AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಳ್ಳು ಭರವಸೆ ಕೇಳಿ ಸಾಕಾಗಿದೆ, ಇನ್ನಾದರೂ ನ್ಯಾಯ ಕೊಡಿಸಿ ಎಂದು ರಸ್ತೆಯಲ್ಲೇ ಉರುಳಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ

ಪೊಳ್ಳು ಭರವಸೆ ಸಾಕು, ಇನ್ನಾದರೂ ನ್ಯಾಯ ಕೊಡಿಸಿ ಎಂದು ವ್ಯಕ್ತಿಯೊಬ್ಬ 1,000 ಪುಟಗಳ ದೂರಿನ ಹಾರದೊಂದಿಗೆ ರಸ್ತೆಯಲ್ಲಿ ಉರುಳಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದ ಘಟನೆ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ಅಕ್ಷತಾ ವರ್ಕಾಡಿ
|

Updated on:Sep 04, 2024 | 11:59 AM

Share

ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ವ್ಯಕ್ತಿಯೊಬ್ಬ ಬರೀ ಮೈಯಲ್ಲಿ ರಸ್ತೆಯಲ್ಲಿ ಉರುಳಿಕೊಂಡು ಮೈಮೇಲೆ 1,000 ದೂರು ಪುಟಗಳಿಂದ ಮಾಡಿದ ಹಾರವನ್ನು ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಏಳು ವರ್ಷಗಳಿಂದ ಮುಕೇಶ್ ಪ್ರಜಾಪತಿ ಎಂಬಾತ ತಮ್ಮ ಗ್ರಾಮದಲ್ಲಿನ ಭ್ರಷ್ಟಾಚಾರದ ಬಗ್ಗೆ ದೂರು ನೀಡಲು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡುತ್ತಿದ್ದರು, ಆದರೆ ಪ್ರತಿ ಭೇಟಿಯು ಪೊಳ್ಳು ಭರವಸೆಗಳನ್ನು ನೀಡಿತು. ಯಾವುದೇ ಕ್ರಮ ಕೈಗೊಳ್ಳದ ಕಾರಣ ಹತಾಶೆಗೊಂಡ ಅವರು ಇದೀಗ ಈ ರೀತಿಯಾಗಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಬ್ಯಾಂಕ್‌ನಿಂದ ಬಿಡಿಸಿ ತಂದ ಚಿನ್ನ, ನಡುರಸ್ತೆಯಲ್ಲೇ ಕಳ್ಳತನ ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಮಂಗಳವಾರ ಪ್ರಜಾಪತಿ ರಸ್ತೆಯಲ್ಲಿ ಉರುಳಿಕೊಂಡು ಬರುವ ಮೂಲಕ ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಿದ್ದಾರೆ. ಮಧ್ಯಪ್ರದೇಶದ ಮುಖ್ಯಮಂತ್ರಿಯನ್ನುದ್ದೇಶಿಸಿ ಮಾತನಾಡಿದ ಪ್ರಜಾಪತಿ, “ಮೋಹನ್ ಯಾದವ್ ಅವರೇ.., ದಯವಿಟ್ಟು ನನಗೆ ನ್ಯಾಯ ಕೊಡಿ. ಏಳು ವರ್ಷಗಳಿಂದ ಬರೀ ಭರವಸೆಯನ್ನು ಮಾತ್ರ ಕೇಳಿಕೊಂಡು ಬಂದಿದ್ದೇನೆ. ಈಗ ನಾನು ನಿಮ್ಮ ಮುಂದೆ ನ್ಯಾಯಕ್ಕಾಗಿ ಬೇಡುತ್ತಿದ್ದೇನೆ ಎಂದು ಹೇಳಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:54 am, Wed, 4 September 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More