Video: ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕೆಲಸಗಾರರು; ಶಾಕಿಂಗ್ ವಿಡಿಯೊ ವೈರಲ್​

ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ಕೆಲಸಗಾರರು ರಕ್ಷಿಸಿದ್ದಾರೆ. ಶಾಕಿಂಗ್​ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Video: ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕೆಲಸಗಾರರು; ಶಾಕಿಂಗ್ ವಿಡಿಯೊ ವೈರಲ್​
ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕೆಲಸಗಾರ
Follow us
TV9 Web
| Updated By: shruti hegde

Updated on:Nov 16, 2021 | 12:24 PM

ಚಲಿಸುತ್ತಿರುವ ರೈಲು ಹತ್ತಲು ಹೋಗಿ ಅದೆಷ್ಟೋ ಅವಘಡಗಳು ಸಂಭವಿಸಿರುವುದನ್ನು ನಾವು ಈ ಹಿಂದೆ ಕೇಳಿದ್ದೆವೆ. ಕೆಲವು ದೃಶ್ಯಗಳನ್ನು ನೋಡಿದಾಕ್ಷಣ ಒಮ್ಮೆಲೆ ಮೈ ಜುಂ ಅನ್ನುವುದಂತೂ ಸತ್ಯ. ಅಷ್ಟು ಭಯಾನಕವಾಗಿರುತ್ತವೆ ಕೆಲವು ದೃಶ್ಯಗಳು. ಇದೀಗ ವೈರಲ್​ ಆಗಿರುವ ವಿಡಿಯೊ ಕೂಡಾ ಅಂಥದ್ದೇ! ಚಲಿಸುತ್ತಿದ್ದ ರೈಲು (Train) ಹತ್ತಲು ಹೋಗಿ ಪ್ರಯಾಣಿಕನು ಜಾರಿ ಬಿದ್ದಿದ್ದಾನೆ. ರೈಲು ಮತ್ತು ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದ ಪ್ರಯಾಣಿಕನನ್ನು (Passenger) ಕೆಲಸಗಾರರು ರಕ್ಷಿಸಿದ್ದಾರೆ. ನವೆಂಬರ್ 14ರಂದು ಕಲ್ಯಾಣ್​ ರೈಲ್ವೆ ನಿಲ್ದಾಣದಲ್ಲಿ (Railway station) ನಡೆದ ಈ ಘಟನೆ ಸಿಸಿಟಿಯಲ್ಲಿ (CCTV) ಸೆರೆಯಾಗಿದ್ದು, ವಿಡಿಯೊ ವೈರಲ್ (Viral Video) ಆಗಿದೆ.

ಈ ಘಟನೆಯ ದೃಶ್ಯವನ್ನು ಸೆಂಟ್ರಲ್ ರೈಲ್ವೆ ಟ್ವಿಟರ್​ನಲ್ಲಿ ಹಂಚಿಕೊಂಡಿದೆ. ಆಗಿನಿಂದ ವಿಡಿಯೊ ಫುಲ್ ವೈರಲ್ ಆಗಿದೆ. ಪ್ರಯಾಣಿಕನ ಜೀವ ಉಳಿಸಿದ್ದಕ್ಕಾಗಿ ನೆಟ್ಟಿಗರು ಕೆಲಸಗಾರನನ್ನು ಶ್ಲಾಘಿಸಿದ್ದಾರೆ. ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಇಂತಹ ಘಟನೆಯ ಬಗ್ಗೆ ಹಲವರು ಕಳವಳ ವ್ಯಕ್ತಿಪಡಿಸಿದ್ದಾರೆ.

ಅವರಸರವೇ ಅಪಘಾತಕ್ಕೆ ಕಾರಣ ಎಚ್ಚರಿಕೆಯಿಂದಿರಿ ಎಂದು ಹೇಳಿದ್ದಾರೆ. ರೈಲು ಹತ್ತುವಾಗ ಮತ್ತು ಇಳಿಯುವ ಸಂದರ್ಭದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಓರ್ವರು ಹೇಳಿದ್ದಾರೆ. ಕೆಲವು ಬಾರಿ ಅವಸರದಲ್ಲಿ ನಾವು ಅಪಾಯವನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಪ್ರತಿ ವಿಚಾರದಲ್ಲಿಯೂ ಸಹ ಎಚ್ಚರಿಕೆಯಿಂದ ಇರುವುದರ ಜೊತೆಗೆ ಜಾಗರೂಕರಾಗಿರುವುದು ಒಳ್ಳೆಯದು.

ಇದನ್ನೂ ಓದಿ:

Viral Video: ಹನುಮಂತನ ಪಾದಕ್ಕೆ ನಮಸ್ಕರಿಸಿ ದೇವಸ್ಥಾನದ ಹುಂಡಿಯ ಹಣವನ್ನೇ ಕದ್ದೊಯ್ದ ಕಳ್ಳ! ವಿಡಿಯೊ ವೈರಲ್​

Viral Video: ಆಕಾಶದಿಂದ ಕೆಳಗೆ ಬಿದ್ದ ಹಾವನ್ನು ನೋಡಿ ಜನ ಕಂಗಾಲು; ವೈರಲ್ ವಿಡಿಯೋ ಇಲ್ಲಿದೆ

Published On - 12:22 pm, Tue, 16 November 21

ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ