AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ದಿನ ವಧು-ವರರ ಜೊತೆ ವೇದಿಕೆಯಲ್ಲಿ ಡ್ಯಾನ್ಸ್​ ಮಾಡಿದ ಮುದ್ದು ನಾಯಿ; ವಿಡಿಯೋ ವೈರಲ್

ಈ ವಿಡಿಯೋ ನೋಡಿದ ಶ್ವಾನಪ್ರಿಯರು ಈ ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಂ ಪೇಜಿನಲ್ಲೂ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ಅಪ್​ಲೋಡ್ ಆದ ಒಂದೇ ದಿನದಲ್ಲಿ 1 ಲಕ್ಷಕ್ಕೂ ಹೆಚ್ಚು ವ್ಯೂಗಳನ್ನು ಪಡೆದಿದೆ.

Viral Video: ಮದುವೆ ದಿನ ವಧು-ವರರ ಜೊತೆ ವೇದಿಕೆಯಲ್ಲಿ ಡ್ಯಾನ್ಸ್​ ಮಾಡಿದ ಮುದ್ದು ನಾಯಿ; ವಿಡಿಯೋ ವೈರಲ್
TV9 Web
| Edited By: |

Updated on: Mar 25, 2022 | 6:37 PM

Share

ಇಂಟರ್ನೆಟ್​ನಲ್ಲಿ ಒಮ್ಮೆ ಕಣ್ಣಾಡಿಸಿದರೆ ಸಾಕು… ಖುಷಿ ಕೊಡುವ, ಭಾವುಕರನ್ನಾಗಿ ಮಾಡುವ ಸಾಕಷ್ಟು ವಿಡಿಯೋಗಳು ಕಾಣಸಿಗುತ್ತವೆ. ಅದರಲ್ಲೂ ನೀವು ಪ್ರಾಣಿಪ್ರಿಯರಾಗಿದ್ದರಂತೂ ಕೇಳೋದೇ ಬೇಡ. ಪ್ರಾಣಿಗಳ ಕುರಿತ ಅದೆಷ್ಟೋ ವಿಡಿಯೋಗಳು ನಮ್ಮ ಕಣ್ಣಾಲಿಗಳನ್ನು ಒದ್ದೆ ಮಾಡುತ್ತವೆ. ನಿಮಗೆ ನಾಯಿ, ಬೆಕ್ಕುಗಳೆಂದರೆ ಇಷ್ಟವಿದ್ದರೆ ತಪ್ಪದೆ ಈ ವಿಡಿಯೋ ನೋಡಿ. ನೀವು ಪ್ರಾಣಿ ಪ್ರೇಮಿಯಾಗಿದ್ದರೆ, ನಿಮ್ಮ ಮದುವೆಯ ದಿನದಂದು (Wedding Day) ನಿಮ್ಮ ಮುದ್ದಿನ ನಾಯಿಯನ್ನು ಹಿಡಿದುಕೊಂಡು ನೀವು ಕೂಡ ಈ ವಿಡಿಯೋದಂತೆ ಮಾಡಲು ಬಯಸಬಹುದು. ನವವಿವಾಹಿತ ವಧು-ವರರು ತಮ್ಮ ಮದುವೆಯ ದಿನದಂದು ತಮ್ಮ ಮುದ್ದಿನ ಗೋಲ್ಡನ್ ರಿಟ್ರೀವರ್‌ ನಾಯಿಯೊಂದಿಗೆ ನೃತ್ಯ ಮಾಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ (Social Media) ವೈರಲ್ ಆಗಿದೆ. ಈ ಸುಂದರವಾದ ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಶೇರ್ ಮಾಡಲಾಗಿದೆ.

ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ವಧು-ವರರು ಎಡ್ ಶೀರನ್ ಅವರ ಥಿಂಕಿಂಗ್ ಔಟ್ ಲೌಡ್‌ಗೆ ನೃತ್ಯ ಮಾಡುವುದನ್ನು ಕಾಣಬಹುದು. ಅವರ ಜೊತೆಗೆ ಅವರ ಸಾಕು ನಾಯಿ ಕೂಡ ನೃತ್ಯ ಮಾಡಿದೆ. ಈ ವಿಡಿಯೋವನ್ನು ಮಿಸ್ ಮಾಡದೆ ನೋಡಿ. ನೃತ್ಯದ ಕೊನೆಯಲ್ಲಿ, ವಧು ಮತ್ತು ವರರು ತಮ್ಮ ಮುದ್ದಿನ ನಾಯಿಯ ಕೆನ್ನೆಯ ಮೇಲೆ ಮುತ್ತು ಕೊಡುತ್ತಾರೆ. ಈ ಮುದ್ದಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ಈ ವಿಡಿಯೋ ನೋಡಿದ ಶ್ವಾನಪ್ರಿಯರು ಈ ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಂ ಪೇಜಿನಲ್ಲೂ ಶೇರ್ ಮಾಡಿಕೊಂಡಿದ್ದಾರೆ. ನನಗೂ ನನ್ನ ನಾಯಿಯ ಜೊತೆ ನನ್ನ ಮದುವೆಯ ದಿನ ಇದೇ ರೀತಿ ಡ್ಯಾನ್ಸ್​ ಮಾಡಬೇಕು, ನನ್ನ ಮದುವೆಯ ವೇಳೆ ನನ್ನ ನಾಯಿ ಕೂಡ ನಮ್ಮ ಜೊತೆಗಿರಬೇಕು ಎಂಬ ಆಸೆಯಿದೆ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ಈ ವಿಡಿಯೋ ಅಪ್​ಲೋಡ್ ಆದ ಒಂದೇ ದಿನದಲ್ಲಿ 1 ಲಕ್ಷಕ್ಕೂ ಹೆಚ್ಚು ವ್ಯೂಗಳನ್ನು ಪಡೆದಿದೆ.

ಇದನ್ನೂ ಓದಿ: Viral Video: ವೇಗವಾಗಿ ಬರುತ್ತಿದ್ದ ರೈಲಿನ ಎದುರು ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಪ್ರಾಣ ಉಳಿಸಿದ ಪೊಲೀಸ್; ವಿಡಿಯೋ ವೈರಲ್

Viral Video: ಸೇಬು, ಚಿಕ್ಕು, ಬಾಳೆಹಣ್ಣು ಹಾಕಿ ಟೀ ಮಾಡಿದ ಚಾಯ್​ವಾಲ; ವಿಡಿಯೋ ನೋಡಿ ನೆಟ್ಟಿಗರು ಸುಸ್ತು!

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್