AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮರ ಹತ್ತಿ ಕೋತಿಯನ್ನು ಬೇಟೆಯಾಡಿ ಕೊಂದ ಚಿರತೆ; ವಿಡಿಯೋ ವೈರಲ್

ಹಸಿವಿನಿಂದ ಕಂಗೆಟ್ಟ ಚಿರತೆಯೊಂದು ಮರ ಹತ್ತಿ ಕೋತಿಯನ್ನು ಕೊಂದು ಹಾಕುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ.

Viral Video: ಮರ ಹತ್ತಿ ಕೋತಿಯನ್ನು ಬೇಟೆಯಾಡಿ ಕೊಂದ ಚಿರತೆ; ವಿಡಿಯೋ ವೈರಲ್
ಚಿರತೆ
TV9 Web
| Edited By: |

Updated on: May 30, 2022 | 6:35 PM

Share

ಕ್ರೂರ ಪ್ರಾಣಿಗಳ ವಿಡಿಯೋ ಆಗಾಗ ವೈರಲ್ ಆಗುತ್ತಿರುತ್ತವೆ. ಪ್ರಾಣಿ ಸಾಮ್ರಾಜ್ಯವು ಬಹಳ ಆಸಕ್ತಿದಾಯಕವಾಗಿದೆ. ಪ್ರತಿದಿನ ಈ ಅದ್ಭುತ ಪ್ರಾಣಿಗಳ ತಮಾಷೆಯ ವೀಡಿಯೊಗಳು (Funny Videos) ವೈರಲ್ ಆಗುತ್ತಿರುತ್ತವೆ. ಕಾಡಿನಲ್ಲಿರುವ ಪ್ರಾಣಿಗಳ ವಿಡಿಯೋಗಳು ವೀಕ್ಷಿಸಲು ಸಾಕಷ್ಟು ಆಕರ್ಷಕವಾಗಿವೆ. ಚಿರತೆಯೊಂದು ಕೋತಿಯನ್ನು ಬೇಟೆಯಾಡಿದ ಕ್ಷಣವನ್ನು ತೋರಿಸುವ ಅಪರೂಪದ ಮತ್ತು ಭಯಾನಕ ವೀಡಿಯೊ ಟ್ವಿಟ್ಟರ್‌ನಲ್ಲಿ ಕಾಣಿಸಿಕೊಂಡಿದೆ. ಈ ಅಪರೂಪದ ವಿಡಿಯೋ ಕ್ಲಿಪ್ ಅನ್ನು ಮಧ್ಯಪ್ರದೇಶದ ಪನ್ನಾ ಟೈಗರ್ ರಿಸರ್ವ್‌ನಲ್ಲಿ ಚಿತ್ರೀಕರಿಸಲಾಗಿದೆ. ಈ ಹುಲಿ ಸಂರಕ್ಷಿತಾರಣ್ಯದಲ್ಲಿ ಹುಲಿ, ಕರಡಿ, ತೋಳ, ಪ್ಯಾಂಗೊಲಿನ್, ಚಿರತೆ, ಘಾರಿಯಲ್, ನರಿ ಇನ್ನೂ ಅನೇಕ ವನ್ಯಜೀವಿ ಪ್ರಭೇದಗಳು ನೆಲೆಸಿವೆ.

ಹಸಿವಿನಿಂದ ಕಂಗೆಟ್ಟ ಚಿರತೆಯೊಂದು ಮರ ಹತ್ತಿ ಕೋತಿಯನ್ನು ಕೊಂದು ಹಾಕುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ. ಅದನ್ನು ಕೊಂದ ನಂತರ, ಚಿರತೆ ಮರದಿಂದ ಇಳಿಯುವಾಗ ಬೇಟೆಯನ್ನು ಬಾಯಿಯಲ್ಲಿ ಬಿಗಿಯಾಗಿ ಹಿಡಿದಿರುವುದನ್ನು ನೋಡಬಹುದು. ಪನ್ನಾ ಟೈಗರ್ ರಿಸರ್ವ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್ ಈ ವೀಡಿಯೊವನ್ನು ಶೇರ್ ಮಾಡಿಕೊಂಡಿದೆ. “ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿರತೆ ಬೇಟೆಯಾಡುವ ಅಪರೂಪದ ದೃಶ್ಯ” ಎಂದು ಇದಕ್ಕೆ ಕ್ಯಾಪ್ಷನ್ ನೀಡಲಾಗಿದೆ.

ಈ ವಿಡಿಯೋವನ್ನು ಹುಲಿ ಸಂರಕ್ಷಣಾ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಇಲ್ಲಿಯವರೆಗೆ 2,700ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ಬೇಟೆಯ ವೀಡಿಯೊ ಜನರನ್ನು ಕುತೂಹಲ ಮತ್ತು ಭಯಭೀತರನ್ನಾಗಿ ಮಾಡಿದೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ