AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಸ್ಸಾಂನಲ್ಲಿ  ಪತ್ತೆಯಾಯಿತು 4 ಕಣ್ಣುಗಳಿರುವ  ಅಪರೂಪದ ಮೀನು; ವೈರಲ್‌ ವಿಡಿಯೋ

ಅಸ್ಸಾಂನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಇಂತಹ ಸ್ಥೀತಿಯಲ್ಲಿ ತುಂಬಿ ಹರಿಯುತ್ತಿದ್ದ ನೀರಿನಲ್ಲಿ ಕರೀಂಗಂಜ್‌ನ ವ್ಯಕ್ತಿಯೊಬ್ಬರು ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ 4 ಕಣ್ಣುಗಳಿರುವ ಅಪರೂಪದ ಮೀನೊಂದು ಬಲೆಗೆ ಬಿದ್ದಿದೆ. ಈ ಕುರಿತ ಸುದ್ದಿಯೊಂದು ಇದೀಗ ವೈರಲ್‌ ಆಗುತ್ತಿದೆ. 

Viral Video: ಅಸ್ಸಾಂನಲ್ಲಿ  ಪತ್ತೆಯಾಯಿತು 4 ಕಣ್ಣುಗಳಿರುವ  ಅಪರೂಪದ ಮೀನು; ವೈರಲ್‌ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jun 03, 2024 | 6:00 PM

Share

ರೀಮಲ್ ಚಂಡಮಾರುತದ ಪರಿಣಾಮ ಅಸ್ಸಾಂ ರಾಜ್ಯದಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತುಂಬಿ ಹರಿಯುತ್ತಿದ್ದ ನೀರಿನಲ್ಲಿ ಕರೀಗಂಜ್‌ ಜಿಲ್ಲೆಯ ವ್ಯಕ್ತಿಯೊಬ್ಬರು ಮೀನುಗಾರಿಕೆ ನಡೆಸುತ್ತಿದ್ದ  ಸಂದರ್ಭದಲ್ಲಿ 4 ಕಣ್ಣುಗಳು ಹಾಗೂ ಉದ್ದನೆಯ ಬೆನ್ನುಮೂಳೆಯನ್ನು ಹೊಂದಿರುವ ಅಪರೂಪದ ಮೀನೊಂದು ಬಲೆಗೆ ಬಿದ್ದಿದೆ. ಈ ಕುರಿತ ವಿಡಿಯೋವೊಂದನ್ನು  ಆಲ್‌ ಇಂಡಿಯಾ ರೇಡಿಯೋ ನ್ಯೂಸ್‌  ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಆಲ್‌ ಇಂಡಿಯಾ ರೇಡಿಯೋ ನ್ಯೂಸ್‌ (@airnewsalerts) ಈ ಅಪರೂಪದ ಮೀನಿನ ವಿಡಿಯೋವನ್ನು ಅಧೀಕೃತ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಕರೀಂಗಂಜ್‌ ಜಿಲ್ಲೆಯಲ್ಲಿ ಪ್ರವಾಹದ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅಪರೂಪದ ಜಾತಿಯ ಮೀನು ಪತ್ತೆಯಾಗಿದ್ದು, ಇದು ನಾಲ್ಕು ಕಣ್ಣುಗಳು ಹಾಗೂ ಉದ್ದನೆಯ ಬೆನ್ನೆಲುಬನ್ನು ಹೊಂದಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ವಿಡಿಯೋದಲ್ಲಿ ನಾಲ್ಕು ಕಣ್ಣುಗಳು ಹಾಗೂ ಉದ್ದವಾದ ಬೆನ್ನುಮೂಳೆಯನ್ನು ಹೊಂದಿರುವ  ಕಪ್ಪು ಮತ್ತು ಬಿಳಿ ಮಿಶ್ರಿತ ಬಣ್ಣದ ಅಪರೂಪದ  ಮೀನನ್ನು ಕಾಣಬಹುದು. ಪ್ರವಾಹದ ನೀರಿನಲ್ಲಿ ಬಂದ  ಈ ಅಪರೂಪದ ಜಾತಿಯ ಮೀನನ್ನು ನೋಡಲು ಹತ್ತಾರು ಜನರು ಅಲ್ಲಿ ನೆರೆದಿದ್ದರು.

ಇದನ್ನೂ ಓದಿ: ಇಲ್ಲಿ ಮಹಿಳೆಯರು ತಮ್ಮ ಬ್ರಾಗಳನ್ನು ಬೇಲಿಯಲ್ಲಿ ನೇತು ಹಾಕುವ ವಿಶಿಷ್ಟ ಸಂಪ್ರದಾಯ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 85.5 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಇದು ಕ್ರೋಕ್‌ ಫಿಶ್‌, ಈ ಮೀನುಗಳನ್ನು ಅಕ್ವೇರಿಯಂ ಶುಚಿಗೊಳಿಸಲು ಬಳಸಲಾಗುತ್ತದೆ ಎಂದು ಒಬ್ಬ ಬಳಕೆದಾರರು ಕಾಮೆಂಟ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!