Viral Video: ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮೂವರ ಮೇಲೆ ಅಚಾನಕ್ಕಾಗಿ ಬಿತ್ತು ಮರದ ರೆಂಬೆ

ಆಗಾಗ ರಸ್ತೆ ಅಪಘಾತಗಳ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತವೆ. ಇಂತಹ ಅಪಘಾತಗಳನ್ನು ನೋಡಿದಾಗ ತಮ್ಮ ಸುರಕ್ಷತೆಯನ್ನು  ಹೇಗೆ ಮಾಡಿಕೊಳ್ಳಬೇಕೆಂಬ ಕಿವಿಮಾತು ಸಿಕ್ಕಂತಾಗುತ್ತದೆ.

Viral Video: ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮೂವರ ಮೇಲೆ ಅಚಾನಕ್ಕಾಗಿ ಬಿತ್ತು ಮರದ ರೆಂಬೆ
ಮರ
Follow us
ನಯನಾ ರಾಜೀವ್
|

Updated on: May 31, 2023 | 12:47 PM

ಆಗಾಗ ರಸ್ತೆ ಅಪಘಾತಗಳ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತವೆ. ಇಂತಹ ಅಪಘಾತಗಳನ್ನು ನೋಡಿದಾಗ ತಮ್ಮ ಸುರಕ್ಷತೆಯನ್ನು  ಹೇಗೆ ಮಾಡಿಕೊಳ್ಳಬೇಕೆಂಬ ಕಿವಿಮಾತು ಸಿಕ್ಕಂತಾಗುತ್ತದೆ. ಇನ್ನೇನು ಮಳೆಗಾಲ ಶುರುವಾಗುತ್ತಿದೆ, ಪ್ರತಿ ನಗರಗಳಲ್ಲೂ ಸಡಿಲಗೊಂಡಿರುವ ಮರಗಳು ಇದ್ದೇ ಇರುತ್ತವೆ, ಹಾಗಾಗಿ ಜನರು ತಮ್ಮ ಸುರಕ್ಷತೆಯಲ್ಲಿ ತಾವಿರಬೇಕು ಎನ್ನುವ ಸಂದೇಶವನ್ನು ಈ ವಿಡಿಯೋ ನೀಡುತ್ತದೆ.

ಇದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸ್ಕೂಟಿಯಲ್ಲಿ ಹೋಗುತ್ತಿದ್ದ ಮೂವರು ಯುವಕರು ಹಠಾತ್ ಅಪಘಾತಕ್ಕೆ ಬಲಿಯಾಗಿರುವುದನ್ನು ಕಾಣಬಹುದು. ಎಲ್ಲರನ್ನೂ ಅಚ್ಚರಿಗೊಳಿಸುವ ಈ ವಿಡಿಯೋ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದ್ದು ಎಂದು ಹೇಳಲಾಗುತ್ತಿದೆ.

ಇದರಲ್ಲಿ ರಸ್ತೆ ಬದಿಯಲ್ಲಿದ್ದ ಮರದಿಂದ ಅದರ ಕೊಂಬೆ ಇದ್ದಕ್ಕಿದ್ದಂತೆ ಬೀಳುತ್ತಿರುವುದು ಕಂಡು ಬಂದಿದೆ. ಆ ಸಮಯದಲ್ಲಿ ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಮೂವರ ತಲೆಯ ಮೇಲೆ ಬೀಳುತ್ತದೆ. ಇದರಿಂದ ಸ್ಕೂಟಿ ಸವಾರಿ ಮಾಡುತ್ತಿದ್ದ ಮೂವರು ಯುವಕರು ಕೆಳಗೆ ಬಿದ್ದಿದ್ದಾರೆ, ಇದನ್ನು ನೋಡಿದ ಸ್ಥಳೀಯರು ತಕ್ಷಣ ಮುಂದೆ ಓಡಿ ಬಂದು ಮರದ ಕೊಂಬೆಯಿಂದ ಅವರನ್ನು ಹೊರತೆಗೆಯುತ್ತಿರುವುದು ಕಂಡುಬಂದಿದೆ.

ಮತ್ತಷ್ಟು ಓದಿ: Video: ಚಲಿಸುತ್ತಿರುವ ಕಾರಿನ ಮೇಲೆ ಪುಷ್​-ಅಪ್ಸ್, ಮದ್ಯಪಾನ, ನೃತ್ಯ : ಪ್ರಕರಣ ದಾಖಲಿಸಿ ದಂಡ ವಿಧಿಸಿದ ಪೊಲೀಸರು

ಮರದ ಕೊಂಬೆ ಬಿದ್ದು ಅವಘಡ ಪೊಲೀಸರು ಸದಾ ಟ್ರಾಫಿಕ್ ನಿಯಮ ಪಾಲಿಸುವಂತೆ ಸಲಹೆ ನೀಡುತ್ತಾರೆ, ಇದೇ ವೇಳೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಮೂವರು ಯುವಕರು ಹೆಲ್ಮೆಟ್ ಧರಿಸದೇ ಇರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದು ಸಾಕಷ್ಟು ಅಪಾಯಕಾರಿಯಾಗಬಹುದು. ಮಳೆಗಾಲದ ಆರಂಭವಾಗುತ್ತಿದ್ದು,   ಬೀಸುತ್ತಿರುವ ಬಿರುಗಾಳಿಯಿಂದಾಗಿ ಏಕಾಏಕಿ ಮರದ ರೆಂಬೆಗಳು ತುಂಡಾಗಿ ಬೀಳುವ ಘಟನೆಗಳು ಹೆಚ್ಚಾಗುತ್ತಿವೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ರಸ್ತೆಯಲ್ಲಿ ವಾಹನಗಳಲ್ಲಿ ಸಂಚರಿಸುವಾಗ ಸಂಚಾರ ನಿಯಮಗಳನ್ನು ಪಾಲಿಸುವ ಮಹತ್ವದ ಬಗ್ಗೆ ಜನರು ಚರ್ಚೆ ನಡೆಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್