ಶಾಕಿಂಗ್ ವಿಡಿಯೋ; ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ; ಗಾಳಿಯಲ್ಲಿ ಹಾರಿ ಬಿದ್ದ ದಂಪತಿ

ಪುಣೆಯಲ್ಲಿ ಆಘಾತಕಾರಿ ಅಪಘಾತವೊಂದು ನಡೆದಿದ್ದು, ಈ ವಿಡಿಯೋ ಎಲ್ಲರನ್ನೂ ಬೆಚ್ಚಿಬೀಳಿಸುವಂತಿದೆ. ಪುಣೆಯ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ದಂಪತಿ ಪ್ರಯಾಣಿಸುತ್ತಿದ್ದ ಬೈಕ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಗಾಳಿಯಲ್ಲಿ ಹಾರಿದ ದಂಪತಿ ನೆಲಕ್ಕೆ ಅಪ್ಪಳಿಸಿದ್ದಾರೆ.

ಶಾಕಿಂಗ್ ವಿಡಿಯೋ; ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ; ಗಾಳಿಯಲ್ಲಿ ಹಾರಿ ಬಿದ್ದ ದಂಪತಿ
ಸಾಂದರ್ಭಿಕ ಚಿತ್ರ
Follow us
|

Updated on: Jul 20, 2024 | 11:09 AM

ಮುಂಬೈ: ಮಹಾರಾಷ್ಟ್ರದ ಜನನಿಬಿಡ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ದಂಪತಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಹೈವೇಯಲ್ಲಿ ವೇಗವಾಗಿ ಬರುತ್ತಿದ್ದ ಕಾರು ಬೈಕ್​ಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಘಟನೆಯು ಪ್ರದೇಶದ ಭದ್ರತಾ ಕ್ಯಾಮೆರಾದಲ್ಲಿ ದಾಖಲಾಗಿದೆ. ಇದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಘಟನೆಯ ದೃಶ್ಯಾವಳಿಗಳು ಪುಣೆಯ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಗುರುವಾರ ದಂಪತಿಯ ಬೈಕ್​ಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು, ನೆಲಕ್ಕೆ ಅಪ್ಪಳಿಸಿದೆ.

ಇದನ್ನೂ ಓದಿ: Shocking Video: ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಟೆರೇಸ್‌ನಿಂದ ನೇತಾಡಿಸಿದ ಯುವಕ; ಶಾಕಿಂಗ್ ವಿಡಿಯೋ ವೈರಲ್

ಆ ದಂಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ