AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: BMW ಕಾರು ಓಡಿಸಿದ ಅಪ್ರಾಪ್ತ ಮಗ, ಕಾರಿನ ಬಾನೆಟ್ ಮೇಲೆ ಮಲಗಿ ಅಪ್ಪನ ಸವಾರಿ

ಇತ್ತೀಚೆಗಷ್ಟೇ ಮಹಾರಾಷ್ಟ್ರದ ಪುಣೆಯಲ್ಲಿ ಮದ್ಯದ ಅಮಲಿನಲ್ಲಿ 17 ವರ್ಷದ ಅಪ್ರಾಪ್ತ ಬಾಲಕನೊಬ್ಬ ವೇಗವಾಗಿ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್​ವೇರ್ ಇಂಜಿನಿಯರ್​ಗಳು ಸಾವನ್ನಪ್ಪಿರುವ ಘಟನೆ ಭಾರೀ ಸುದ್ದಿಯಲ್ಲಿದೆ. ಈ ಘಟನೆಗೆ ಪುಷ್ಠಿ ನೀಡುವಂತೆ ಇದೀಗ ವ್ಯಕ್ತಿಯೊಬ್ಬ ತನ್ನ 17 ವರ್ಷದ ಮಗನಿಗೆ BMW ಕಾರನ್ನು ಓಡಿಸುವಂತೆ ಹೇಳಿ ತಾನು ಕಾರಿನ ಮುಂದೆ ಬಾನೆಟ್ ಮೇಲೆ ಮಲಗಿ ಸವಾರಿ ಮಾಡುತ್ತಿರುವ ವಿಡಿಯೋ ವೈರಲ್​ ಆಗಿದೆ.

Video Viral: BMW ಕಾರು ಓಡಿಸಿದ ಅಪ್ರಾಪ್ತ ಮಗ, ಕಾರಿನ ಬಾನೆಟ್ ಮೇಲೆ ಮಲಗಿ ಅಪ್ಪನ ಸವಾರಿ
ಅಕ್ಷತಾ ವರ್ಕಾಡಿ
|

Updated on:May 28, 2024 | 12:05 PM

Share

ವ್ಯಕ್ತಿಯೊಬ್ಬ ತನ್ನ 17 ವರ್ಷದ ಮಗನಿಗೆ BMW ಕಾರನ್ನು ಓಡಿಸುವಂತೆ ಹೇಳಿ ತಾನು ಕಾರಿನ ಮುಂದೆ ಬಾನೆಟ್ ಮೇಲೆ ಮಲಗಿ ಸವಾರಿ ಮಾಡುತ್ತಿದ್ದ ಘಟನೆ ಮುಂಬೈನ ಕಲ್ಯಾಣ್‌ನ ಶಿವಾಜಿ ಚೌಕ್‌ನ ಜನನಿಬಿಡ ರಸ್ತೆಗಳಲ್ಲಿ ಕಂಡುಬಂದಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಪಾದಚಾರಿಗಳು ಈತನ ವಿಚಿತ್ರ ಅವತಾರದ ಸವಾರಿಯನ್ನು ಮೊಬೈಲ್​ ಮೂಲಕ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಎಲ್ಲಡೆ ವೈರಲ್​​ ಆಗುತ್ತಿದೆ.

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಂಚಾರಿ ನಿಯಮ ಉಲ್ಲಂಘನೆ ಹಾಗೂ ಅಪ್ರಾಪ್ತ ಮಗನಿಂದ ಕಾರು ಚಲಾಯಿಸಿದ್ದಕ್ಕಾಗಿ ಪೊಲೀಸರ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಸುಭಮ್ ಮತಾಲಿಯಾ ಎಂದು ಗುರುತಿಸಲಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯ ಪರ್ಸ್ ಎಗರಿಸಲು ಬಂದ ಕಳ್ಳ ಬಸ್​​​ನಲ್ಲೇ ಲಾಕ್, ವಿಡಿಯೋ ವೈರಲ್

ಇತ್ತೀಚೆಗಷ್ಟೇ ಮಹಾರಾಷ್ಟ್ರದ ಪುಣೆಯಲ್ಲಿ ಮದ್ಯದ ಅಮಲಿನಲ್ಲಿ 17 ವರ್ಷದ ಅಪ್ರಾಪ್ತ ಬಾಲಕನೊಬ್ಬ ವೇಗವಾಗಿ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರುಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್​ವೇರ್ ಇಂಜಿನಿಯರ್​ಗಳು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಆರೋಪಿ ಬಂಧನವಾದ 15 ಗಂಟೆಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು ಟೀಕೆಗೆ ಗುರಿಯಾಗಿದೆ. ಇದರೊಂದಿಗೆ, ಬಾಲ ನ್ಯಾಯ ಮಂಡಳಿ (ಜೆಜೆಬಿ) ಆರೋಪಿಯನ್ನು ಜೂನ್ 5 ರವರೆಗೆ 14 ದಿನಗಳ ಕಾಲ ರಿಮಾಂಡ್ ಹೋಮ್‌ಗೆ ಕಳುಹಿಸಿದೆ. ಈ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನ ತಂದೆಯನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:04 pm, Tue, 28 May 24

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್