AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದು ಮನೆಗೆ ನುಗ್ಗಿದ ಚಿರತೆ, ಮುಂದೇನಾಯ್ತು ನೋಡಿ

ಚಿರತೆಯೊಂದು ನಾಯಿಯನ್ನು ಅಟ್ಟಿಸಿಕೊಂಡು ಬಂದು ಮನೆಯೊಳಗೆ ನುಗ್ಗಿರುವ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಮನೆಯೊಳಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದ್ದು, ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

ಅಕ್ಷತಾ ವರ್ಕಾಡಿ
|

Updated on: Dec 04, 2024 | 1:04 PM

Share

ಚಿರತೆಯೊಂದು ನಾಯಿಯನ್ನು ಅಟ್ಟಿಸಿಕೊಂಡು ಬಂದು ಮನೆಯೊಳಗೆ ನುಗ್ಗಿರುವ ಭಯಾನಕ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. ಮನೆಯೊಳಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ವಿಡಿಯೋ ಸೆರೆಯಾಗಿದ್ದು, ಒಂದು ಕ್ಷಣ ಈ ದೃಶ್ಯ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

ವೈರಲ್ ಆಗುತ್ತಿರುವ ವೀಡಿಯೊದ ಆರಂಭದಲ್ಲಿ, ಪಿಟ್‌ಬುಲ್ ತಳಿಯ ಶ್ವಾನ ಆತಂಕದಿಂದ ಮನೆಯೊಳಗೆ ಓಡಿ ಬಂದಿರುವುದನ್ನು ಕಾಣಬಹುದು. ಅದೇ ಸಮಯದಲ್ಲಿ, ಚಿರತೆ ಕೂಡ ಅದನ್ನು ಹಿಂಬಾಲಿಸಿಕೊಂಡು ಬಂದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಚಿರತೆ ನಾಯಿಯ ಮೇಲೆ ದಾಳಿ ಮಾಡಲು ಮುಂದಾಗಿದ್ದು, ಈ ವೇಳೆ ನಾಯಿ ಜೋರಾಗಿ ಬೊಗಳುತ್ತಿರುವುದು ಕಂಡು ಬಂದಿದೆ. ಕೆಲ ಹೊತ್ತಿನ ಬಳಿಕ ಮನೆಯ ಸದಸ್ಯರು ಕೋಲು ಹಿಡಿದು ಮನೆಯೊಳಗೆ ಬಂದಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: ಜೀವಕ್ಕೆ ಕುತ್ತು ತಂದ ಗಾಳಿಪಟ, ಬೈಕ್‌ ಚಲಾಯಿಸುತ್ತಿದ್ದ ವೇಳೆ ಕುತ್ತಿಗೆಗೆ ಗಾಳಿಪಟ ದಾರ ಸಿಲುಕಿ ಪ್ರಾಣ ಕಳೆದುಕೊಂಡ ವ್ಯಕ್ತಿ

discoverwildpaws ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ. ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 9ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us