Viral Video: ಬೈಕ್ ಸವಾರನ ಜೊತೆ ಬಾಲಿವುಡ್ ಹಾಡಿಗೆ ಸಖತ್ತಾಗಿ ಸ್ಟೆಪ್ ಹಾಕಿದ ಪೊಲೀಸ್; ವೈರಲ್ ವಿಡಿಯೋ ಇಲ್ಲಿದೆ

Police Dance Video | ಮುಂಬೈನ 38 ವರ್ಷದ ಅಮೋಲ್ ಯಶವಂತ್ ಕಾಂಬ್ಳೆ ಸಿನಿಮಾ ಹಾಡಿಗೆ ಅದ್ಭುತವಾಗಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.

Viral Video: ಬೈಕ್ ಸವಾರನ ಜೊತೆ ಬಾಲಿವುಡ್ ಹಾಡಿಗೆ ಸಖತ್ತಾಗಿ ಸ್ಟೆಪ್ ಹಾಕಿದ ಪೊಲೀಸ್; ವೈರಲ್ ವಿಡಿಯೋ ಇಲ್ಲಿದೆ
ಪೊಲೀಸ್ ಡ್ಯಾನ್ಸ್​ ವಿಡಿಯೋ ವೈರಲ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 07, 2021 | 4:56 PM

ಮುಂಬೈ: ಕೆಲವೊಂದು ವಿಡಿಯೋಗಳನ್ನು ನೋಡಿದರೆ ನಮಗೆ ನಗದೇ ಇರಲು ಸಾಧ್ಯವೇ ಇಲ್ಲ. ಇನ್ನು ಕೆಲವು ವಿಡಿಯೋಗಳು ನಮಗೆ ಸ್ಫೂರ್ತಿ ತುಂಬುತ್ತವೆ. ಎಂಜಾಯ್ ಮಾಡಲು, ಜೀವನವನ್ನು ಪ್ರೀತಿಸಲು ವಯಸ್ಸಿನ ಹಂಗಿಲ್ಲ ಎಂಬುದನ್ನು ಮುಂಬೈನ ಪೊಲೀಸ್ ಒಬ್ಬರು ತೋರಿಸಿಕೊಟ್ಟಿದ್ದಾರೆ. ದಕ್ಷ ಪೊಲೀಸ್ ಅಧಿಕಾರಿಯಾಗಿರುವ 38 ವರ್ಷದ ಅಮೋಲ್ ಯಶವಂತ್ ಕಾಂಬ್ಳೆ ಸಿನಿಮಾ ಹಾಡಿಗೆ ಅದ್ಭುತವಾಗಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಈ ವಿಡಿಯೋವನ್ನು ಸುಮಾರು ಎರಡೂವರೆ ಲಕ್ಷ ಜನರು ವೀಕ್ಷಿಸಿದ್ದಾರೆ.

ಅಪ್ಪು ಎಂಬ ಬಾಲಿವುಡ್ ಸಿನಿಮಾದ ಆಯಾ ಹೇ ರಾಜಾ ಹಾಡಿಗೆ ಭರ್ಜರಿಯಾಗಿ ಸ್ಟೆಪ್ ಹಾಕಿರುವ ಅಮೋಲ್ ಕಾಂಬ್ಳೆ ನೈಗಾಂವ್ ಪೊಲೀಸ್ ಹೆಡ್​ಕ್ವಾರ್ಟರ್ಸ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚಿಕ್ಕ ವಯಸ್ಸಿನಿಂದಲೂ ಡ್ಯಾನ್ಸ್ ಬಗ್ಗೆ ಸೆಳೆತವಿದ್ದ ಇವರು ಈಗಲೂ ಕುಣಿಯುವ ಅವಕಾಶ ಸಿಕ್ಕರೆ ಮಿಸ್ ಮಾಡಿಕೊಳ್ಳುವುದೇ ಇಲ್ಲ. ಕಳೆದ ವಾರ ಈ ಡ್ಯಾನ್ಸ್​ನ ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಎರಡೂವರೆ ಲಕ್ಷ ವ್ಯೂ ಸಿಕ್ಕಿದೆ.

ಇನ್​ಸ್ಟಾಗ್ರಾಂನಲ್ಲಿ ಶೇರ್ ಆಗಿರುವ ಈ ವಿಡಿಯೋ ನೋಡಿ ಅನೇಕ ಜನರು ಈ ಪೊಲೀಸ್​ಗೆ ಫ್ಯಾನ್ ಆಗಿದ್ದಾರೆ. ಪೊಲೀಸ್ ಡ್ರೆಸ್​ನಲ್ಲೇ ಅಮೋಲ್ ಅವರು ಡ್ಯಾನ್ಸ್ ಮಾಡಿದ್ದು, ಬೈಕ್​ನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ನಿಲ್ಲಿಸಿ ಸರಿಯಾಗಿ ಮಾಸ್ಕ್ ಹಾಕಿಕೋ ಎನ್ನುತ್ತಾರೆ. ಆ ನಂತರ ಆ ಯುವಕನೊಂದಿಗೆ ಸೇರಿ ಪೊಲೀಸ್ ಕೂಡ ಡ್ಯಾನ್ಸ್ ಮಾಡುತ್ತಾರೆ.

ಅಮೋಲ್ ಅವರು ಇನ್​ಸ್ಟಾಗ್ರಾಂ ಖಾತೆಯನ್ನೂ ಹೊಂದಿದ್ದು ಸುಮಾರು 25 ಸಾವಿರ ಫಾಲೋವರ್​ಗಳನ್ನು ಹೊಂದಿದ್ದಾರೆ. ತಮ್ಮ ರಜಾದಿನಗಳಂದು ಮಕ್ಕಳು, ಅಕ್ಕ-ತಂಗಿಯರ ಮಕ್ಕಳ ಜೊತೆ ಡ್ಯಾನ್ಸ್ ಮಾಡುತ್ತಾ ಆ ವಿಡಿಯೋಗಳನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವುದು ಅಮೋಲ್ ಅವರ ಹೊಸ ಹವ್ಯಾಸ. ಅಮೋಲ್ ಅವರ ಡ್ಯಾನ್ಸ್​ನ ವಿಡಿಯೋಗಳಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ.

ಇದನ್ನೂ ಓದಿ: Viral Video: ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲೇ ಯೋಗಾಸನ ಮಾಡಿದ ಯುವತಿ; ಶಾಕಿಂಗ್ ವಿಡಿಯೋ ಇಲ್ಲಿದೆ

Viral Video: ಶಾಸಕನ ಕಾಲಿಗೆ ಶೂ ಹಾಕಿ, ಲೇಸ್ ಕಟ್ಟಿದ ಸರ್ಕಾರಿ ನೌಕರರು; ವೈರಲ್ ವಿಡಿಯೋಗೆ ಭಾರೀ ಟೀಕೆ

( Viral Video: Mumbai Police becomes social media sensation with viral dance video in Instagram)

Published On - 4:56 pm, Sat, 7 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ