Viral Video: ಚಲಿಸುತ್ತಿದ್ದ ರೈಲಿಗೆ ಹತ್ತುವಾಗ ಜಾರಿ ಬಿದ್ದ ವ್ಯಕ್ತಿ; ಕೂಡಲೇ ಎಂಟ್ರಿ ಕೊಟ್ಟ ಆಪದ್ಬಾಂಧವ

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿಯೊಬ್ಬರು ರಕ್ಷಣೆ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಚಲಿಸುತ್ತಿದ್ದ ರೈಲಿಗೆ ಹತ್ತುವಾಗ ಜಾರಿ ಬಿದ್ದ ವ್ಯಕ್ತಿ; ಕೂಡಲೇ ಎಂಟ್ರಿ ಕೊಟ್ಟ ಆಪದ್ಬಾಂಧವ
ರೈಲಿನಿಂದ ಕಾಲು ಜಾರಿ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿImage Credit source: RPF India
Follow us
TV9 Web
| Updated By: Rakesh Nayak Manchi

Updated on:Sep 12, 2022 | 3:47 PM

ತಮ್ಮ ಜೀವವನ್ನು ಲೆಕ್ಕಿಸದೆ ರೈಲು ಹತ್ತಿದರೆ ಸಾಕು ಎಂಬ ಮನಸ್ಥಿತಿಯಿಂದ ಕೆಲವು ಪ್ರಯಾಣಿಕರು ರೈಲು ಚಲಿಸುತ್ತಿರುವಾಗಲೇ ಹತ್ತುತ್ತಾರೆ. ಇದರಿಂದ ಅಲ್ಲೊಂದು ಇಲ್ಲೊಂದು ಅವಗಢಗಳು ಸಂಬವಿಸುತ್ತಿರುತ್ತವೆ. ಇದಕ್ಕೆ ಸಂಬಂಧಿಸಿದ ಅನೇಕ ವಿಡಿಯೋಗಳು ಈ ಹಿಂದೆ ವೈರಲ್ ಆಗಿದ್ದವು. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಚಲಿಸುತ್ತಿರುವ ರೈಲಿ ಹಿಂಬದಿ ಬೋಗಿ ಹತ್ತಲು ಮುಂದಾದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದಾಗ ಪೊಲೀಸ್ ಸಿಬ್ಬಂದಿ ರಕ್ಷಣೆ ಮಾಡುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ.

ಪೂರ್ಣಗಿರಿ ಜನಶತಾಬ್ದಿ ರೈಲು ನಿಲ್ದಾಣದಿಂದ ಹೊರಟಿದೆ. ಈ ವೇಳೆ ರೈಲು ಹತ್ತಲು ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ. ಇನ್ನೇನು ಕೊನೆಯ ಬೋಗಿಯೂ ತಪ್ಪಿಬಿಡುತ್ತದೆ ಎಂದು ಅವಸರವಾಗಿ ಹತ್ತಿದ್ದಾರೆ. ಈ ವೇಳೆ ಕಾಲು ಜಾರಿ ಫ್ಲಾಟ್​ಫಾರ್ಮ್​ಗೆ ಬಿದಿದ್ದು, ರೈಲು ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಸಹಾಯಕ ಸಬ್​ಇನ್ಸ್ಪೆಕ್ಟರ್, ಕೂಡಲೇ ಅವರನ್ನು ಎಳೆದು ರಕ್ಷಣೆ ಮಾಡಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಯ ಪಾಲಿಗೆ ಆಪದ್ಬಾಂಧವನಾಗಿ ಪೊಲೀಸ್ ಸಿಬ್ಬಂದಿ ರಾಜೇಂದ್ರ ಸಿಂಗ್ ಅವರು ಬಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಶ್ಲಾಘಿಸಿದ ಆರ್​ಪಿಎಫ್, ಎಎಸ್​ಐ ರಾಜೇಂದ್ರ ಸಿಂಗ್ ಅವರು ದುರಂತವೊಂದನ್ನು ತಪ್ಪಿಸಿದರು, ಗಾಜಿಯಾಬಾದ್ ರೈಲ್ವೇ ನಿಲ್ದಾಣದಲ್ಲಿ ಚಲಿಸುವ ರೈಲಿನೊಂದಿಗೆ ಹತ್ತುತ್ತಿರುವಾಗ ಜಾರಿಬಿದ್ದ ಪ್ರಯಾಣಿಕನಿಗೆ ಹೊಸ ಜೀವನ ನೀಡಿದರು ಎಂದು ಹೇಳಿದ್ದಾರೆ. ಸದ್ಯ ವೈರಲ್ ಆಗುತ್ತಿರುವ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Mon, 12 September 22

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ