AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಸ್ಪತ್ರೆಯಲ್ಲಿ ಡ್ಯಾನ್ಸ್ ಮಾಡಿದ​ ವಿಡಿಯೋದಿಂದ ಸಂಕಷ್ಟಕ್ಕೆ ಸಿಲುಕಿದ ನರ್ಸ್

ತೆಲಂಗಾಣದಲ್ಲಿ ನರ್ಸ್ ಒಬ್ಬರು ಸ್ವಾತಂತ್ರ್ಯ ದಿನಾಚರಣೆಯಂದು ಸೀರೆಯುಟ್ಟು ಆಸ್ಪತ್ರೆಯೊಳಗೆ ಡ್ಯಾನ್ಸ್ ಮಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಆ ನರ್ಸ್​ಗೆ ಕೆಲಸ ಕಳೆದುಕೊಳ್ಳುವ ಆತಂಕ ಕೂಡ ಎದುರಾಗಿದೆ.

Viral Video: ಆಸ್ಪತ್ರೆಯಲ್ಲಿ ಡ್ಯಾನ್ಸ್ ಮಾಡಿದ​ ವಿಡಿಯೋದಿಂದ ಸಂಕಷ್ಟಕ್ಕೆ ಸಿಲುಕಿದ ನರ್ಸ್
ತೆಲಂಗಾಣದ ನರ್ಸ್ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 23, 2021 | 1:07 PM

Share

ಹೈದರಾಬಾದ್: ಕಳೆದ ವರ್ಷ ಕೊರೊನಾದಿಂದ ಆಸ್ಪತ್ರೆ ಹಾಗೂ ಕೊವಿಡ್ ಸೆಂಟರ್​​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳನ್ನು ಮನರಂಜನೆ ಮಾಡಲೆಂದು ವೈದ್ಯರು ಪಿಪಿಇ ಕಿಟ್ ಧರಿಸಿ ಕೊರೊನಾ ರೋಗಿಗಳ ನಡುವಲ್ಲೇ ಡ್ಯಾನ್ಸ್​ ಮಾಡಿದ ಕೆಲವು ವಿಡಿಯೋಗಳು ವೈರಲ್ ಆಗಿದ್ದವು. ಪಿಪಿಇ ಕಿಟ್ ಧರಿಸಿ ದಿನವಿಡೀ ಹೆಣಗಾಡುವ ವೈದ್ಯರು ತಮ್ಮ ಕಷ್ಟವನ್ನು ಬದಿಗಿಟ್ಟು ಈ ರೀತಿ ಡ್ಯಾನ್ಸ್ ಮಾಡಿದ್ದಕ್ಕೆ ಕೆಲವರಿಂದ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಇನ್ನು ಕೆಲವರು ವಿರೋಧ ಕೂಡ ವ್ಯಕ್ತಪಡಿಸಿದ್ದರು. ಇದೀಗ ತೆಲಂಗಾಣದಲ್ಲಿ ನರ್ಸ್ ಒಬ್ಬರು ಸ್ವಾತಂತ್ರ್ಯ ದಿನಾಚರಣೆಯಂದು ಸೀರೆಯುಟ್ಟು ಆಸ್ಪತ್ರೆಯೊಳಗೆ ಡ್ಯಾನ್ಸ್ ಮಾಡಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಆ ನರ್ಸ್​ಗೆ ಕೆಲಸ ಕಳೆದುಕೊಳ್ಳುವ ಆತಂಕ ಕೂಡ ಎದುರಾಗಿದೆ.

ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೇರಳ ಮೂಲದ ನರ್ಸ್ ಒಬ್ಬರು ಸೀರೆಯುಟ್ಟು ಡ್ಯಾನ್ಸ್ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಂಗಲಪಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಂಟ್ರಾಕ್ಟ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ರಜನಿಗೆ ಈಗ ಮೇಲಧಿಕಾರಿಗಳಿಂದ ನೋಟಿಸ್ ಜಾರಿಯಾಗಿದೆ. ಈ ರೀತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದೊಳಗೆ ನೃತ್ಯ ಮಾಡಲು ಅನುಮತಿ ನೀಡಿದ್ದಕ್ಕೆ ಹಾಗೂ ನೃತ್ಯ ಮಾಡಿದ್ದಕ್ಕೆ ಆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಮತ್ತು ನರ್ಸ್ ರಜನಿ ಇಬ್ಬರಿಗೂ ನೋಟಿಸ್ ನೀಡಲಾಗಿದೆ.

ತನ್ನ ಸೋಷಿಯಲ್ ಮೀಡಿಯಾ ಪೇಜಿನಲ್ಲಿ ಅಪ್​ಡೇಟ್ ಮಾಡಲು ನರ್ಸ್ ರಜನಿ ಸುಮ್ಮನೆ ಈ ಡ್ಯಾನ್ಸ್ ಮಾಡಿದ್ದಾಗಿಯೂ, ಇದಕ್ಕೆ ಯಾವುದೇ ಅನುಮತಿ ಪಡೆದಿಲ್ಲವೆಂದೂ ಆ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಅನೇಕರು ಈ ವಿಡಿಯೋ ಮಾಡಿದ್ದಕ್ಕೆ ನೋಟಿಸ್ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತನ್ನ ಸಹೋದ್ಯೋಗಿಗಳ ಜೊತೆ ಡ್ಯಾನ್ಸ್ ಮಾಡಿ ಎಂಜಾಯ್ ಮಾಡಿದ ಆ ನರ್ಸ್​ಗೆ ನೋಟಿಸ್ ನೀಡಿದ್ದು ಸರಿಯಲ್ಲ ಎಂದು ಅಲ್ಲಿನ ನರ್ಸ್​ಗಳು ಸೇರಿದಂತೆ ಸೋಷಿಯಲ್ ಮೀಡಿಯಾದಲ್ಲೂ ಅನೇಕರು ವಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಕೆಗೆ ನೀಡಲಾಗಿರುವ ನೋಟಿಸ್ ಅನ್ನು ಹಿಂಪಡೆಯುವ ಸಾಧ್ಯತೆಯೂ ಇದೆ. ನೆಟ್ಟಿಗರು ಈ ವಿಡಿಯೋಗೆ ತೆಲಂಗಾಣದ ಐಟಿ ಸಚಿವ ಕೆ. ತಾರಕ ರಾಮರಾವ್ ಅವರನ್ನೂ ಟ್ಯಾಗ್ ಮಾಡಿ, ಆಕೆಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Viral Video: ಒಂದು ಜಿಂಕೆಗಾಗಿ 6 ಸಿಂಹಗಳ ಕಿತ್ತಾಟ; ಭಯಾನಕ ವಿಡಿಯೋ ವೈರಲ್

Viral Video: 22 ಅಡಿ ಉದ್ದದ ಹಾವನ್ನು ಹೆಗಲ ಮೇಲೆ ಹಾಕಿಕೊಂಡು ಹೋದ ವ್ಯಕ್ತಿ; ಮೈ ಜುಂ ಎನಿಸುವ ವಿಡಿಯೋ ಇಲ್ಲಿದೆ

(Viral Video of Telangana Nurse Dancing on Duty at Health Care Center Lands Her in Trouble)

Published On - 1:03 pm, Mon, 23 August 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ