AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟ್ರೈನ್​ನಂತೆ ಇಂಡಿಗೋ ವಿಮಾನದಲ್ಲೂ ಫ್ಲಾಸ್ಕ್ ಹಿಡಿದು ಚಹಾ ಮಾರಾಟ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲೊ ಇಂಡಿಗೋ ವಿಮಾನದಲ್ಲಿ ಒಬ್ಬ ವ್ಯಕ್ತಿ ಫ್ಲಾಸ್ಕ್‌ನಲ್ಲಿ ಚಹಾವನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. 36,000 ಅಡಿ ಎತ್ತರದಲ್ಲಿ ಹಾರುವ ವಿಮಾನದಲ್ಲಿ ವ್ಯಕ್ತಿ ಲೋಕನ್​ ಟ್ರೈನ್​ನ ರೀತಿಯಲ್ಲಿ ವರ್ತಿಸುವುದನ್ನು ಕಾಣಬಹುದು. ಈ ವಿಡಿಯೋ ಲಕ್ಷಾಂತರ ಜನರನ್ನು ತಲುಪಿದ್ದು, ವಿಮಾನದಲ್ಲಿ ಚಹಾ ಮಾರಾಟದ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ವಿಮಾನದ ಸಿಬ್ಬಂದಿ ಮತ್ತು ಭದ್ರತಾ ಕ್ರಮಗಳ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ.

Viral Video: ಟ್ರೈನ್​ನಂತೆ ಇಂಡಿಗೋ ವಿಮಾನದಲ್ಲೂ ಫ್ಲಾಸ್ಕ್ ಹಿಡಿದು ಚಹಾ ಮಾರಾಟ
Man Sells Chai On Flight
ಅಕ್ಷತಾ ವರ್ಕಾಡಿ
|

Updated on: Dec 24, 2024 | 9:28 AM

Share

ಇಂಡಿಗೋ ವಿಮಾನದಲ್ಲಿ ವ್ಯಕ್ತಿಯೊಬ್ಬ ಫ್ಲಾಸ್ಕ್ ಹಿಡಿದು ಚಹಾ ಮಾರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೈಲಿನಲ್ಲಿ ಚಹಾ ಮಾರುವ ರೀತಿಯಲ್ಲೇ ವಿಮಾನದಲ್ಲೂ ಕಂಡು ಬಂದಿದ್ದು, ಸದ್ಯ ವಿಡಿಯೋ ಕಂಡು ನೆಟ್ಟಿಗರು ಶಾಕ್​ ಆಗಿದ್ದಾರೆ. 36,000 ಅಡಿ ಎತ್ತರದಲ್ಲಿ ಹಾರುವ ವಿಮಾನದಲ್ಲಿ, ಪ್ರಯಾಣಿಕರೊಬ್ಬರು ಫ್ಲಾಸ್ಕ್‌ನಿಂದ ಚಹಾವನ್ನು ಪೇಪರ್ ಕಪ್‌ಗೆ ಸುರಿದು ಇತರ ಪ್ರಯಾಣಿಕರಿಗೆ ನೀಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ಹಿಂದೆ ಥೈಲ್ಯಾಂಡ್‌ಗೆ ಹೋಗುತ್ತಿದ್ದ ವಿಮಾನದಲ್ಲಿ, ಇಂಡಿಯನ್ ಪ್ರಯಾಣಿಕರು ಲೋಕಲ್ ಟ್ರೈನ್‌ನಲ್ಲಿ ಇದ್ದಂಗೆ ವರ್ತಿಸುತ್ತಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಟ್ರೈನ್​ನಂತೆ ಇಂಡಿಗೋ ವಿಮಾನದಲ್ಲೂ ಫ್ಲಾಸ್ಕ್ ಹಿಡಿದು ಚಹಾ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. aircrew.in ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಚಾಯ್, ಚಾಯ್ ಎಂದು ಕರೆಯುತ್ತಾ, ಚಹಾವನ್ನು ಫ್ಲಾಸ್ಕ್‌ನಿಂದ ಪೇಪರ್ ಕಪ್‌ಗೆ ಸುರಿದು, ಮೊದಲು ಒಬ್ಬ ಮಹಿಳೆಗೆ ಕೊಡುತ್ತಿರುವುದನ್ನು ಕಾಣಬಹುದು. ಬಳಿಕ ಇತರ ಪ್ರಯಾಣಿಕರಿಗೂ ನೀಡುತ್ತಿರುವುದು ವಡಿಯೋದಲ್ಲಿ ಸೆರೆಯಾಗಿದೆ. ಒಬ್ಬ ಮುದುಕ ಮತ್ತು ಮಹಿಳೆ ರಾಜಸ್ಥಾನಿ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿರುವುದು ಕಂಡುಬಂದಿದೆ. ಆದರೆ ಈ ವಿಮಾನ ಎಲ್ಲಿಗೆ ಹೋಗುತ್ತಿದೆ? ಘಟನೆ ಯಾವಾಗ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: ಮೀನಿಗಾಗಿ ಬೀಸಿದ್ದ ಬಲೆಯಲ್ಲಿ ಸಿಕ್ಕಿಹಾಕಿಕೊಂಡ 15 ಅಡಿ ಉದ್ದದ ದೈತ್ಯ ಹೆಬ್ಬಾವು

ಈ ವಿಡಿಯೋ ಕೇವಲ 24 ಗಂಟೆಗಳಲ್ಲಿ ನಾಲ್ಕು ಲಕ್ಷ ಮಂದಿ ವೀಕ್ಷಿಸಿದ್ದಾರೆ. ಕೆಲವರು ಹಾಸ್ಯ ಚಟಾಕಿ ಹಾರಿಸಿದರೆ ಇನ್ನು ಕೆಲವರು ವಿಚಿತ್ರ ಕಾಮೆಂಟ್ ಮಾಡಿದ್ದಾರೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಲವರು ತಮಾಷೆಯ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಮುಂದೆಯೂ ಇದೇ ರೀತಿಯ ಘಟನೆಗಳು ನಡೆಯಲಿವೆ ಎನ್ನಲಾಗಿದೆ. ಕ್ಯಾಬಿನ್ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿ ಏನು ಮಾಡುತ್ತಿದ್ದಾರೆ? ಒಬ್ಬರು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ