಕೆಂದಿಲ್ಲ, ತಾವು ನಿಂತಲ್ಲೇ ತಮ್ಮ ಪ್ರತಿಭೆಯನ್ನು ಹೊರಹಾಕಿ ಜನರ ಮನಸ್ಸನ್ನು ಗೆಲ್ಲಬಹುದು ಎಂಬುದಕ್ಕೆ ಈ ಬಸ್ ನಿರ್ವಾಹಕನೇ ಸಾಕ್ಷಿ. ತನ್ನ ಗಾಯನಿಂದಲೇ ಕೆಎಸ್​ಆರ್​ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕರನ್ನು ಮನಸೋಲುವಂತೆ ಮಾಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದ್ದು, ನೆಟ್ಟಿಗರು ಕೂಡ ಅವರ ಗಾಯನಕ್ಕೆ ಫಿದಾ ಆಗಿದ್ದಾರೆ.

ಚಾಮರಾಜನಗರ ಹೋಗೆನಕಲ್​ಗೆ ತೆರಳುತ್ತಿದ್ದ ಸರ್ಕಾರಿ ಬಸ್​ನ ನಿರ್ವಾಹಕರಾಗಿರುವ ಹೇಮಂತ್, ಎಂದಿನಂತೆ ಪ್ರಯಾಣಿಕರಿಗೆ ಟಿಕೆಟ್ ಕೊಟ್ಟು ಬೈಕ್ ಹಿಡಿದು ಹಾಡಲು ಆರಂಭಿಸಿದ್ದಾರೆ. ಡಾ.ರಾಜ್​ಕುಮಾರ್ ಅವರು ಅಭಿನಯದ ‘ನಿನ್ನ ಕಂಗಳ ಬಿಸಿಯ ಹನಿಗಳು’ ಎಂಬ ಹಾಡನ್ನು ಹಾಡಿ ಪ್ರಯಾಣಿಕರನ್ನು ರಂಜಿಸಿದ್ದಾರೆ.

ಹೇಮಂತ್ ಅವರು ತಮ್ಮ ಸುಮಧುರ ಕಂಠದಿಂದ ಅಣ್ಣವ್ರ ಹಾಡನ್ನು ಹಾಡಲು ಪ್ರಾರಂಭಿಸಿದಾಗ ಬಸ್​ನಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾವನ್ನು ತೆರೆದು ವಿಡಿಯೋ ಮಾಡಿಕೊಂಡಿದ್ದಾರೆ. ಹೀಗೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹೇಮಂತ್ ಅವರ ಗಾಯನ ಪ್ರತಿಭೆಗೆ ನೆಟ್ಟಿಗರು ಕೂಡ ಮನಸೋತಿದ್ದು, ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಹೇಮಂತ್ ಅವರ ವೈರಲ್ ವಿಡಿಯೋ ಇಲ್ಲಿದೆ:

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Tue, 20 September 22

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!