AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಯರ್ ದುಬಾರಿ ಆಯ್ತು,ಮನೆ ಬಾಡಿಗೆ ಕಟ್ಟೋಕೆ ಆಗ್ತಿಲ್ಲ, ಸತ್ತೋಗ್ತೀನಿ ಅಂತ ಮರವೇರಿ ಕೂತ ಭೂಪ

ವೀಡಿಯೊದಲ್ಲಿ,ಬ್ರಿಜ್‌ಮೋಹನ್ "ನನಗೆ ಕೆಲಸವಿಲ್ಲ ಮತ್ತು ಬಾಡಿಗೆ ಪಾವತಿಸಲು ಹಣದ ಕೊರತೆಯಿದೆ ಎಂದು ಹೇಳಿದ್ದಾರೆ. ಆದರೂ ಮದ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಪೊಲೀಸರಿಗೆ ದೂರು ನೀಡಿದರೂ ಏನು ಪ್ರಯೋಜನವಾಗಿಲ್ಲ. ಅದರಿಂದಲೇ ಆತ್ಮಹತ್ಯೆಗೆ ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.

Viral Video: ಬಿಯರ್ ದುಬಾರಿ ಆಯ್ತು,ಮನೆ ಬಾಡಿಗೆ ಕಟ್ಟೋಕೆ ಆಗ್ತಿಲ್ಲ, ಸತ್ತೋಗ್ತೀನಿ ಅಂತ ಮರವೇರಿ ಕೂತ ಭೂಪ
ಆತ್ಮಹತ್ಯೆಗೆ ಯತ್ನಿಸಿದ ಬ್ರಿಜ್‌ಮೋಹನ್ ಶಿವಹರೆ
ಅಕ್ಷತಾ ವರ್ಕಾಡಿ
|

Updated on: Mar 20, 2024 | 11:05 AM

Share

ಮಧ್ಯಪ್ರದೇಶ :  ರಾಜ್‌ಗಢ್ ಜಿಲ್ಲೆಯ ಸಿಎಂ ಸಹಾಯವಾಣಿ ಮತ್ತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ “ಪ್ರತೀ ಬಿಯರ್​​ ಬಾಟಲಿಗೆ ಹೆಚ್ಚುವರಿ 50 ರೂ. ಶುಲ್ಕ ವಿಧಿಸಲಾಗಿದೆ” ಎಂದು ದೂರು ನೀಡಿದರೂ ಗಮನ ಹರಿಸಿಲ್ಲ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಮರಕ್ಕೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ವಿಲಕ್ಷಣ ಘಟನೆ ನಡೆದಿದೆ.

ಮದ್ಯದ ಬಾಟಲಿಗಳಿಗೆ 50 ರೂಪಾಯಿ ಹೆಚ್ಚುವರಿ ನೀಡಬೇಕಾಗಿದ್ದು,ಇದರಿಂದ ಮನನೊಂದ ರಾಜ್‌ಗಢ್ ಜಿಲ್ಲೆಯ ನಿವಾಸಿ ಬ್ರಿಜ್‌ಮೋಹನ್ ಶಿವಹರೆ ಮಂಗಳವಾರ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ವಿಡಿಯೋದಲ್ಲಿ ಬ್ರಿಜ್‌ಮೋಹನ್ ಮರಕ್ಕೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿರುವುದನ್ನು ಕಾಣಬಹುದು. ಬಳಿಕ ಆದರೆ, ಸ್ಥಳೀಯ ಪೊಲೀಸರು ಮಧ್ಯಪ್ರವೇಶಿಸಿ ಅವರನ್ನು ಸುರಕ್ಷಿತವಾಗಿ ಮರದಿಂದ ಕೆಳಗಿಳಿಸಿದ್ದಾರೆ.

ಮತ್ತೊಂದು ವೀಡಿಯೊದಲ್ಲಿ,ಬ್ರಿಜ್‌ಮೋಹನ್ “ನನಗೆ ಕೆಲಸವಿಲ್ಲ ಮತ್ತು ಬಾಡಿಗೆ ಪಾವತಿಸಲು ಹಣದ ಕೊರತೆಯಿದೆ ಎಂದು ಹೇಳಿದ್ದಾರೆ. ಆದರೂ ಮದ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ. ಪೊಲೀಸರಿಗೆ ದೂರು ನೀಡಿದರೂ ಏನು ಪ್ರಯೋಜನವಾಗಿಲ್ಲ. ಅದರಿಂದಲೇ ಆತ್ಮಹತ್ಯೆಗೆ ನಿರ್ಧರಿಸಿದೆ ಎಂದು ಸ್ಥಳೀಯ ಮಾಧ್ಯಮಗಳ ಮುಂದೆ ನೋವನ್ನು ಹಂಚಿಕೊಂಡಿದ್ದಾನೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಣ್ಣ ಜಗಳಕ್ಕೆ ವಿಚ್ಛೇದನ ಪಡೆದು, 3ವರ್ಷಗಳ ಬಳಿಕ ಮಾಜಿ ಪತಿಯೊಂದಿಗೆ ಮರು ಮದುವೆ

ವಿಶೇಷವೆಂದರೆ, ಫೆಬ್ರವರಿಯಲ್ಲಿ,ಬ್ರಿಜ್‌ಮೋಹನ್ ಮುಖ್ಯಮಂತ್ರಿಗಳ ಸಹಾಯವಾಣಿ, ಸ್ಥಳೀಯ ಪೊಲೀಸ್ ಠಾಣೆ, ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ), ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅವರಿಗೆ ಬಿಯರ್​​ ಬಾಟಲಿಯ ದರ ಹೆಚ್ಚಳದ ಕುರಿತು ಹಲವು ಅಧಿಕಾರಿಗಳಿಗೆ ದೂರು ನೀಡಿದರೂ ಮದ್ಯದಂಗಡಿ ನಡೆಸುವವರ ಅವ್ಯವಹಾರದ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ