Viral Video: ರಸ್ತೆಯಲ್ಲಿ ನೃತ್ಯ ಮಾಡುತ್ತಾ ಹೋಗುತ್ತಿದ್ದ ವ್ಯಕ್ತಿಯ ಕಾಲು ಕಚ್ಚಿದ ನಾಯಿ

ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ನೃತ್ಯಕ್ಕೆ ಸಂಬಂಧಿಸಿದ ಸಾವಿರಾರು ವಿಡಿಯೋಗಳು ವೈರಲ್​ ಆಗುತ್ತಿರುತ್ತವೆ. ಕೆಲವು ವಿಡಿಯೋಗಳು ನೃತ್ಯದ ಸ್ಟೆಪ್ಸ್​ನಿಂದ ಜನರ ಹೃದಯಗೆಲ್ಲುತ್ತವೆ.

Viral Video: ರಸ್ತೆಯಲ್ಲಿ ನೃತ್ಯ ಮಾಡುತ್ತಾ ಹೋಗುತ್ತಿದ್ದ ವ್ಯಕ್ತಿಯ ಕಾಲು ಕಚ್ಚಿದ ನಾಯಿ
ವೈರಲ್ ವಿಡಿಯೋ
Follow us
ನಯನಾ ರಾಜೀವ್
|

Updated on: May 28, 2023 | 4:24 PM

ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ನೃತ್ಯಕ್ಕೆ ಸಂಬಂಧಿಸಿದ ಸಾವಿರಾರು ವಿಡಿಯೋಗಳು ವೈರಲ್​ ಆಗುತ್ತಿರುತ್ತವೆ. ಕೆಲವು ವಿಡಿಯೋಗಳು ನೃತ್ಯದ ಸ್ಟೆಪ್ಸ್​ನಿಂದ ಜನರ ಹೃದಯಗೆಲ್ಲುತ್ತವೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಡ್ಯಾನ್ಸ್ ಮಾಡುತ್ತಿರುವ ದೃಶ್ಯವಿದೆ. ಅದೇ ಸಮಯದಲ್ಲಿ, ನಾಯಿಯೊಂದು ವ್ಯಕ್ತಿಯ ಕಾಲನ್ನು ಕಚ್ಚುವುದು ಕಂಡುಬರುತ್ತದೆ. ಸಾಮಾನ್ಯವಾಗಿ ಜನರು ನಡೆದಾಡುವಾಗ ಅಥವಾ ಜೋರು ಜೋರಾಗಿ ಮಾತನಾಡಿದರೇ ನಾಯಿಗಳು ಬಿಡುವುದಿಲ್ಲ ಇನ್ನು ನೃತ್ಯ ಮಾಡಿದರೆ ಕೇಳಬೇಕಾ.

ಆದರೆ ಈ ವ್ಯಕ್ತಿ ನೃತ್ಯ ಮಾಡುವಾಗ ನಾಯಿ ಕಾಲಿಗೆ ಕಚ್ಚಿದರೂ ಕೂಡ ಅದನ್ನು ಲೆಕ್ಕಿಸದೆ ನೃತ್ಯವನ್ನು ಮುಂದುವರೆಸುವುದನ್ನು ಕಾಣಬಹುದು. ಈ ವೈರಲ್ ವೀಡಿಯೋ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ರಿನಾಲ್ಡೊ ಸೋರೆಸ್ ಎಂಬ ಬಳಕೆದಾರರು ಈ ವೀಡಿಯೊವನ್ನು Instagram ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವೀಡಿಯೊದಲ್ಲಿ, ರಿನಾಲ್ಡೊ ಸೊರೆಸ್ ತನ್ನ ಬೀದಿಯಲ್ಲಿ ತನ್ನ ಮನೆಯ ಹೊರಗೆ ನೃತ್ಯ ಮಾಡುವುದನ್ನು ಕಾಣಬಹುದು. ಆಗ ನಾಯಿ ಕಾಲಿಗೆ ಪದೇ ಪದೇ ಬಾಯಿ ಹಾಕುತ್ತದೆ, ಆದರೂ ಆತ ನೃತ್ಯವನ್ನು ಮುಂದುವರೆಸಿದ್ದಾನೆ.

ಮತ್ತಷ್ಟು ಓದಿ: Viral Video: ನಾಯಿಯನ್ನು ರಕ್ಷಿಸಲು ಹಿಮಸರೋವರಕ್ಕೆ ಧುಮುಕಿದ ವ್ಯಕ್ತಿ

ಸಾಮಾಜಿಕ ಮಾಧ್ಯಮದಲ್ಲಿ 4 ಲಕ್ಷ 45 ಸಾವಿರಕ್ಕೂ ಹೆಚ್ಚು ಬಳಕೆದಾರರು ಇದನ್ನು ಇಷ್ಟಪಟ್ಟಿದ್ದಾರೆ ಮತ್ತು 13 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು ಈ ವೀಡಿಯೊವನ್ನು ವೀಕ್ಷಿಸಿದ್ದಾರೆ. ಕೆಲವರು ಇದು ಸಾಕು ನಾಯಿಯಾಗಿರಬಹುದು ಎಂದು ಹೇಳಿದ್ದಾರೆ. ಹಾಗಾಗಿ ಪ್ರೀತಿಯಿಂದ ಆತನ ಕಾಲನ್ನು ಕಚ್ಚಿರಬಹುದು ಎನ್ನಲಾಗುತ್ತಿದೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ