AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇನ್ನೂ ಯಾಕೆ ಮೆಟ್ರೋ ಬಂದಿಲ್ಲ? ಹಳಿ ಮೇಲೆ ನಡೆದುಕೊಂಡು ಹೋದ ಭೂಪ

ಮೆಟ್ರೋ ಹಳಿಯ ಮೇಲೆ ವ್ಯಕ್ತಿಯೊಬ್ಬರು ಯಾವುದೇ ಭಯವಿಲ್ಲದೆ ನಡೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಆ ವಿಡಿಯೋ ಇಲ್ಲಿದೆ ನೋಡಿ..

Viral Video: ಇನ್ನೂ ಯಾಕೆ ಮೆಟ್ರೋ ಬಂದಿಲ್ಲ? ಹಳಿ ಮೇಲೆ ನಡೆದುಕೊಂಡು ಹೋದ ಭೂಪ
ಮೆಟ್ರೋ ರೈಲು ಹಳಿ ಮೇಲೆ ನಡೆದುಕೊಂಡು ಹೋಗುತ್ತಿರುವ ವ್ಯಕ್ತಿ
TV9 Web
| Updated By: Rakesh Nayak Manchi|

Updated on:Aug 21, 2022 | 12:56 PM

Share

ಪಶ್ಚಿಮ ದೆಹಲಿಯ ನಂಗ್ಲೋಯ್ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಅಸಾಧ್ಯವಾದೂದನ್ನು ಮಾಡಿ ಜನರಿಗೆ ಶಾಕ್ ನೀಡಿದ್ದಾನೆ. ವೇಗವಾಗಿ ಓಡಾಡುವ ಮೆಟ್ರೋ ರೈಲುಗಳ ಹಳಿಗಳ ಮೇಲೆ ವ್ಯಕ್ತಿಯೊಬ್ಬ ಯಾವುದೇ ಭಯವಿಲ್ಲದೆ ನಡೆದುಕೊಂಡು ಹೋಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಹಾಸ್ಯವಾಗಿ ಕಾಮೆಂಟ್​ಗಳನ್ನು ಮಾಡುತ್ತಿದ್ದಾರೆ.

ವೈರಲ್ ವಿಡಿಯೋದಲ್ಲಿ ಇರುವಂತೆ, ಮೆಟ್ರೋ ಹಳಿಯ ಬ್ರಿಡ್ಜ್​ ಮೇಲೆ ವ್ಯಕ್ತಿಯೊಬ್ಬ ಯಾವುದೇ ಭಯವಿಲ್ಲದೆ ಆರಾಮವಾಗಿ ನಡೆದುಕೊಂಡು ಹೋಗುತ್ತಿದ್ದಾನೆ. ಇದನ್ನು ನೋಡಿದ ಬ್ರಿಡ್ಜ್ ಕೆಳಗಡೆ ಇದ್ದ ನೂರಾರು ಮಂದಿ, ಆತನನ್ನು ಎಚ್ಚರಿಸಲು ಕೂಗಾಡಿದ್ದಾರೆ. ಆದರೆ ಆ ಭೋಪ ಮಾತ್ರ ತಲೆನೇ ಕೆಡಿಸಿಕೊಳ್ಳಲದೆ ಹಳಿಯ ಮೇಲೆ ನಡೆದುಕೊಂಡು ಹೋಗಿದ್ದಾನೆ. ಈ ವಿಡಿಯೋವನ್ನು ನೋಡುವಾಗ ಏನೋ ಸಂಭವಿಸುತ್ತದೆ, ಆ ವ್ಯಕ್ತಿಗೆ ಮುಂದೆ ಶಾಕ್ ತಗುಲಿ ಸಾಯಬಹುದು ಎಂಬ ಆತಂಕ ಮನಸ್ಸಿನಲ್ಲಿ ಉಂಟುಮಾಡುತ್ತದೆ.

ಕೆಲವು ದಿನಗಳ ಹಿಂದೆ ಅಮೀರ್ ಖಾನ್ 7249 ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಮೆಟ್ರೋ ರೈಲು ಎಲ್ಲಿದೆ ಎಂದು ನೋಡಲು ಹೋಗಿದ್ದ” ಎಂದು ಶೀರ್ಷಿಕೆ ಬರೆಲಾಗಿದೆ. ಸದ್ಯ ಈ ವಿಡಿಯೋ ವೈರಲ್ ಪಡೆದು 1.40, ಲಕ್ಷಕ್ಕೂ ಹೆಚ್ಚು ಲೈಕ್​ಗಳು ಮತ್ತು ಹಲವಾರು ಕಾಮೆಂಟ್‌ಗಳನ್ನು ಸ್ವೀಕರಿಸಿದೆ.

View this post on Instagram

A post shared by Amir Khan (@amirkhan7249)

ವಿಡಿಯೋ ನೋಡಿದ ನೆಟ್ಟಿಗರು ಹಾಸ್ಯಾಸ್ಪದವಾಗಿ ಕಾಮೆಂಟ್​ಗಳನ್ನು ಮಾಡುತ್ತಿದ್ದಾರೆ. ಈ ಪೈಕಿ ಒಬ್ಬರು, “ಲೆಜೆಂಡ್ಸ್ ಅವರು, ಇನ್ನೂ ನಡೆಯುತ್ತಿದ್ದಾರೆ” ಎಂದು ಹೇಳಿದ್ದಾರೆ. ಇನ್ನೊಬ್ಬರು ಕಾಮೆಂಟ್ ಮಾಡಿ, “ಯಾವಾಗಲೂ ನಿಮ್ಮದೇ ದಾರಿ ಮಾಡಿಕೊಳ್ಳಿ” ಎಂದಿದ್ದಾರೆ. ಮಗದೊಬ್ಬರು ಕಾಮೆಂಟ್ ಮಾಡಿ,”ಆತ್ಮವಿಶ್ವಾಸ ನೋಡಿ ಬಾಸ್” ಎಂದಿದ್ದಾರೆ.

ಶುಕ್ರವಾರ, ಶಹದಾರ ಮೆಟ್ರೋ ನಿಲ್ದಾಣದ ಹಳಿಗಳ ಮೇಲೆ 58 ವರ್ಷದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಿದ್ದಿದ್ದಾರೆ. ಇವರನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ವ್ಯಕ್ತಿಯನ್ನು ರಕ್ಷಿಸಿದೆ. ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದಾಗ ವಿಚಲಿತನಾಗಿದ್ದ ಮತ್ತು ಇದರ ಜೊತೆಗೆ ತನ್ನ ಮೊಬೈಲ್ ಫೋನ್ ಹುಡುಕಾಡುತ್ತಿದ್ದ ಎಂದು ಸಿಐಎಸ್ಎಫ್ ಹೇಳಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Sun, 21 August 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ