Viral Video: ದೇವಸ್ಥಾನದ ಹೊರಗೆ ಬೆಂಕಿ ಹೊತ್ತಿಕೊಂಡು ಹೊಸ ರಾಯಲ್ ಎನ್​ಫೀಲ್ಡ್​ ಬೈಕ್​ ಸ್ಫೋಟ

ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಬೆಂಕಿ ಹೊತ್ತಿಕೊಂಡ ನಂತರ ಅದರ ಪೆಟ್ರೋಲ್ ಟ್ಯಾಂಕ್ ಸ್ಫೋಟಗೊಂಡಿದೆ. ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲಿ ನೆರೆದಿದ್ದ ಜನರು ಭಯಭೀತರಾಗಿ ಓಡಿದ್ದಾರೆ.

Viral Video: ದೇವಸ್ಥಾನದ ಹೊರಗೆ ಬೆಂಕಿ ಹೊತ್ತಿಕೊಂಡು ಹೊಸ ರಾಯಲ್ ಎನ್​ಫೀಲ್ಡ್​ ಬೈಕ್​ ಸ್ಫೋಟ
ರಾಯಲ್ ಎನ್​ಫೀಲ್ಡ್​ ಬೈಕ್​ಗೆ ಬೆಂಕಿ
Updated By: ಸುಷ್ಮಾ ಚಕ್ರೆ

Updated on: Apr 04, 2022 | 3:45 PM

ಹೈದರಾಬಾದ್: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ರಾಯಲ್ ಎನ್‌ಫೀಲ್ಡ್ (Royal Enfield) ಬೈಕ್​ಗೆ ಹಠಾತ್ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡ ಆಘಾತಕಾರಿ ವಿಡಿಯೋವನ್ನು (Shocking Video) ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ದೇವಾಲಯದ ಹೊರಗೆ ಜನರ ಗುಂಪು ಜಮಾಯಿಸಿರುವುದನ್ನು ನೋಡಬಹುದು. ಹೊಸ ಬೈಕ್ ಅನ್ನು ದೇವಸ್ಥಾನದ ಹೊರಗೆ ನಿಲ್ಲಿಸಲಾಗಿತ್ತು. ಅಷ್ಟರಲ್ಲಿ ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಎನ್‌ಡಿಟಿವಿ ವರದಿ ಪ್ರಕಾರ, ಬೈಕ್‌ನ ಮಾಲೀಕ ರವಿಚಂದ್ರ ಹೊಸ ವಾಹನವನ್ನು ಖರೀದಿಸಿದ ನಂತರ ಗುಂತಕಲ್ ಮಂಡಲದ ನೆಟ್ಟಿಕಂಟಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಲು ಮೈಸೂರಿನಿಂದ ತಡೆರಹಿತವಾಗಿ ಬೈಕ್ ಚಲಾಯಿಸಿದ್ದರು. ಅಲ್ಲಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಆಗ ಬೈಕ್​ಗೆ ಬೆಂಕಿ ಹೊತ್ತಿಕೊಂಡಿದೆ.

ಬೈಕ್‌ಗೆ ಬೆಂಕಿ ಹೊತ್ತಿಕೊಂಡ ನಂತರ ಅದರ ಪೆಟ್ರೋಲ್ ಟ್ಯಾಂಕ್ ಸ್ಫೋಟಗೊಂಡಿದೆ. ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲಿ ನೆರೆದಿದ್ದ ಜನರು ಭಯಭೀತರಾಗಿ ಓಡಿದ್ದಾರೆ. ನಂತರ ಹಲವರು ಬೈಕ್​ಗೆ ನೀರು ಹಾಕಿ ಬೆಂಕಿಯನ್ನು ಆರಿಸಿದ್ದಾರೆ. ಬೈಕ್​ಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಇನ್ನೂ ತಿಳಿದುಬಂದಿಲ್ಲ. ಅದೃಷ್ಟವಶಾತ್, ಯಾವುದೇ ಜೀವಹಾನಿ ವರದಿಯಾಗಿಲ್ಲ.

ಇದೇ ರೀತಿಯ ಘಟನೆಯಲ್ಲಿ ಕಳೆದ ವಾರ ತಮಿಳುನಾಡಿನ ವೆಲ್ಲೂರಿನಲ್ಲಿ ಚಾರ್ಜ್ ಮಾಡುವಾಗ ಎಲೆಕ್ಟ್ರಿಕ್ ಬೈಕ್ ಸ್ಫೋಟಗೊಂಡು ತಂದೆ-ಮಗಳು ಇಬ್ಬರೂ ಸಾವನ್ನಪ್ಪಿದ್ದರು.

ಇದನ್ನೂ ಓದಿ: Viral Video: ಬಾಯಾರಿದ ಕೋತಿಗೆ ನೀರು ಕುಡಿಸಿದ ಟ್ರಾಫಿಕ್ ಪೊಲೀಸ್; ಹೃದಯಸ್ಪರ್ಶಿ ವಿಡಿಯೋಗೆ ನೆಟ್ಟಿಗರ ಮೆಚ್ಚುಗೆ

Viral Video: ಪೊಲೀಸ್ ಅಧಿಕಾರಿಯ ಕುರ್ಚಿಯಲ್ಲಿ ಕುಳಿತು ಕೇಸ್ ಡೈರಿ ಕೇಳಿದ ಬಿಜೆಪಿ ಶಾಸಕ; ವಿಡಿಯೋ ವೈರಲ್